ಚಿತ್ರ ಮಂಜರಿ

ʼಗಂಧದ ಗುಡಿʼ ಸಾಕ್ಷಾಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲು ಪುನೀತ್‌ ಅಭಿಮಾನಿಗಳ ಒತ್ತಾಯ

ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಪ್ರಾಜೆಕ್ಟ್​ ‘ಗಂಧದ ಗುಡಿ’ ಬಿಡುಗಡೆಗೆ ಸಜ್ಜಾಗಿದೆ. ಈ ಸಾಕ್ಷ್ಯಚಿತ್ರವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲು ಸಕಲ ಸಿದ್ಧತೆ ನಡೆದಿದೆ. ಇದು ಪುನೀತ್​ ರಾಜ್​ಕುಮಾರ್​ ಅವರ ಕೊನೆಯ ಚಿತ್ರ. ಹಾಗಾಗಿ ಇದನ್ನು ವಿಶೇಷ ರೀತಿಯಲ್ಲಿ ಬರಮಾಡಿಕೊಳ್ಳಲು ಅಪ್ಪು ಅಭಿಮಾನಿಗಳು ಕಾದಿದ್ದಾರೆ.

ಅಕ್ಟೋಬರ್​ 28ರಂದು ‘ಗಂಧದ ಗುಡಿ’ ರಿಲೀಸ್​ ಆಗಲಿದೆ. ಇದಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ನೀಡಬೇಕು ಎಂದು ಫ್ಯಾನ್ಸ್​ ಒತ್ತಾಯಿಸುತ್ತಿದ್ದಾರೆ. ಆ ಮೂಲಕ ಹೆಚ್ಚು ಜನರನ್ನು ಈ ಡಾಕ್ಯುಮೆಂಟರಿ ತಲುಪಲಿ ಎಂಬುದು ಅಭಿಮಾನಿಗಳ ಆಶಯ. ಅದಕ್ಕೂ ಮುನ್ನ ಅಕ್ಟೋಬರ್​ 21ರಂದು ‘ಪುನೀತ ಪರ್ವ’ ಹೆಸರಿನಲ್ಲಿ ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಯಲಿದೆ. ಅದಕ್ಕಾಗಿ ಅಭಿಮಾನಿಗಳು ಭಾರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಪ್ರೀ-ರಿಲೀಸ್​ ಕಾರ್ಯಕ್ರಮವನ್ನು ತುಂಬ ಅದ್ದೂರಿಯಾಗಿ ಮಾಡಬೇಕು ಎಂದು ಫ್ಯಾನ್ಸ್​ ರೆಡಿ ಆಗಿದ್ದಾರೆ. ಈ ಕುರಿತು ಮಾಹಿತಿ ನೀಡಲು ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಪುನೀತ್ ರಾಜ್​ಕುಮಾರ್​ ಸಮಾಧಿ ಬಳಿ ಸುದ್ದಿಗೋಷ್ಠಿ ನಡೆಸಿದ್ದಾರೆ. ‘ಪುನೀತ​ ಪರ್ವ’ ಕಾರ್ಯಕ್ರಮಕ್ಕಾಗಿ ತಮ್ಮ ಪ್ಲ್ಯಾನ್ ಏನು ಎಂಬುದನ್ನು ವಿವರಿಸಿದ್ದಾರೆ.

ಕರ್ನಾಟಕದ ಮೂಲೆ ಮೂಲೆಗಳಿಂದ ಅಪ್ಪು ಅಭಿಮಾನಿಗಳು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಬರಲಿದ್ದಾರೆ. 5 ಲಕ್ಷಕ್ಕೂ ಅಧಿಕ ಜನರು ಆಗಮಿಸುವ ಸಾಧ್ಯತೆ ಇದೆ. ಎಲ್ಲರಿಗೂ ಊಟ ಮತ್ತು ವಸತಿ ಸೌಕರ್ಯ ಕಲ್ಪಿಸಲು ಪ್ಲ್ಯಾನ್​ ನಡೆಯುತ್ತಿದೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲೇ ಆಂಬ್ಯುಲೆನ್ಸ್​ಗಳ ವ್ಯವಸ್ಥೆ ಮಾಡಲಾಗುತ್ತಿದೆ. ನವೆಂಬರ್​ 1ರಂದು ಎಲ್ಲೆಡೆ ಕನ್ನಡದ ಧ್ವಜ ಹಾರಾಡಬೇಕು. ಅಪ್ಪು ಭಾವಚಿತ್ರ ಕೂಡ ರಾರಾಜಿಸುವಂತಾಗಲಿ ಎಂದು ಅಪ್ಪು ಅಭಿಮಾನಿಗಳು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

‘ಪುನೀತ್​ ಪರ್ವ’ ಕಾರ್ಯಕ್ರಮಕ್ಕೆ ಭಾರತೀಯ ಚಿತ್ರರಂಗದ ಅನೇಕ ಗಣ್ಯರು ಆಗಮಿಸಲಿದ್ದಾರೆ. ಅನೇಕ ಸೂಪರ್​ ಸ್ಟಾರ್​ಗಳಿಗೆ ಈಗಾಗಲೇ ಆಮಂತ್ರಣ ಪತ್ರಿಕೆ ತಲುಪಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧ್ಯಕ್ಷತೆ ವಹಿಸಿಕೊಳ್ಳಬೇಕು ಎಂದು ಡಾ. ರಾಜ್​ಕುಮಾರ್​ ಕುಟುಂಬದವರು ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಸಿಎಂ ಅವರನ್ನು ಭೇಟಿ ಮಾಡಿ, ಆಮಂತ್ರಣ ಪತ್ರಿಕೆ ಹಾಗೂ ಮನವಿ ಪತ್ರವನ್ನು ನೀಡಲಾಯಿತು.

ಕರ್ನಾಟಕದ ಅರಣ್ಯ ಸಂಪತ್ತು ಹಾಗೂ ವನ್ಯಜೀವಿಗಳ ಕುರಿತು ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಮೂಡಿಬಂದಿದೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ ಕಂಡು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಅನೇಕ ಗಣ್ಯರು ಕೂಡ ಈ ಬಗ್ಗೆ ತಮ್ಮ ಪ್ರತಿಕ್ರಿಯೆ ತಿಳಿಸಿದ್ದಾರೆ.

andolana

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

7 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

8 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

9 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

11 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

11 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

15 hours ago