ಚಿತ್ರ ಮಂಜರಿ

ಸಖತಾಗಿದೆ “ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಪ್ರಮೋಷನ್ ಸಾಂಗ್ ರಿಲೀಜ್

ಬೆಂಗಳೂರು : ಚಂದನ್ ಶೆಟ್ಟಿ ಜೊತೆ ಹೆಜ್ಜೆ ಹಾಕಿದ ರಾಗಿಣಿ ದ್ವಿವೇದಿ ಉಷಾ ಗೋವಿಂದರಾಜು ನಿರ್ಮಾಣದ, ಸುಜಯ್ ಶಾಸ್ತ್ರಿ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ “ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಪ್ರಮೋಷನ್ ಸಾಂಗ್ ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಯಿತು.

ಈ ಹಾಡಿನಲ್ಲಿ ಚಂದನ್ ಶೆಟ್ಟಿ ಅವರ ಜೊತೆ ರಾಗಿಣಿ ದ್ವಿವೇದಿ ನಟಿಸಿದ್ದಾರೆ. ಚಂದನ್ ಶೆಟ್ಟಿ ಅವರೆ ಈ ಹಾಡನ್ನು ಬರೆದಿದ್ದು, ಮಂಗ್ಲಿ ಹಾಗೂ ಚಂದನ್ ಶೆಟ್ಟಿ ಹಾಡಿದ್ದಾರೆ. ಮುರಳಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಹಾಡಿಗೆ ಮಾತ್ರ ಚಂದನ್ ಶೆಟ್ಟಿ ಅವರೆ ಸಂಗೀತ ನೀಡಿದ್ದಾರೆ. ಪ್ರವೀಣ್ – ಪ್ರದೀಪ್ ಈ ಚಿತ್ರದ ಸಂಗೀತ ನಿರ್ದೇಶಕರು.
ನಾನು “ಕೆಂಪೇಗೌಡ” ಚಿತ್ರದಿಂದಲೂ ರಾಗಿಣಿ ಅವರ ಅಭಿಮಾನಿ. ಈಗ ಅವರ ಜೊತೆ ಹಾಡೊಂದರಲ್ಲಿ ನಟಿಸಿರುವುದು ಸಂತೋಷವಾಗಿದೆ. ಹಾಡು ಹಾಗೂ ಚಿತ್ರ ಎಲ್ಲರ ಮನ ಗೆಲಲ್ಲಿದೆ. ಇದು ನಾನು ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ . ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಚಂದನ್ ಶೆಟ್ಟಿ.

ಈ ಹಾಡು ಚೆನ್ನಾಗಿದೆ. ಚಂದನ್ ಶೆಟ್ಟಿ ಪ್ರತಿಭಾವಂತ. ಅವರು ಸಂಗೀತ ನೀಡಿ, ಹಾಡುವ ಹಾಡುಗಳು ನನಗೆ ಇಷ್ಟ‌. ಬಹಳ ದಿನಗಳಿಂದ ಅವರ ಜೊತೆ ನಟಿಸುವ ಕುರಿತು ಮಾತುಕತೆ ನಡೆಯುತ್ತಿತ್ತು. ಈಗ ಈ ಚಿತ್ರದ ಪ್ರಮೋಷನ್ ಸಾಂಗ್ ನಲ್ಲಿ ಒಟ್ಟಿಗೆ ಅಭಿನಯಿಸಿದ್ದೇವೆ ಎಂದು ತಿಳಿಸಿದ ನಟಿ ರಾಗಿಣಿ ದ್ವಿವೇದಿ, ಚಿತ್ರಕ್ಕೆ ಶುಭ ಕೋರಿದರು.
ಇದು 80/90 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಈ ಕಥೆಯನ್ನು ಇಷ್ಟಪಟ್ಟು ನಿರ್ಮಾಣಕ್ಕೆ ಮುಂದಾದ ಗೋವಿಂದರಾಜು ಅವರಿಗೆ ಹಾಗೂ ಸಹಕಾರ ನೀಡಿದ ನನ್ನ ಇಡೀ ತಂಡಕ್ಕೆ ನನ್ನ ಧನ್ಯವಾದ. ಸದ್ಯದಲ್ಲೇ ನಿಮ್ಮ ಮುಂದೆ ಬರುತ್ತೇವೆ ಎಂದು ನಿರ್ದೇಶಕ ಸುಜಯ್ ಶಾಸ್ತ್ರಿ ತಿಳಿಸಿದರು.

ನಿರ್ದೇಶಕರು ಹೇಳಿದ ಕಥೆ ಕೇಳಿ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ಈ ಹಾಡು ಹಾಗೂ ಚಿತ್ರ ನೋಡಿ ಸಂತೋಷವಾಗಿದೆ. ನಾವು ಅಂದಕೊಂಡದಿಕ್ಕಿಂತ ಚಿತ್ರ ಚೆನ್ನಾಗಿ ಬಂದಿದೆ ಎಂದರು ನಿರ್ಮಾಪಕ ಗೋವಿಂದರಾಜು.
ನಾಯಕಿ ಅರ್ಚನಾ ಕೊಟ್ಟಿಗೆ ಚಿತ್ರದಲ್ಲಿ ನಟಿಸಿರುವ ರಜನಿಕಾಂತ್, ರಾಕೇಶ್ ಪೂಜಾರಿ, ಕಥೆ ಬರೆದಿರುವ ರಾಜ್ ಗುರು, ಛಾಯಾಗ್ರಹಕ ವಿಶ್ವಜಿತ್ ರಾವ್ ಚಿತ್ರದ ಕುರಿತು ಮಾತನಾಡಿದರು. ಸಮಾರಂಭಕ್ಕೆ ಆಗಮಿಸಿದ್ದ ಚಿತ್ರರಂಗದ ಗಣ್ಯರು ಚಿತ್ರಕ್ಕೆ ಶುಭ ಕೋರಿದರು.

lokesh

Recent Posts

ಶ್ರೀರಂಗಪಟ್ಟಣ ದಸರಾ ಜಂಬೂಸವಾರಿಗೆ ನಟ ರವಿಚಂದ್ರನ್‌ ಚಾಲನೆ

ಮಂಡ್ಯ: ಜಿಲ್ಲೆಯ ಐತಿಹಾಸಿಕ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವಕ್ಕೆ ವೈಭವದ ಚಾಲನೆ ದೊರೆತಿದೆ. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಭಕ್ತಿಪೂರ್ವಕ ಪುಷ್ಪಾರ್ಚನೆ…

9 hours ago

ಅಭಿಮನ್ಯು ಆನೆ ಮಾವುತನ ಪತ್ನಿ ಸಾವು

ಮೈಸೂರು: ದಸರಾ ಗಜಪಡೆಯ ಆನೆ ಅಭಿಮನ್ಯುವಿನ ಮಾವುತ ವಸಂತ ಅವರ ಪತ್ನಿ ಅಂಬಿಕಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 35 ವರ್ಷ…

10 hours ago

ಮತದಾರರ ಹೆಸರು ಡಿಲೀಟ್‌ ವಿವಾದ: ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ನೋಟಿಸ್‌

ನವದೆಹಲಿ: ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿವಾದ ಇದೀಗ ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಹಂತ ತಲುಪಿದೆ. ರಾಹುಲ್‌ ಗಾಂಧಿ ಹಾಗೂ ‘ಇಂಡಿಯಾ’…

10 hours ago

ಹೆಣ ಇದ್ದ ಸ್ಕಾರ್ಪಿಯೋ ಓಡಿಸಲು ಯಾರೂ ಸಿದ್ಧರಿಲ್ಲ

ಶೆಡ್‌ನಿಂದ ಹೆಣ ಹಾಕಿಕೊಂಡು ಬಂದ ದೀಪಕ್, ಗೇಟ್ ತನಕ ಬಂದು ಮುಂದಕ್ಕೆ ಹೋಗಲು ಆಗಲ್ಲ ಎಂದು ನಿರಾಕರಣೆ ಹೆಣ ಬಿಸಾಡುವ…

13 hours ago

ರೇಣುಕಾಸ್ವಾಮಿಯ ಹೆಣ ಬಿಸಾಡಲು ಜಾಗ ಹುಡುಕಾಟ

ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ Sattva Apartment ಹಿಂದಿನ ಜನ…

13 hours ago

ನೋಟಿನ ಕಂತೆಗಳನ್ನು ತಂದಿಟ್ಟ ದರ್ಶನ್

ಸರೆಂಡರ್ ಆದವರಿಗೆ ಕೊಡಲು; ಖರ್ಚುವೆಚ್ಚಕ್ಕೆ ಪ್ರದೋಷ್, ವಿನಯ್, ನಾಗರಾಜು ಕೈಗೆ ಕೇಳಿದಷ್ಟು ಹಣ ಕೊಟ್ಟರು ಸಹಾಯ ಮಾಡಿ, ಇಲ್ಲದಿದ್ದರೆ ನೇಣು…

13 hours ago