ಚಿತ್ರ ಮಂಜರಿ

ಆಸ್ಕರ್‌ ಪ್ರಶಸ್ತಿಗೆ ಆಯ್ಕೆಯಾಗಿದ್ದ ಚೆಲ್ಲೋ ಶೋ ಸಿನಿಮಾ ಚಿತ್ರದ ಬಾಲ ನಟ ರಾಹುಲ್‌ ನಿಧನ

ಈ ಬಾರಿ ಭಾರತದಿಂದ ಆಸ್ಕರ್ ಅಂಗಳಕ್ಕೆ ಅಧಿಕೃತ ಎಂಟ್ರಿ ಕೊಟ್ಟಿರುವ ಚೆಲ್ಲೋ ಶೋ ಸಿನಿಮಾದ ಬಾಲನಟ ರಾಹುಲ್ ಕೊಲಿ ನಿಧನರಾಗಿದ್ದಾರೆ. ಆಸ್ಕರ್ ಗೆ ಎಂಟ್ರಿ ಕೊಟ್ಟ ಸಂಭ್ರಮದಲ್ಲಿದ್ದ ಚೆಲ್ಲೋ ಶೋ ತಂಡಕ್ಕೆ ರಾಹುಲ್ ನಿಧನ ಆಘಾತ ತಂದಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ರಾಹುಲ್ ಇಂದು (ಅಕ್ಟೋಬರ್ 11) ಅಹಮದಾಬಾದ್ ನಲ್ಲಿ ಇಹಲೋಕತ್ಯಜಿಸಿದರು. ಈ ನೋವಿನ ಸುದ್ದಿ ತಿಳಿದು ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ. ಚೆಲ್ಲೋ ಶೋ ಸಿನಿಮಾದಲ್ಲಿ 10 ವರ್ಷದ ರಾಹುಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ಬಿಡುಗಡೆಯಾಗುವ ಮೊದಲೇ ರಾಹುಲ್ ಬಾರದ ಲೋಕಕ್ಕೆ ಹೋಗಿರುವುದು ದುರಂತ.

ಮೂಲಗಳ ಪ್ರಕಾರ ರಾಹುಲ್​ ರಕ್ತ ವಾಂತಿ ಮಾಡಿಕೊಂಡಿದ್ದ. ನಂತರ ಜ್ವರ ಕೂಡ ಬಂದಿತ್ತು. ಬಳಿಕ ಆತ ಕೊನೆಯುಸಿರೆಳೆದ. ಆತನ ನಿಧನದಿಂದ ಇಡೀ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ರಾಹುಲ್ ನಟನೆಯ ಚೆಲ್ಲೋ ಶೋ ಸಿನಿಮಾ ಅಕ್ಟೋಬರ್ 14ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನವೇ ರಾಹುಲ್​ ಕೊಲಿ ನಿಧನ ಹೊಂದಿದ್ದಾನೆ.

ಮಗನನ್ನು ಕಳೆದುಕೊಂಡ ನೋವಿನಲ್ಲೇ ರಾಹುಲ್​ ಕೊಲಿ ಕುಟುಂಬದವರು ಚೆಲ್ಲೋ ಶೋ ಚಿತ್ರ ನೋಡುವುದಾಗಿ ತಿಳಿಸಿದ್ದಾರೆ. ರಾಹುಲ್​ ತಂದೆ ಆಟೋ ಓಡಿಸಿ ಜೀವನ ಸಾಗಿಸುತ್ತಿದ್ದಾರೆ. ಈ ಸಿನಿಮಾ ರಿಲೀಸ್​ ಆದ ಬಳಿಕ ನಮ್ಮ ಬದುಕು ಬದಲಾಗುತ್ತದೆ ಎಂದು ಮಗ ಹೇಳಿದ್ದ ಎಂದು ರಾಹುಲ್ ತಂದೆ ಮಗನ ಮಾತು ನೆನಪಿಸಿಕೊಂಡು ಕಣ್ಣೀರು ಹಾಕುತ್ತಿದ್ದಾರೆ. ಅಂದಹಾಗೆ ಈ ಸಿನಿಮಾದಲ್ಲಿ ರಾಹುಲ್, ಮನು ಎನ್ನುವ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ನಾಯಕನ ಕ್ಲೋಸ್ ಪ್ರೆಂಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಚೆಲ್ಲೋ ಶೋ ಸಿನಿಮಾಗೆ ಪ್ಯಾನ್​ ನಳಿನ್​ ನಿರ್ದೇಶನ ಮಾಡಿದ್ದಾರೆ. ಚೆಲ್ಲೋ ಶೋ ಎಂದರೆ ಕೊನೆಯ ಸಿನಿಮಾ ಶೋ ಎಂದರ್ಥ. ನಿರ್ದೇಶಕರ ಬಾಲ್ಯದ ಅನುಭವಗಳನ್ನೇ ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಸಿನಿಮಾ ಬಗ್ಗೆ ಅಪಾರ ಆಸಕ್ತಿ ಹೊಂದಿರುವ 9ರ ಪ್ರಾಯದ ಬಾಲಕನ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಈಗಾಗಲೇ ಅನೇಕ ಚಿತ್ರೋತ್ಸವಗಳಲ್ಲಿ ಚೆಲ್ಲೋ ಶೋ ಸಿನಿಮಾ ಪ್ರದರ್ಶನ ಕಂಡಿದೆ.

ಅಂದಹಾಗೆ ಈ ಸಿನಿಮಾವನ್ನು ಲಾಕ್ ಡೌನ್‌ಗೂ ಮೊದಲೇ ಚಿತ್ರೀಕರಣ ಮಾಡಲಾಗಿದೆ. ಹಳ್ಳಿ ಮತ್ತು ರೈಲ್ವೇ ಜಂಕ್ಷನ್​ನಲ್ಲಿ ಈ ಸಿನಿಮಾದ ಶೂಟಿಂಗ್​ ನಡೆದಿದೆ. ಸ್ಥಳೀಯ ಬಾಲಕರೇ ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ. ಸದ್ಯ ರಿಲೀಸ್ ನ ಖುಷಿಯಲ್ಲಿದ್ದ ಸಿನಿಮಾತಂಡಕ್ಕೆ ರಾಹುಲ್ ಹಠಾತ್ ನಿಧನ ತೀವ್ರ ದುಃಖ ತಂದಿದೆ.

andolana

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

5 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

12 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

12 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

12 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

12 hours ago