ಚಿತ್ರ ಮಂಜರಿ

ಪ್ರೀತಿಯಿಂದ ತಮ್ಮ ಯಶಸ್ಸಿನ ಸರಳ ಸೂತ್ರಗಳನ್ನು ಹೇಳಲು ಹೊರಟಿದ್ದಾರೆ ನಟ ರಮೇಶ್ ಅರವಿಂದ್

ಬೆಂಗಳೂರು: ನಗರದ ಬಿ. ಪಿ. ವಾಡಿಯಾ ಸಭಾಂಗಣದಲ್ಲಿ ಸಾವಣ್ಣ ಪ್ರಕಾಶನ ಪ್ರಕಟಿಸಿರುವ ನಟ ರಮೇಶ್ ಅರವಿಂದ್ (Ramesh Aravind)  ಅವರ ‘ಪ್ರೀತಿಯಿಂದ ರಮೇಶ್ ಯಶಸ್ಸಿನ ಸರಳ ಸೂತ್ರಗಳು’ ಕೃತಿಯನ್ನು ಹಿರಿಯ ನಟ ಅನಂತ್ ನಾಗ್ (Ananth Nag) ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಬಾಲ್ಯದಲ್ಲಿ ನಮಗೆ ೩೦-೪೦ ಪುಟಗಳ ಸಣ್ಣ ಸಣ್ಣ ಕೈಪಿಡಿಗಳು ಸಿಗುತ್ತಿದ್ದವು. ಮನೆಗೆ ನೆಂಟರು ಬರುವಾಗ ವಿವೇಕಾನಂದ, ಪರಮಹಂಸರ ಕುರಿತ ಕೈಪಿಡಿಗಳನ್ನು ತರುತ್ತಿದ್ದರು. ಆ ಕೈಪಿಡಿಗಳಿಂದ ನಮಗೆ ಧಾರ್ಮಿಕ, ದೇವರ ಬಗ್ಗೆ ಮಾರ್ಗದರ್ಶನ ಸಿಗುತ್ತಿತ್ತು. ರಮೇಶ್ ಅವರ ಕೃತಿ ಕೂಡ ಹೆಚ್ಚು-ಕಡಿಮೆ ಅದೇ ಮಾದರಿಯಲ್ಲಿದೆ. ನೈತಿಕತೆಯ ಬಗ್ಗೆ ಉಪಯುಕ್ತ ತಿಳವಳಿಕೆ ನೀಡುವ ಈ ಪುಸ್ತಕ ಬರೆಯುವ ಮೂಲಕ ರಮೇಶ್ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ರಮೇಶ್ ಅರವಿಂದ ಅವರು, ಘಟನೆ, ಸನ್ನಿವೇಶಗಳನ್ನು ನೋಡಿದಾಗ ಅದನ್ನು ತನ್ನ ಹತ್ತಿರದವರ ಜೊತೆ ತಕ್ಷಣವೇ ಹೇಳಿಕೊಳ್ಳಬೇಕು ಎಂದು ಅನಿಸುವುದು ಮಾನವನ ಸಹಜ ಗುಣ. ಮಾತು ಕರಗತವಾಗಿರದಿದ್ದ ಕಾಲಘಟ್ಟದಲ್ಲಿಯೂ ಸಂಜ್ಞೆಗಳ ಮೂಲಕ ತನ್ನವರಿಗೆ ಮಾಹಿತಿಯನ್ನು ಮನುಷ್ಯ ತಿಳಿಸುತ್ತಿದ್ದ. ನಡೆದ ಘಟನೆಯಲ್ಲಿ ತನ್ನ ಪಾತ್ರವಿರದಿದ್ದರೂ ಹೇಳುವ ಸಂದರ್ಭದಲ್ಲಿ ತನ್ನನ್ನು ಸೇರಿಸಿಕೊಂಡು ವಿವರಿಸುತ್ತಿದ್ದ. ಇಂತಹ ಮಾನವ ಸಹಜ ಗುಣದ ಮುಂದುವರಿದ ಭಾಗವೇ ಬರವಣಿಗೆ. ನಾನು ನನ್ನ ಜೀವನದ ಅನುಭವಗಳನ್ನು ಮಕ್ಕಳಿಗೂ ಅರ್ಥವಾಗುವ ರೀತಿಯಲ್ಲಿ ಈ ಕೃತಿಯಲ್ಲಿ ಬರೆಯಲು ಯತ್ನಿಸಿದ್ದೇನೆ ಎಂದರು.

ಕನ್ನಡಪ್ರಭದ ಪುರವಣಿ ಸಂಪಾದಕ ಗಿರೀಶ್‌ರಾವ್ ಹತ್ವಾರ್ (ಜೋಗಿ) (Jogi) ಮಾತನಾಡಿ, ರಮೇಶ್ ಆವರಿಂದ ಒಂದು ಕೆಟ್ಟ ಮಾತು ಬರಬಹುದು ಎಂದು ಕಳೆದ ೨೫ ವರ್ಷದಿಂದ ಪತ್ರಕರ್ತರಾಗಿ ನಾವು ಕಾಯುತ್ತಿದ್ದೇವೆ.ಆದರೆ ಅವರದ್ದು ಸಕಾರಾತ್ಮಕ ದೃಷ್ಟಿಕೋನ. ಸದಾ ಅಧ್ಯಯನಶೀಲತೆ, ಹುಡುಕಾಟ, ಹೊಸತನದ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಅವರ ಈ ಗುಣ ಈ ಕೃತಿಯಲ್ಲಿ ಬಿಂಬಿತವಾಗಿದೆ ಎಂದು ಹೇಳಿದರು. ಝಿ ಕನ್ನಡದ ಬ್ಯುಸಿನೆಸ್ ಹೆಡ್ ರಾಘವೇಂದ್ರ ಹುಣಸೂರು (Raghavendra Hunsur) ವೇದಿಕೆಯಲ್ಲಿದ್ದರು. ಜಮೀಲ್ ಸಾವಣ್ಣ (Jameel) ಪ್ರಾಸ್ತಾವಿಕ ಮಾತು ಆಡಿದರು. ರಂಜನೀಕೀರ್ತಿ ನಿರೂಪಣೆ ಮಾಡಿದರು.

andolanait

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

16 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

17 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

18 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

19 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

22 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

22 hours ago