ಬೆಂಗಳೂರು: ನಟ ಕಿಚ್ಚ ಸುದೀಪ್ ಹಾಗೂ ನಿರ್ಮಾಪಕ ಎಂಎನ್ ಕುಮಾರ್ ನಡುವಿನ ತಿಕ್ಕಾಟ ಮುಂದುವರಿದಿದೆ. ಸುದೀಪ್ ಅವರು ಹಣ ಪಡೆದು, ಕಾಲ್ಶೀಟ್ ನೀಡಿಲ್ಲ ಎಂದು ಕುಮಾರ್ ಆರೋಪಿಸಿದ್ದರು. ಆದರೆ, ಸುದೀಪ್ ಅವರು ಇದನ್ನು ತಳ್ಳಿ ಹಾಕಿದ್ದರು. ಈಗ ಅವರು ಕುಮಾರ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಬೆನ್ನಲ್ಲೇ ಕುಮಾರ್ ಅವರು ಸುದೀಪ್ ವಿರುದ್ಧ ಫಿಲ್ಮ್ ಚೇಂಬರ್ ಮುಂದೆ ಪ್ರತಿಭಟನೆ ಆರಂಭಿಸಿದ್ದಾರೆ. ಅವರಿಗೆ ನಿರ್ಮಾಪಕರ ಸಂಘದ ಮಾಜಿ ಅಧ್ಯಕ್ಷ ಪ್ರವೀಣ್ ಕುಮಾರ್ ಮೊದಲಾದವರು ಸಾಥ್ ನೀಡಿದ್ದಾರೆ.
‘ನನಗೆ ಆಗಿರುವ ಸಮಸ್ಯೆ ಎಲ್ಲರಿಗೂ ಗೊತ್ತು. ಚಿತ್ರರಂಗಕ್ಕೆ ಫಿಲ್ಮ್ ಚೇಂಬರ್ ಒಂದುಮನೆ ಇದ್ದಹಾಗೆ. ಹೀಗಾಗಿ ನನ್ನ ಸಮಸ್ಯೆಯನ್ನು ಇಲ್ಲಿಯೇ ಬಗೆಹರಿಸಿಕೊಳ್ಳಲು ಬಂದಿದ್ದೇನೆ. ಸುದೀಪ್ ಅವರ ಬಗ್ಗೆ ನಾನು ಎಲ್ಲಿಯೂ ಕೆಟ್ಟದಾಗಿ ಮಾತನಾಡಿಲ್ಲ. ನಮಗೆ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂದಷ್ಟೇ ಹೇಳಿದ್ದೇನೆ. ಸಮಸ್ಯೆ ಬಗೆಹರಿಸಿಕೊಳ್ಳುವ ತನಕ ಇಲ್ಲಿಯೇ ಧರಣಿ ಮಾಡುತ್ತೇನೆ’ ಎಂದು ಕುಮಾರ್ ಹೇಳಿದ್ದಾರೆ.
‘ನಾನು ಯಾರ ಸಹಾಯವನ್ನೂ ಕೇಳಿಲ್ಲ. ನನ್ನದು ಏನಿದೆ ಅದನ್ನು ಕ್ಲಿಯರ್ ಮಾಡಿದರೆ ಸಾಕು. ನಾವು ನಿರ್ಮಾಪಕರು, ಸಾಕಷ್ಟು ಜನರನ್ನು ಬೆಳೆಸಿದ್ದೀವಿ. ಎಲ್ಲರ ಗೌರವವೂ ಉಳಿಯಬೇಕು. ನನಗೆ ತೊಂದರೆಯಾದಾಗ ನಾನು ಯಾರ ಮುಖಾಂತರ ಕೇಳಬೇಕು? ಮಾಧ್ಯಮದವರ ಮುಂದೆಯೇ ಕೇಳಬೇಕು. ನಾನು ಹಾಗೆಯೇ ಮಾಡಿದ್ದೇನೆ. ಅವರು ಸಭೆಗೆ ಬರಲಿ. ಆಗ ಎಲ್ಲಾ ದಾಖಲೆಗಳನ್ನು ನೀಡುತ್ತೇನೆ’ ಎಂದಿದ್ದಾರೆ ಕುಮಾರ್.
‘ರಾಜಿ ಸಂಧಾನಕ್ಕೆ ನಾವು ರೆಡಿ. ಅವರು ಕರೆಯಬೇಕಿತ್ತು, ಆದರೆ ನಾವೇ ಕರೆಯುತ್ತೀದ್ದೇವೆ. ಪ್ರೀತಿಯಿಂದ ನಡೆದರೆ ಮಾತ್ರ ವ್ಯವಹಾರ. ಯಾರನ್ನು, ಯಾವುದಕ್ಕೂ ಬಲವಂತ ಮಾಡುವುದಕ್ಕೆ ಆಗುವುದಿಲ್ಲ. ನಮ್ಮಲ್ಲಿರುವ ಹಿರಿಯರು ಅವರಿಗೆ ಮಾರ್ಗದರ್ಶನ ನೀಡಬೇಕು. ನಮ್ಮ ಅಧ್ಯಕ್ಷರು ಬಂದ ಮೇಲೆ ಶಿವಣ್ಣ ಭೇಟಿಯ ಬಗ್ಗೆ ನಿರ್ಧಾರ ಮಾಡುತ್ತೇವೆ. ಸೂರಪ್ಪ ಬಾಬು ಹಿಂದೆ ನಿಂತು ಮಾಡಿಸುತ್ತಿರುವ ವಿಚಾರ ಸುಳ್ಳು’ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…