ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ‘ ಗುರುವೈಭವೋತ್ಸವ’ ವಿಜಭೃಣೆಯಿಂದ ನಡೆಯುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಗುತ್ತಿದೆ. ತುಂಗಾ ತೀರದಲ್ಲಿ ನೆಲೆಸಿರುವ ಶ್ರೀರಾಘವೇಂದ್ರ ಸ್ವಾಮಿಗಳು 402ನೇ ಪಟ್ಟಾಭಿಷೇಕೋತ್ಸವ ಮತ್ತು 428ನೇ ವರ್ಧಂತಿ ಉತ್ಸವ ನಡೆಯುತ್ತಿದ್ದು, ಫೆಬ್ರವರಿ 21ರಿಂದ ಆರಂಭ ಗುರುವೈಭೋತ್ಸವ ಮೂರನೇ ದಿನವಾದ ನಿನ್ನೆ ಅದ್ಧೂರಿಯಾಗಿ ಜರುಗಿತ್ತು.
ರಚಿತಾ ರಾಮ್ಗೆ ಗುರುವೈಭೋತ್ಸವ ಪ್ರಶಸ್ತಿಬೆಳಿಗ್ಗೆ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದವನಕ್ಕೆ ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಪೂಜೆಗಳು ನೇರವೇರಿಸಿದ ನಂತರದಲ್ಲಿ, ನವರತ್ನ ಖಚಿತ ಕವಚದಿಂದ ವಿವಿಧ ಬಣ್ಣಗಳ ಹೂಗಳಿಂದ ಅಲಂಕಾರಿಸಲಾಗಿತ್ತು. ಇದಾದ ನಂತರದಲ್ಲಿ ಶ್ರೀಮಠದ ಪೀಠಾಧಿಪತಿ ಸುಭುದೇಂಧ್ರ ತೀರ್ಥರು ಮೂಲ ರಾಮದೇವರ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಪೂಜೆ- ಪುನಸ್ಕಾರ ನೇರವೇರಿಸಿದರು.
ಸಂಜೆ ಮಠದ ಆವರಣದ ಮುಂಭಾಗದ ಯೋಗೇಂದ್ರ ಸಭಾಮಂಟಪದಲ್ಲಿ ಸಂಗೀತ ಕಾರ್ಯಕ್ರಮ ಜರುಗಿತು. ಅಲ್ಲದೇ ಸ್ಯಾಂಡಲ್ವುಡ್ನ ಡಿಂಪಲ್ ಕ್ವೀನ್ ಎಂದು ಫೇಮಸ್ ಆಗಿರುವ ರಚಿತ್ ರಾಮ್ಗೆ ಗುರುವೈಭವೋತ್ಸವ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಜೊತೆಗೆ ನವರಸನಾಯಕ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್, ಆಂಧ್ರ ಶಾಸಕ ಕಟಸನಿ ರಾಮಭೂಪಾಲ್, ಬಳ್ಳಾರಿಯ ಶ್ರೀರಾಘವೇಂದ್ರ ಅಸ್ಟತೋತ್ತರ ಸಂಘದವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಸಾಲಿಗ್ರಾಮ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕ ಚಂದ್ರು ಆರೋಪ ಸಾಲಿಗ್ರಾಮ: ದಲಿತ ಮತ್ತು ಹಿಂದುಳಿದ…
ಕೃಷ್ಣ ಸಿದ್ದಾಪುರ ಸಂತೆಮಾಳದಲ್ಲಿ ತರಕಾರಿ ಜೊತೆ ಸಾಂಕ್ರಾಮಿಕ ರೋಗವೂ ಉಚಿತ ಕ್ರಮಕೈಗೊಳ್ಳದ ಗ್ರಾ.ಪಂ. ವಿರುದ್ಧ ಸಾರ್ವಜನಿಕರ ಅಸಮಾಧಾನ ಸಿದ್ದಾಪುರ: ಸಾರ್ವಜನಿಕ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಘನತೆಯ ಬದುಕು ಬಯಸುವ ಮನುಷ್ಯನ ಹಕ್ಕನ್ನು ಎತ್ತಿ ಹಿಡಿದಿರುವ ಸಿಎಂ ಸಿದ್ದರಾಮಯ್ಯ ಬ್ರಿಟಿಷರ ಗುಲಾಮಗಿರಿಯಲ್ಲಿದ್ದ ಭಾರತಕ್ಕೆ…
ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ವಿಚಾರದಲ್ಲಿ ನಡೆದ ಘರ್ಷಣೆ ಸಂದರ್ಭದಲ್ಲಿ ಗುಂಡೇಟಿನಿಂದ ಕಾಂಗ್ರೆಸ್ ಕಾರ್ಯಕರ್ತ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿವಿ ಅಶೋಕಪುರಂ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಿತಿ ೨,೦೦೦ ಇದ್ದ…