ಚಿತ್ರ ಮಂಜರಿ

ರಶ್ಮಿಕಾಗೆ ಮಂಡಿನೋವು : ಖ್ಯಾತ ವೈದ್ಯ ಗುರವ ರೆಡ್ಡಿ ಅವರಿಂದ ಚಿಕಿತ್ಸೆ

ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸೌತ್ ಮತ್ತು ಬಾಲಿವುಡ್ ಎರಡೂ ಕಡೆ ರಶ್ಮಿಕಾ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಕನ್ನಡ ಸಿನಿಮಾರಂಗದಿಂದ ಬಣ್ಣದ ಲೋಕದ ಪಯಣ ಪ್ರಾರಂಭಿಸಿದ ಕಿರಿಕ್ ಸುಂದರಿ ಸದ್ಯ ತೆಲುಗು, ತಮಿಳು ಮತ್ತೆ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತೆಲುಗು ಸಿನಿಮಾರಂಗದಲ್ಲಿ ಸ್ಟಾರ್ ಆಗಿ ಹೊರಹೊಮ್ಮುತ್ತಿದ್ದಂತೆ ರಶ್ಮಿಕಾ ಇದೀಗ ಹಿಂದಿಯಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿ ಮುಂಬೈ, ಹೈದರಾಬಾದ್, ಚೆನ್ನೈ ಅಂತ ಸದಾ ಓಡಾಡುತ್ತಿರುತ್ತಾರೆ. ಈ ನಡುವೆ ರಶ್ಮಿಕಾ ಮಂಡಿನೋವಿನಿಂದ ಬಳಲುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದ ರಶ್ಮಿಕಾ ಇದೀಗ ಭಾರತದ ಟಾಪ್ ಆರ್ಥೋಪಿಡಿಕ್ ಭೇಟಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಆರ್ಥೋಪಿಡಿಕ್ ಅವರೇ ಬಹಿರಂಗ ಪಡಿಸಿದ್ದಾರೆ.

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಪುಷ್ಪ ನಟಿ ಸಮಯ ತೆಗೆದುಕೊಂಡು ವೈದ್ಯರನ್ನು ಭೇಟಿಯಾಗಿದ್ದಾರೆ. ಹೈದರಾಬಾದ್ ನಲ್ಲಿರುವ ಪ್ರಸಿದ್ಧ ಆರ್ಥೋಪಿಡಿಕ್ ಡಾ.ಗುರುವ ರೆಡ್ಡಿ ಅವರ ಆಸ್ಪತ್ರೆಯಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕಂಡಿದ್ದಾರೆ. ವೈದ್ಯರ ಪಕ್ಕ ನಿಂತು ಪೋಸ್ ನೀಡಿರುವ ರಶ್ಮಿಕಾ ಫೋಟೋ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ. ರಶ್ಮಿಕಾ ಅವರನ್ನು ಭೇಟಿಯಾದ ಬಗ್ಗೆ ಸ್ವತಃ ಡಾ.ಗುರುವ ರೆಡ್ಡಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ರಶ್ಮಿಕಾ ಮಂಡಿನೋವಿನಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಆತಂಕ ಪಡುವ ಅವಶ್ಯಕತೆ ಇಲ್ಲ, ಶೀಘ್ರದಲ್ಲೇ ಗುಣಮುಖ ಆಗುತ್ತಾರೆ ಎಂದು ವೈದ್ಯರು ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಪ್ರಸಿದ್ಧ ಆರ್ಥೊ ರಶ್ಮಿಕಾ ಜೊತೆ ಫೋಟೋ ಶೇರ್ ಮಾಡಿ, ಶ್ರೀವಲ್ಲಿ ನನ್ನನ್ನು ಭೇಟಿಯಾಗಿದ್ದಾರೆ. ನಾನು ಅವರ ದೊಡ್ಡ ಅಭಿಮಾನಿ ಎಂದು ಹೇಳಿದ್ದಾರೆ. ಪುಷ್ಪ ಸಿನಿಮಾದಲ್ಲಿ ರಶ್ಮಿಕಾ ಪಾತ್ರ ತುಂಬಾ ಇಷ್ಟವಾಯಿತು ಎಂದು ಹೇಳಿದ್ದಾರೆ. ಅಲ್ಲದೆ ಸದ್ಯದಲ್ಲೇ ಅಲ್ಲು ಅರ್ಜುನ್  ಭುಜದ ನೋವಿನಿಂದ ನನ್ನನ್ನು ಸಂಪರ್ಕ ಮಾಡಬಹುದು ಎಂದು ಕಾಮಿಡಿ ಮಾಡಿದ್ದಾರೆ.

<iframe src=”https://www.facebook.com/plugins/post.php?href=https%3A%2F%2Fwww.facebook.com%2Fdrguravareddy%2Fposts%2Fpfbid0XzQBmWsBjVdgEx3Mikcb2T4TStXXAnUvJLbC45iXgrtFGJwHFP9CoXcvFqxtEzswl&show_text=true&width=500″ width=”500″ height=”667″ style=”border:none;overflow:hidden” scrolling=”no” frameborder=”0″ allowfullscreen=”true” allow=”autoplay; clipboard-write; encrypted-media; picture-in-picture; web-share”></iframe>

andolana

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

4 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

6 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

6 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

10 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

15 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

15 hours ago