Mysore
28
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ರೀಲ್ಸ್‌ ರಾಣಿ ಸೋನು ಗೌಡ ರಿಲೀಸ್‌ !

ಬೆಂಗಳೂರು :  ಕಾನೂನು ಬಾಹಿರವಾಗಿ ಬಾಲಕಿಯನ್ನು ದತ್ತು ಪಡೆದ ಪ್ರಕರಣದಲ್ಲಿ ಬಂಧನವಾಗಿದ್ದ ಸೋನು ಶ್ರೀನಿವಾಸಗೌಡ  11 ದಿನದ ನಂತರ ಶನಿವಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಮೂರು ದಿನಗಳ ಹಿಂದೆ ಸೋನುಗೌಡಗೆ ಕೋರ್ಟ್​ನಿಂದ ಜಾಮೀನು ಮಂಜೂರಾಗಿತ್ತು. ಇಬ್ಬರ ಶ್ಯೂರಿಟಿ ಜೊತೆಗೆ 1 ಲಕ್ಷ ರೂ. ಬಾಂಡ್ ಷರತನ್ನು ನ್ಯಾಯಾಧೀಶರು ವಿಧಿಸಿದ್ದರು.ಇಂದು ಜಾಮೀನು ಅರ್ಜಿಯ ಷರತ್ತುಗಳನ್ನ ಪೂರೈಸಿದ ಹಿನ್ನೆಲೆ 8:10 ರ ಸುಮಾರಿಗೆ ಜೈಲಿನಿಂದ ಬಿಡುಗಡೆ ಮಾಡಿದ್ದಾರೆ.

ಇತ್ತ ಬಿಡುಗಡೆಯಾಗುತ್ತಿದ್ದಂತೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ಸೋನು ಶ್ರೀನಿವಾಸಗೌಡ ತೆರಳಿದ್ದಾರೆ.

Tags: