ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೇ ಬಾಲಿವುಡ್ನಲ್ಲೂ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಅವರು ಅಲ್ಲಿನ ಸ್ಟಾರ್ ಹೀರೋಗಳ ಜೊತೆ ತೆರೆ ಹಂಚಿಕೊಂಡಿದ್ದಾರೆ.
ನಟ ಶಾರುಖ್ ಖಾನ್ ಅವರು ಜವಾನ್ ಸಿನಿಮಾದ ಬಿಡುಗಡೆಗೆ ಸಕಲ ತಯಾರಿ ಮಾಡಿಕೊಂಡಿದ್ದಾರೆ. ಅವರು ಈಗ ಯಶಸ್ಸಿನ ಟ್ರ್ಯಾಕ್ನಲ್ಲಿ ಇದ್ದಾರೆ. ಪಠಾಣ್ ಸಿನಿಮಾ ಸೂಪರ್ ಹಿಟ್ ಆದ ಬಳಿಕ ಅವರಿಗೆ ಇದ್ದ ಬೇಡಿಕೆ ಹೆಚ್ಚಾಗಿದೆ.
ಅವರ ಜೊತೆ ಸಿನಿಮಾ ಮಾಡಬೇಕು ಎಂದು ಅನೇಕ ನಿರ್ಮಾಪಕರು ಕಾಯುತ್ತಿದ್ದಾರೆ. ಶಾರುಖ್ ಖಾನ್ ಜೊತೆ ತೆರೆ ಹಂಚಿಕೊಳ್ಳಬೇಕು ಎಂಬುದು ಬಹುತೇಕ ಎಲ್ಲ ನಟಿಯರ ಆಸೆ ಆಗಿರುತ್ತದೆ. ಈಗ ರಶ್ಮಿಕಾ ಮಂದಣ್ಣ ಅವರಿಗೆ ಅಂಥ ಅವಕಾಶ ಸಿಕ್ಕಿದೆ. ಆದರೆ ಇದು ಸಿನಿಮಾದಲ್ಲಿ ಅಲ್ಲ. ಬದಲಿಗೆ, ಜಾಹೀರಾತಿನಲ್ಲಿ ಶಾರುಖ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಅವರು ಸ್ಕ್ರೀನ್ ಶೇರ್ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಇದು ರಶ್ಮಿಕಾ ಅಭಿಮಾನಿಗಳಿಗೆ ಖುಷಿ ನೀಡಿದೆ.
ಯಶ್ ರಾಜ್ ಸ್ಟುಡಿಯೋದಲ್ಲಿ ಈ ಜಾಹೀರಾತಿನ ಶೂಟಿಂಗ್ ನಡೆದಿದೆ. ರಶ್ಮಿಕಾ ಮಂದಣ್ಣ ಮತ್ತು ಶಾರುಖ್ ಖಾನ್ ಅವರು ಜೊತೆಯಾಗಿ ಇದರಲ್ಲಿ ನಟಿಸಿದ್ದಾರೆ. ಶೀಘ್ರದಲ್ಲೇ ಈ ಜಾಹೀರಾತು ಬಿತ್ತರ ಆಗಲಿದೆ. ಈ ಹಿಂದೆ ರಶ್ಮಿಕಾ ಮಂದಣ್ಣ ಅವರು ವಿಕ್ಕಿ ಕೌಶಲ್ ಜೊತೆ ಒಂದು ಜಾಹೀರಾತಿನಲ್ಲಿ ನಟಿಸಿದ್ದರು. ಅದರ ಕಾನ್ಸೆಪ್ಟ್ ಆಕ್ಷೇಪಾರ್ಹವಾಗಿದೆ ಎಂದು ನೆಟ್ಟಿಗರು ತಕರಾರು ತೆಗೆದಿದ್ದರು. ಈಗ ಶಾರುಖ್ ಜೊತೆ ರಶ್ಮಿಕಾ ನಟಿಸಿದ ಜಾಹೀರಾತು ಹೇಗಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.
ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೇ ಬಾಲಿವುಡ್ನಲ್ಲೂ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಅವರು ಅಲ್ಲಿನ ಸ್ಟಾರ್ ಹೀರೋಗಳ ಜೊತೆ ತೆರೆ ಹಂಚಿಕೊಂಡಿದ್ದಾರೆ. ಅಮಿತಾಭ್ ಬಚ್ಚನ್ ಜೊತೆ ಗುಡ್ ಬೈ ಚಿತ್ರದಲ್ಲಿ ನಟಿಸುವ ಅವಕಾಶ ಅವರಿಗೆ ಸಿಕ್ಕಿತ್ತು. ಮಿಷನ್ ಮಜ್ನು ಚಿತ್ರದಲ್ಲಿ ಸಿದ್ದಾರ್ಥ್ ಮಲ್ಹೋತ್ರಾಗೆ ಜೋಡಿಯಾಗಿದ್ದ ರಶ್ಮಿಕಾ ಅವರು, ಅನಿಮಲ್ ಸಿನಿಮಾದಲ್ಲಿ ರಣಬೀರ್ ಕಪೂರ್ ಜೊತೆ ನಟಿಸಿದ್ದಾರೆ. ಆ ಸಿನಿಮಾ ಡಿಸೆಂಬರ್ 1ರಂದು ಬಿಡುಗಡೆ ಆಗಲಿದೆ.
ಶಾರುಖ್ ಖಾನ್ ನಟನೆಯ ಜವಾನ್ ಸಿನಿಮಾ ಸೆಪ್ಟೆಂಬರ್ 7ರಂದು ಬಿಡುಗಡೆ ಆಗಲಿದೆ. ಆ ಸಿನಿಮಾ ಮೇಲೆ ಅಭಿಮಾನಿಗಳ ಸಖತ್ ಭರವಸೆ ಇದೆ. ನಯನತಾರಾ, ವಿಜಯ್ ಸೇತುಪತಿ, ದೀಪಿಕಾ ಪಡುಕೋಣೆ ಮುಂತಾದ ಘಟಾನುಘಟಿಗಳು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಪ್ರಿವ್ಯೂ ವಿಡಿಯೋ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಅವರು ಜವಾನ್ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ರೆಡ್ ಚಿಲ್ಲೀಸ್ ಎಂಟರ್ಟೇನ್ಮೆಂಟ್ ಮೂಲಕ ಅದ್ದೂರಿಯಾಗಿ ಈ ಸಿನಿಮಾ ನಿರ್ಮಾಣ ಆಗಿದೆ.
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…
ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…
ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್ ಹಾಗೂ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…
ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್ ಹಬ್ಬವು ನಂಬಿಕೆಯೆಂಬ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…