ಚಿತ್ರ ಮಂಜರಿ

ಕಾಂತಾರ ಚಿತ್ರದ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿಲ್ಲ : ನಟ ಚೇತನ್ ಅಹಿಂಸಾ

ಬೆಂಗಳೂರು: ಕರ್ನಾಟಕ ಮಾತ್ರವಲ್ಲದೆ ದೇಶ ವಿದೇಶದಲ್ಲೂ ಭರ್ಜರಿ ಸದ್ದು ಮಾಡುತ್ತಿರುವ ರಿಷಬ್ ಶೆಟ್ಟಿ ಅವರ ನಟನೆ ಹಾಗೂ ನಿರ್ದೇಶನದ ಕಾಂತಾರ ಚಿತ್ರಕ್ಕೆ ನಟ ಚೇತನ್ ಅಹಿಂಸಾ ಮಾಡಿರುವ ಟ್ವೀಟ್ ಭಾರೀ ವಿವಾದವನ್ನು ಸೃಷ್ಟಿಸಿದೆ.

ಕಾಂತಾರ ಚಿತ್ರದ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿಲ್ಲ ಎಂದು ಟ್ವೀಟ್ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ತಮ್ಮ ಟ್ವೀಟ್‍ನಲ್ಲಿ ಚೇತನ್ ಅವರು, ನಮ್ಮ ಕನ್ನಡದ ಚಲನಚಿತ್ರ ಕಾಂತಾರವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ.

ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ತಮ್ಮ ಫೇಸ್‍ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ.

ಆದರೆ ಚೇತನ್ ಅವರ ಈ ಟ್ವೀಟ್‍ಗೆ ನೆಟ್ಟಿಗರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಅನೇಕರು ಪ್ರತಿಕ್ರಿಯೆ ನೀಡಿದ್ದು, ಒಂದು ಚಿತ್ರಕ್ಕೆ ಜಾತಿ, ಧರ್ಮ ಲೇಪ ಮಾಡುವುದು ಚೇತನ್‍ನಂತವರಿಗೆ ಮಾತ್ರ ಬರುತ್ತದೆ ಎಂದು ತಿರುಗೇಟು ಕೊಟ್ಟಿದ್ದಾರೆ.

ಕಾಂತಾರ ಸಿನಿಮಾ ದೇಶಾದ್ಯಂತ ಜನಪ್ರಿಯತೆ ಗಳಿಸಿದೆ. ಸಿನಿಮಾವನ್ನು ಸ್ಟಾರ್ ಕಲಾವಿದರು ಕೂಡ ನೋಡಿದ್ದಾರೆ, ನೋಡಲು ಕಾಯುತ್ತಿದ್ದಾರೆ. ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ ಕೂಡ ಕಾಂತಾರ ಸಿನಿಮಾ ನೋಡುವುದಾಗಿ ಹೇಳಿದ್ದಾರೆ

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago