ಚಿತ್ರ ಮಂಜರಿ

ಕಿಚ್ಚನ ಹುಟ್ಟುಹಬ್ಬಕ್ಕೆ ಕನ್ನಡದಲ್ಲೇ ಶುಭ ಕೋರಿದ ರಾಜಸ್ಥಾನ್‌ ರಾಯಲ್ಸ್‌

ಬೆಂಗಳೂರು: ಕಿಚ್ಚ ಸುದೀಪ್ ಅವರು ಇಂದು (ಸೆಪ್ಟೆಂಬರ್ 2) ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೊವಿಡ್ ಕಾಟ ಜೋರಾಗಿತ್ತು. ಈ ಕಾರಣದಿಂದ ಕಿಚ್ಚನ ಬರ್ತ್​ಡೇ ಆಚರಿಸಲು ಸಾಧ್ಯವಾಗಿರಲಿಲ್ಲ. ಆದರೆ, ಈ ವರ್ಷ ಬರ್ತ್​​ಡೇ ಜೋರಾಗಿದೆ. ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಸುದೀಪ್​ಗೆ ನಾನಾ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ. ವಿವಿಧ ಊರುಗಳಲ್ಲಿ ಸುದೀಪ್​ ಫೋಟೋ ಹಾಗೂ ಕಟೌಟ್ ಹಾಕಿ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಜೊತೆಗೆ ಕ್ರಿಕೆಟ್​ನಲ್ಲೂ ಸಾಕಷ್ಟು ಹೆಸರು ಮಾಡಿರುವ ಕಿಚ್ಚನಿಗೆ ಐಪಿಎಲ್​ನ ಯಶಸ್ವಿ ಫ್ರಾಂಚೈಸಿಯಾದ ರಾಜಸ್ಥಾನ ರಾಯಲ್ಸ್ ತನ್ನ ಟ್ವಿಟರ್ ಖಾತೆಯಲ್ಲಿ ಜನ್ಮದಿನದ ಶುಭಾಶಯ ತಿಳಿಸಿದೆ.

49ನೇ ವಯಸ್ಸಿಗೆ ಕಾಲಿಟ್ಟಿರುವ ಅಭಿನಯ ಚಕ್ರವರ್ತಿ ಸುದೀಪ್​ಗೆ ಕನ್ನಡದಲ್ಲಿ ಜನ್ಮದಿನದ ಶುಭಾಶಯ ತಿಳಿಸಿರುವ ರಾಜಸ್ಥಾನ ರಾಯಲ್ಸ್ ತನ್ನ ಟ್ವೀಟ್​ನಲ್ಲಿ, ಸುದೀಪ್ ರಾಜಸ್ಥಾನ ರಾಯಲ್ಸ್ ತಂಡದ ಜೆರ್ಸಿ ಹಿಡಿದಿರುವ ಫೋಟೋ ಹಂಚಿಕೊಂಡಿದೆ. ಜೊತೆಗೆ ಟ್ವೀಟ್​ನ ಶೀರ್ಷಿಕೆಯಲ್ಲಿ, ಜನ್ಮದಿನದ ಶುಭಾಶಯಗಳು ದಂತಕಥೆ ಎಂದು ಬರದುಕೊಂಡಿದೆ.

ಸುದೀಪ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ನಂಟು ಇಂದು ನಿನ್ನೆಯದಲ್ಲ. ಈ ಹಿಂದೆಯೂ ರಾಜಸ್ಥಾನ ರಾಯಲ್ಸ್ ತಂಡ ಕಿಚ್ಚ ಸುದೀಪ್ ಬರ್ತ್​ ಡೇಗೆ ಶುಭಾಷಯಗಳನ್ನು ತಿಳಿಸಿತ್ತು. ಈ ಹಿಂದೆ ಕಿಚ್ಚನ ಜನ್ಮದಿನಕ್ಕೆ ಜೆರ್ಸಿಯೊಂದನ್ನು ರಾಜಸ್ಥಾನ ರಾಯಲ್ಸ್ ತಂಡ ಗಿಫ್ಟ್ ಆಗಿ ಕಳುಹಿಸಿಕೊಟ್ಟಿತ್ತು. ಜೊತೆಗೆ ವಿಶೇಷ ಸಂದೇಶವನ್ನು ಟ್ವೀಟ್​ನಲ್ಲಿ ಬರೆದುಕೊಂಡಿತ್ತು.

 

andolana

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

9 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

9 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

9 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

10 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

10 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

11 hours ago