ಚಿತ್ರ ಮಂಜರಿ

ಫಿಲ್ಮ್‌ ಕ್ರಿಟಿಕ್ಸ್‌ ಸರ್ಕಲ್‌ ಅವಾರ್ಡ್‌ ಮುಡಿಗೇರಿಸಿಕೊಂಡ ರಾಜಮೌಳಿ

ಟಾಲಿವುಡ್ ಖ್ಯಾತ ನಿರ್ದೇಶಕ ಜಕ್ಕಣ್ಣ ಎಂದೇ ಖ್ಯಾತಿಗಳಿಸಿರುವ ಎಸ್ ಎಸ್ ರಾಜಮೌಳಿ ಸಾರಥ್ಯದಲ್ಲಿ ಬಂದ ಆರ್ ಆರ್ ಆರ್ ಸಿನಿಮಾದ ಹವಾ ಇನ್ನೂ ಕಡಿಮೆ ಆಗಿಲ್ಲ. ಟಾಲಿವುಡ್ ಸ್ಟಾರ್ ಕಲಾವಿದರಾದ ರಾಮ್ ಚರಣ್ ಮತ್ತು ಜೂ ಎನ್ ಟಿ ಆರ್ ನಟನೆಯ ಆರ್ ಆರ್ ಆರ್ ಸಿನಿಮಾ ರಿಲೀಸ್ ಆಗಿ ತಿಂಗಳಗಳೇ ಆಗಿವೆ. ಇನ್ನೂ ಕೂಡ ಆರ್ ಆರ್ ಆರ್ ಸದ್ದು ಮಾಡುತ್ತಿದ್ದಾರೆ. ದೇಶ-ವಿದೇಶದಲ್ಲಿ ರಾಜಮೌಳಿ ಸಿನಿಮಾ ಅಬ್ಬರಿಸುತ್ತಿದೆ. ಅನೇಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಇದೀಗ ರಾಜಮೌ ಮತ್ತೊಂದು ಪ್ರಶಸ್ತಿ ಗೆದ್ದು ಬೀಗಿದ್ದಾರೆ. ನ್ಯೂಯಾರ್ಕ್ ಕ್ರಿಟಿಕ್ಸ್ ಸರ್ಕಲ್ ಅವಾರ್ಡ್‌ನಲ್ಲಿ ರಾಜಮೌಳಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

ಹಾಲಿವುಡ್‌ನ ಘಟಾನುಘಟಿ ನಿರ್ದೇಶಕರ ಜೊತೆ ಸ್ಪರ್ಧಿಸಿ ರಾಜಮೌಳಿ ಈ ಪ್ರಶಸ್ತಿ ಗೆದ್ದಿದ್ದಾರೆ. ಆರ್ ಆರ್ ಆರ್ ನಿರ್ದೇಶಕರ ವಿರುದ್ಧ ಸ್ವೀವನ್ ಸ್ಪೀಲ್ಬರ್ಗ್, ಡರೆನ್ ಅರೋನೊಫ್ಸ್ಕಿ, ಸರಾ ಪೊಲ್ಲಿ, ಗಿನಾ ಪ್ರಿನ್ಸ್-ಬ್ಲೈಥ್ವುಡ್ ಸ್ಪರ್ಧೆಯಲ್ಲಿದ್ದರು. ಎಲ್ಲರನ್ನೂ ಹಿಂದಿಕ್ಕಿ ರಾಜಮೌಳಿ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ. RRR ಭಾರತೀಯ ಸಿನಿಮಾರಂಗದಲ್ಲಿ ಸದ್ದು ಮಾಡಿದ ಸಿನಿಮಾ. ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿರುವ ಈ ಸಿನಿಮಾ ಭಾರತ ಮಾತ್ರವಲ್ಲದೇ ಬೇರೆ ಬೇರೆ ದೇಶಗಳಲ್ಲೂ ಭರ್ಜರಿ ಪ್ರದರ್ಶನ ಕಂಡಿತ್ತು. ಅತೀ ಹೆಚ್ಚು ಕಲೆಕ್ಷನ್ ಮಾಡಿರುವ ಭಾರತೀಯ ಸಿನಿಮಾಗಳ ಲಿಸ್ಟ್‌ನಲ್ಲಿರುವ ಆರ್ ಆರ್ ಆರ್ ತೆಲುಗು ಜೊತೆಗೆ ತಮಿಳು, ಕನ್ನಡ, ಮಲಯಾಳಂ, ಹಿಂದಿ ಸೇರಿದಂತೆ ಅನೇಕ ಭಾಷೆಯಲ್ಲಿ ರಿಲೀಸ್ ಆಗಿದೆ.

ಇತ್ತೀಚಿಗಷ್ಟೆ ಆರ್ ಆರ್ ಆರ್ ಸಿನಿಮಾ ಜಪಾನ್‌ನಲ್ಲಿ ರಿಲೀಸ್ ಆಗಿದ್ದು ಅಲ್ಲಿಯೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಇಡೀ ತಂಡ ಜಪಾನ್ ಪ್ರವಾಸಕ್ಕೆ ತೆರಳಿತ್ತು. ಸಿನಿಮಾ ಪ್ರಚಾರ ಮಾಡಿ ಜಪಾನ್ ಅಭಿಮಾನಿಗಳಿಂದ ಪ್ರೀತಿ ಗಿಟ್ಟಿಸಿಕೊಂಡಿದ್ದರು. ಸದ್ಯ ಆರ್ ಆರ್ ಆರ್ ಸಿನಿಮಾ ಆಸ್ಕರ್ ಅವಾರ್ಡ್‌ಗಾಗಿ ಕಾಯುತ್ತಿದೆ. ಆರ್ ಆರ್ ಆರ್ ಸಿನಿಮಾ ಆಸ್ಕರ್‌ಗೆ ಎಂಟ್ರಿ ಕೊಟ್ಟಿದ್ದು ಪ್ರಶಸ್ತಿ ಗೆದ್ದು ಬೀಗುತ್ತಾ ಎಂದು ಕಾದು ನೋಡಬೇಕಿದೆ.

ಸೋಲಿಲ್ಲದ ಸರದಾರ ರಾಜಮೌಳಿ ಬಾಹುಬಲಿ ಸಿನಿಮಾ ಬಳಿಕ ಆರ್ ಆರ್ ಆರ್ ಮೂಲಕ ಅಭಿಮಾನಿಗಳ ಮುಂದೆ ಬಂದರು. ಆರ್ ಆರ್ ಆರ್ ಸಿನಿಮಾ ಕೂಡ ದೊಡ್ಡ ಮಟ್ಟದಲ್ಲಿ ಯಸ್ಸಸ್  ಕಂಡಿತು. ಸ್ವಾತಂತ್ರ್ಯಾ ಹೋರಾಟಗಾರರಾಗಿದ್ದ ಅಲ್ಲೂರಿ ಸೀತರಾಮ ರಾಜು ಮತ್ತು ಕೊಮರಾಮ್ ಭೀಮ್ ಅವರ ಬಗ್ಗೆ ಇರುವ ಸಿನಿಮಾ ಇದಾಗಿದೆ. ಮಾರ್ಚ್ ತಿಂಗಳಲ್ಲಿ ರಿಲೀಸ್ ಆಗಿದ್ದ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಬರೊಬ್ಬರಿ 1200 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

andolana

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

4 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

4 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

6 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

8 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

11 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

11 hours ago