ಪುನೀತ್ ರಾಜ್ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ‘ಗಂಧದ ಗುಡಿ’ ಬಿಡುಗಡೆಗೆ ಸಜ್ಜಾಗಿದೆ. ಈ ಸಾಕ್ಷ್ಯಚಿತ್ರವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲು ಸಕಲ ಸಿದ್ಧತೆ ನಡೆದಿದೆ. ಇದು ಪುನೀತ್ ರಾಜ್ಕುಮಾರ್ ಅವರ ಕೊನೆಯ ಚಿತ್ರ. ಹಾಗಾಗಿ ಇದನ್ನು ವಿಶೇಷ ರೀತಿಯಲ್ಲಿ ಬರಮಾಡಿಕೊಳ್ಳಲು ಅಪ್ಪು ಅಭಿಮಾನಿಗಳು ಕಾದಿದ್ದಾರೆ.
ಅಕ್ಟೋಬರ್ 28ರಂದು ‘ಗಂಧದ ಗುಡಿ’ ರಿಲೀಸ್ ಆಗಲಿದೆ. ಇದಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ನೀಡಬೇಕು ಎಂದು ಫ್ಯಾನ್ಸ್ ಒತ್ತಾಯಿಸುತ್ತಿದ್ದಾರೆ. ಆ ಮೂಲಕ ಹೆಚ್ಚು ಜನರನ್ನು ಈ ಡಾಕ್ಯುಮೆಂಟರಿ ತಲುಪಲಿ ಎಂಬುದು ಅಭಿಮಾನಿಗಳ ಆಶಯ. ಅದಕ್ಕೂ ಮುನ್ನ ಅಕ್ಟೋಬರ್ 21ರಂದು ‘ಪುನೀತ ಪರ್ವ’ ಹೆಸರಿನಲ್ಲಿ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಅದಕ್ಕಾಗಿ ಅಭಿಮಾನಿಗಳು ಭಾರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಪ್ರೀ-ರಿಲೀಸ್ ಕಾರ್ಯಕ್ರಮವನ್ನು ತುಂಬ ಅದ್ದೂರಿಯಾಗಿ ಮಾಡಬೇಕು ಎಂದು ಫ್ಯಾನ್ಸ್ ರೆಡಿ ಆಗಿದ್ದಾರೆ. ಈ ಕುರಿತು ಮಾಹಿತಿ ನೀಡಲು ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಪುನೀತ್ ರಾಜ್ಕುಮಾರ್ ಸಮಾಧಿ ಬಳಿ ಸುದ್ದಿಗೋಷ್ಠಿ ನಡೆಸಿದ್ದಾರೆ. ‘ಪುನೀತ ಪರ್ವ’ ಕಾರ್ಯಕ್ರಮಕ್ಕಾಗಿ ತಮ್ಮ ಪ್ಲ್ಯಾನ್ ಏನು ಎಂಬುದನ್ನು ವಿವರಿಸಿದ್ದಾರೆ.
ಕರ್ನಾಟಕದ ಮೂಲೆ ಮೂಲೆಗಳಿಂದ ಅಪ್ಪು ಅಭಿಮಾನಿಗಳು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಬರಲಿದ್ದಾರೆ. 5 ಲಕ್ಷಕ್ಕೂ ಅಧಿಕ ಜನರು ಆಗಮಿಸುವ ಸಾಧ್ಯತೆ ಇದೆ. ಎಲ್ಲರಿಗೂ ಊಟ ಮತ್ತು ವಸತಿ ಸೌಕರ್ಯ ಕಲ್ಪಿಸಲು ಪ್ಲ್ಯಾನ್ ನಡೆಯುತ್ತಿದೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲೇ ಆಂಬ್ಯುಲೆನ್ಸ್ಗಳ ವ್ಯವಸ್ಥೆ ಮಾಡಲಾಗುತ್ತಿದೆ. ನವೆಂಬರ್ 1ರಂದು ಎಲ್ಲೆಡೆ ಕನ್ನಡದ ಧ್ವಜ ಹಾರಾಡಬೇಕು. ಅಪ್ಪು ಭಾವಚಿತ್ರ ಕೂಡ ರಾರಾಜಿಸುವಂತಾಗಲಿ ಎಂದು ಅಪ್ಪು ಅಭಿಮಾನಿಗಳು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಭಾರತೀಯ ಚಿತ್ರರಂಗದ ಅನೇಕ ಗಣ್ಯರು ಆಗಮಿಸಲಿದ್ದಾರೆ. ಅನೇಕ ಸೂಪರ್ ಸ್ಟಾರ್ಗಳಿಗೆ ಈಗಾಗಲೇ ಆಮಂತ್ರಣ ಪತ್ರಿಕೆ ತಲುಪಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧ್ಯಕ್ಷತೆ ವಹಿಸಿಕೊಳ್ಳಬೇಕು ಎಂದು ಡಾ. ರಾಜ್ಕುಮಾರ್ ಕುಟುಂಬದವರು ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಸಿಎಂ ಅವರನ್ನು ಭೇಟಿ ಮಾಡಿ, ಆಮಂತ್ರಣ ಪತ್ರಿಕೆ ಹಾಗೂ ಮನವಿ ಪತ್ರವನ್ನು ನೀಡಲಾಯಿತು.
ಕರ್ನಾಟಕದ ಅರಣ್ಯ ಸಂಪತ್ತು ಹಾಗೂ ವನ್ಯಜೀವಿಗಳ ಕುರಿತು ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಮೂಡಿಬಂದಿದೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್ ಕಂಡು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಅನೇಕ ಗಣ್ಯರು ಕೂಡ ಈ ಬಗ್ಗೆ ತಮ್ಮ ಪ್ರತಿಕ್ರಿಯೆ ತಿಳಿಸಿದ್ದಾರೆ.
ಬೆಂಗಳೂರು : ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಯಾರು ವಿನ್ನರ್ ಆಗಲಿದ್ದಾರೆ ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.…
ಇಂದೋರ್ : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡವನ್ನು 41ರನ್‌ಗಳಿಂದ…
ಮೈಸೂರು : ಕಳೆದ 7 ದಿನದಿಂದ ರಂಗಾಸಕ್ತರಿಗೆ ಹಾಗೂ ಸಾರ್ವಜನಿಕರಿಗೆ ಸಾಂಸ್ಕೃತಿಕ ರಸದೌತಣ ನೀಡಿದ್ದ 17ನೇ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ…
ಬೆಂಗಳೂರು : ಹಾಸನದಲ್ಲಿ ಜಾ.ದಳ ಪಕ್ಷದ ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ಜಾ.ದಳ ಮುಂದಾಗಿದೆ. ಜ.24ರಂದು…
ತಿ.ನರಸೀಪುರ : ವಿಬಿ ಜಿ ರಾಮ್ ಜಿ ಕಾಯ್ದೆ ರದ್ದಾಗಿ ಮನ್ರೇಗಾ ಮತ್ತೆ ಜಾರಿಯಾಗುವವರೆಗೆ ನಡೆಸುವ ಹೋರಾಟಕ್ಕೆ ಎಲ್ಲರೂ ಸಜ್ಜಾಗಬೇಕು…
ನಾಗಮಂಗಲ : ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ರೈತರು ಹೈನುಗಾರಿಕೆಯನ್ನು ಅವಲಂಬಿಸಿದ್ದು, ಜಾನುವಾರುಗಳ ಆರೋಗ್ಯದ ದೃಷ್ಟಿಯಿಂದ ಮಂಡ್ಯ ಜಿಲ್ಲೆಗೆ ಡಾ.ನಿರ್ಮಲಾನಂಧನಾಥ ಸ್ವಾಮೀಜಿಗಳ…