ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸೌತ್ ಮತ್ತು ಬಾಲಿವುಡ್ ಎರಡೂ ಕಡೆ ರಶ್ಮಿಕಾ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಕನ್ನಡ ಸಿನಿಮಾರಂಗದಿಂದ ಬಣ್ಣದ ಲೋಕದ ಪಯಣ ಪ್ರಾರಂಭಿಸಿದ ಕಿರಿಕ್ ಸುಂದರಿ ಸದ್ಯ ತೆಲುಗು, ತಮಿಳು ಮತ್ತೆ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತೆಲುಗು ಸಿನಿಮಾರಂಗದಲ್ಲಿ ಸ್ಟಾರ್ ಆಗಿ ಹೊರಹೊಮ್ಮುತ್ತಿದ್ದಂತೆ ರಶ್ಮಿಕಾ ಇದೀಗ ಹಿಂದಿಯಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿ ಮುಂಬೈ, ಹೈದರಾಬಾದ್, ಚೆನ್ನೈ ಅಂತ ಸದಾ ಓಡಾಡುತ್ತಿರುತ್ತಾರೆ. ಈ ನಡುವೆ ರಶ್ಮಿಕಾ ಮಂಡಿನೋವಿನಿಂದ ಬಳಲುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದ ರಶ್ಮಿಕಾ ಇದೀಗ ಭಾರತದ ಟಾಪ್ ಆರ್ಥೋಪಿಡಿಕ್ ಭೇಟಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಆರ್ಥೋಪಿಡಿಕ್ ಅವರೇ ಬಹಿರಂಗ ಪಡಿಸಿದ್ದಾರೆ.
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಪುಷ್ಪ ನಟಿ ಸಮಯ ತೆಗೆದುಕೊಂಡು ವೈದ್ಯರನ್ನು ಭೇಟಿಯಾಗಿದ್ದಾರೆ. ಹೈದರಾಬಾದ್ ನಲ್ಲಿರುವ ಪ್ರಸಿದ್ಧ ಆರ್ಥೋಪಿಡಿಕ್ ಡಾ.ಗುರುವ ರೆಡ್ಡಿ ಅವರ ಆಸ್ಪತ್ರೆಯಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕಂಡಿದ್ದಾರೆ. ವೈದ್ಯರ ಪಕ್ಕ ನಿಂತು ಪೋಸ್ ನೀಡಿರುವ ರಶ್ಮಿಕಾ ಫೋಟೋ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ. ರಶ್ಮಿಕಾ ಅವರನ್ನು ಭೇಟಿಯಾದ ಬಗ್ಗೆ ಸ್ವತಃ ಡಾ.ಗುರುವ ರೆಡ್ಡಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ರಶ್ಮಿಕಾ ಮಂಡಿನೋವಿನಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಆತಂಕ ಪಡುವ ಅವಶ್ಯಕತೆ ಇಲ್ಲ, ಶೀಘ್ರದಲ್ಲೇ ಗುಣಮುಖ ಆಗುತ್ತಾರೆ ಎಂದು ವೈದ್ಯರು ಅಭಿಮಾನಿಗಳಿಗೆ ತಿಳಿಸಿದ್ದಾರೆ.
ಪ್ರಸಿದ್ಧ ಆರ್ಥೊ ರಶ್ಮಿಕಾ ಜೊತೆ ಫೋಟೋ ಶೇರ್ ಮಾಡಿ, ಶ್ರೀವಲ್ಲಿ ನನ್ನನ್ನು ಭೇಟಿಯಾಗಿದ್ದಾರೆ. ನಾನು ಅವರ ದೊಡ್ಡ ಅಭಿಮಾನಿ ಎಂದು ಹೇಳಿದ್ದಾರೆ. ಪುಷ್ಪ ಸಿನಿಮಾದಲ್ಲಿ ರಶ್ಮಿಕಾ ಪಾತ್ರ ತುಂಬಾ ಇಷ್ಟವಾಯಿತು ಎಂದು ಹೇಳಿದ್ದಾರೆ. ಅಲ್ಲದೆ ಸದ್ಯದಲ್ಲೇ ಅಲ್ಲು ಅರ್ಜುನ್ ಭುಜದ ನೋವಿನಿಂದ ನನ್ನನ್ನು ಸಂಪರ್ಕ ಮಾಡಬಹುದು ಎಂದು ಕಾಮಿಡಿ ಮಾಡಿದ್ದಾರೆ.
<iframe src=”https://www.facebook.com/plugins/post.php?href=https%3A%2F%2Fwww.facebook.com%2Fdrguravareddy%2Fposts%2Fpfbid0XzQBmWsBjVdgEx3Mikcb2T4TStXXAnUvJLbC45iXgrtFGJwHFP9CoXcvFqxtEzswl&show_text=true&width=500″ width=”500″ height=”667″ style=”border:none;overflow:hidden” scrolling=”no” frameborder=”0″ allowfullscreen=”true” allow=”autoplay; clipboard-write; encrypted-media; picture-in-picture; web-share”></iframe>
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…