ಚಿತ್ರ ಮಂಜರಿ

ರಶ್ಮಿಕಾ ಡೀಪ್‌ ಫೇಕ್‌ ವಿಡಿಯೋ ಬಗ್ಗೆ ಮಾತನಾಡಿದ ರಕ್ಷಿತ್‌ ಶೆಟ್ಟಿ

ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣಾ ಅವರ ಡೀಪ್‌ ಫೇಕ್‌ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಅಗಿತ್ತು. ಈ ಬಗ್ಗೆ ಹಲವು ತಾರೆಯರು ದನಿ ಎತ್ತಿದ್ದರು. ಇದು ಮತ್ತೆ ಮರುಕಳಿಸಬಾರದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಜಾಲತಾಣಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದರು.

ಇದೀಗ ಡೀಪ್‌ ಫೇಕ್‌ ಬಗ್ಗೆ ರಕ್ಷಿತ್‌ ಶೆಟ್ಟಿ ಸಂದರ್ಶನವೊಂದರಲ್ಲಿ ಮಾತನಾಡಿದ್ದು, ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು .ವಿಡಿಯೋ ವೈರಲ್‌ ಆಗುವ ಮೊದಲೇ ಅದಕ್ಕೆ ಕಡಿವಾಣ ಹಾಕುವ ಕೆಲಸ ಆಗಬೇಕು. ಇಂತಹ ಕೃತ್ಯಗಳಿಂದ ಏನು ಬೇಕಾದರೂ ಆಗಬಹುದು. ಸೂಕ್ತ ನಿಯಮಗಳೊಂದಿಗೆ ಇಂತಹ ಸಾಫ್ಟ್‌ವೇರ್ ಬರಬೇಕು. ಇಲ್ಲದಿದ್ದರೆ ಸಮಸ್ಯೆಗಳು ಕಟ್ಟಿಟ್ಟ ಬುತ್ತಿ ಎಂದಿದ್ದಾರೆ.

ಕೆಲ ದಿನಗಳ ಹಿಂದೆ ನಟಿ ರಶ್ಮಿಕಾ ಮಂದಣ್ಣ ಅವರು ತುಂಡುಡುಗೆ ಧರಿಸಿ ಲಿಫ್ಟ್‌ ಪ್ರವೇಶಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಅಸಲಿಗೆ ಜರಾ ಪಟೇಲ್‌ ಎಂಬ ಯುವತಿಯ ವಿಡಿಯೋಗೆ ರಶ್ಮಿಕಾ ಮಂದಣ್ಣ ಅವರ ಮುಖವನ್ನು ಡೀಪ್‌ ಫೇಕ್‌ ತಂತ್ರಜ್ಞಾನ ಬಳಸಿ ಮಾರ್ಪ್‌ ಮಾಡಲಾಗಿತ್ತು. ಈ ಕುರಿತು ಪತ್ರಕರ್ತ ಅಮಿತ್‌ ಫ್ಯಾಕ್ಟ್‌ ಚೆಕ್‌ ಮಾಡಿ ಇದು ಡೀಪ್‌ ಫೇಕ್‌ ವಿಡಿಯೋ ಎಂದು ಸ್ಪಷ್ಟನೆ ನೀಡಿದ್ದರು.

lokesh

Recent Posts

ಬೋನಿಗೆ ಬಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ. ಕಳೆದ…

3 mins ago

ನನಗೂ ಎಂಎಲ್‌ಸಿ ಸ್ಥಾನ ಕೊಡಿ : ರಕ್ತದಲ್ಲಿ ಸಹಿ ಹಾಕಿ ವರಿಷ್ಠರಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತ

ಮೈಸೂರು: ಎಂಎಲ್‌ಸಿ ಸ್ಥಾನಕ್ಕಾಗಿ ರಕ್ತದಲ್ಲಿ ಸಹಿ ಮಾಡಿ ಮನವಿ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬರು ತಮ್ಮ…

9 mins ago

ಓದುಗರ ಪತ್ರ:  ದೇವಾಲಯಗಳ ಬಳಿ ಪೊಲೀಸ್ ಗಸ್ತು ಹೆಚ್ಚಿಸಿ

ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…

3 hours ago

ನಂಜನಗೂಡು | ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ ; 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…

3 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…

3 hours ago

ಓದುಗರ ಪತ್ರ: ಸಬ್ ಅರ್ಬನ್ ಬಸ್ ನಿಲ್ದಾಣದ ಬಳಿ ಆಟೋ ಸಂಚಾರ ನಿಯಂತ್ರಿಸಿ

ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…

3 hours ago