ಚಿತ್ರ ಮಂಜರಿ

ಈ ಬಗ್ಗೆ ನಾನು ಮೊದಲೇ ಪ್ರತಿಕ್ರಿಯಿಸಬೇಕಿತ್ತು, ಕೆಲವು ವಿಷಯಗಳು ನನಗೆ ತೊಂದರೆ ಕೊಡುತ್ತಿವೆ : ರಶ್ಮಿಕಾ ಮಂದಣ್ಣ

ಬೆಂಗಳೂರು : ರಶ್ಮಿಕ ಮಂದಣ್ಣ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಪಪ್ರಚಾರಗಳಿಂದ ನೊಂದಿರುವುದಾಗಿ ಹೇಳಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾದ ಪೋಸ್ಟ್ ಪ್ರಕಟಿಸಿರುವ ಅವರು, ರಚನಾತ್ಮಕ ಟೀಕೆಗಳನ್ನು ಸ್ವಾಗತಿಸುತ್ತೇನೆ. ಆದರೆ ಸುಳ್ಳು ಮತ್ತು ಸೃಷ್ಟೀಕೃತ ನಕಲಿ ಮಾಹಿತಿಗಳು ತಮ್ಮನ್ನು ಘಾಸಿ ಮಾಡಿವೆ ಎಂದು ಹೇಳಿಕೊಂಡಿದ್ದಾರೆ.
ಕೆಲವು ವಿಷಯಗಳು ನನಗೆ ತೊಂದರೆ ಕೊಡುತ್ತಿವೆ. ಸುಮಾರು ಒಂದು ವರ್ಷದಿಂದಲೂ ಮಾತನಾಡಲು ಸಾಧ್ಯ. ಈ ಬಗ್ಗೆ ನಾನು ವರ್ಷದ ಮೊದಲೇ ಪ್ರತಿಕ್ರಿಯಿಸಬೇಕಿತ್ತು ಎಂದಿದ್ದಾರೆ.
ನಾನು ವೃತ್ತಿ ಜೀವನ ಆರಂಭಿಸಿದ ದಿನದಿಂದಲೂ ನನ್ನನ್ನು ಪಂಚಿಂಗ್ ಬ್ಯಾಗಿಗೆ ಹಾಕಿ ಟ್ರೋಲರ್‍ಗಳು ತಮ್ಮ ಮನಸಿಗೆ ಬಂದಂತೆ ವರ್ತಿಸುತ್ತಿದ್ದಾರೆ. ಮುಕ್ತಾಯವಿಲ್ಲದಷ್ಟು ದ್ವೇಷವನ್ನು ನನ್ನ ವಿರುದ್ದ ಕಾರಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.
ನನ್ನ ಸುತ್ತಮುತ್ತ ಇರುವವರಿಗೆ, ನನ್ನ ಪ್ರೀತಿಸುವವರಿಗೆ, ನನ್ನ ಜೊತೆ ಕೆಲಸ ಮಾಡುವವರಿಗೆ ನಾನೇಂದು ಗೊತ್ತು. ಅವರು ನನ್ನನ್ನು ಒಪ್ಪಿಕೊಳ್ಳುತ್ತಾರೆ. ಮಂದೆಯೂ ನಾನು ನಿಮಗಾಗಿ ಉತ್ತಮವಾದುದನ್ನು ಕೊಡಲು ಕಠಿಣ ಶ್ರಮಪಡುತ್ತೇನೆ. ನಿಮ್ಮನ್ನು ಸಂತೋಷಪಡಿಸುವುದು, ಮತ್ತು ಉತ್ತಮ ನಾಳೆಗಳಿಗಾಗಿ ನಾನು ಕೆಲಸ ಮಾಡುವುದನ್ನು ಮುಂದುವರೆಸುತ್ತೇನೆ ಎಂದು ಹೇಳಿದ್ದಾರೆ.
ಟ್ರೋಲರ್‍ಗಳ ಹೊರತಾಗಿ ನನ್ನ ಗುರುತಿಸಿದವರು, ನನ್ನ ಪ್ರೀತಿಸಿದವರು ಸಾಕಷ್ಟು ಬೆಂಬಲ ನೀಡಿದ್ದಾರೆ. ಹಾಗಾಗಿ ಬಹಳ ದೀರ್ಘ ಕಾಲದಿಂದಲೂ ನಾನು ಟ್ರೋಲ್‍ಗಳನ್ನು ನಿರ್ಲಕ್ಷಿಸುತ್ತಾ ಬಂದೆ ಆದರೆ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಕೆಟ್ಟದಾಗಿ ಟ್ರೋಲ್ ಮಾಡಲು ಆರಂಭಿಸಿದ್ದಾರೆ. ನಾನು ಯಾರನ್ನು ಗೆಲ್ಲಲು ಬಯಸುವುದಿಲ್ಲ.
ರಚನಾತ್ಮಕ ಟೀಕೆಗಳನ್ನು ಸ್ವೀಕರಿಸುವ ಮೂಲಕ ನನ್ನನ್ನು ನಾನು ಸರಿಪಡಿಸಲು ಪ್ರಯತ್ನಿಸುತ್ತೇನೆ. ಆದರೆ ನಕಾರಾತ್ಮಕ ಮತ್ತು ದ್ವೇಷಪೂರಿತ ಟೀಕೆಗಳು ನನಗೆ ನೋವುಂಟು ಮಾಡಿವೆ ಎಂದಿದ್ದಾರೆ.

andolanait

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

6 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

7 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

7 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

8 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

8 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

12 hours ago