ಚಿತ್ರ ಮಂಜರಿ

ಶಿಲ್ಪ ಶೆಟ್ಟಿ ಹುಟ್ಟೂರನ್ನು ನೆನಪಾಗುವಂತೆ ಮಾಡಿದ ರಿಷಬ್‌ನ ಕಾಂತಾರಾ

ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ಗಡಿಗೂ ಮೀರಿ ಅಬ್ಬರಿಸುತ್ತಿದೆ. ಭಾರಿ ಬೇಡಿಕೆಯ ಮೇರೆಗೆ ಕಾಂತಾರ ಪರಭಾಷೆಗಳಲ್ಲಿ ರಿಲೀಸ್ ಆಗಿದೆ. ಇದೀಗ ಕಾಂತಾರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದರಲ್ಲೂ ಹಿಂದಿಯಲ್ಲಿ ಕಾಂತಾರ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ವಿಶೇಷ. ಬಾಕ್ಸ್ ಆಫೀಸ್ ನಲ್ಲೂ ಭರ್ಜರಿ ಕಮಾಯಿ ಮಾಡುತ್ತಿದೆ. ಅಂದಹಾಗೆ ಪ್ರೇಕ್ಷಕರು ಮಾತ್ರವಲ್ಲದೇ ಸಿನಿ ಸೆಲೆಬ್ರಿಟಿಗಳು ಸಹ ಕಾಂತಾರ ಸಿನಿಮಾಗೆ ಫಿದಾ ಆಗಿದ್ದಾರೆ. ಈಗಾಗಲೇ ಅನೇಕ ಸ್ಟಾರ್ಸ್ ಕಾಂತಾರ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.

ತೆಲುಗು ಸ್ಟಾರ್ ಪ್ರಭಾಸ್, ನಾನಿ, ರಾಣಾ ದಗ್ಗುಬಾಟಿ, ಮಲಯಾಳಂ ನಟ ಪೃಥ್ವಿರಾಜ್ ಹಾಗೂ ತಮಿಳು ನಟ ಧನುಷ್, ಕಾರ್ತಿ ಸೇರಿದಂತೆ ಅನೇಕ ಸ್ಟಾರ್ಸ್ ಕಾಂತಾರ ನೋಡಿ ಹಾಡಿಹೊಗಳಿದ್ದಾರೆ. ವಿಶೇಷ ಎಂದರೆ ತೆಲುಗು ಸ್ಟಾರ್ ಪ್ರಭಾಸ್ ಎರಡು ಬಾರಿ ಕಾಂತಾರ ಸಿನಿಮಾ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದ್ದಾರೆ. ಕನ್ನಡ ಮೂಲದ ತೆಲುಗು ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.  ಇದೀಗ ಕನ್ನಡ ಮೂಲದ ತೆಲುಗು ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ಕಾಂತಾರ ಸಿನಿಮಾ ವೀಕ್ಷಿಸಿ ಮೆಚ್ಚಿಕೊಂಡಿದ್ದರು. ಇದೀಗ ಬಾಲಿವುಡ್ ನಟಿ ಹಾಗೂ ಕನ್ನಡತಿ ಶಿಲ್ಪಾ ಶೆಟ್ಟಿ ಸಿನಿಮಾ ನೋಡಿ ಹಾಡಿ ಹೊಗಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಶಿಲ್ಪಾ ಶೆಟ್ಟಿ ಎಂಥ ಅದ್ಭುತವಾದ ಸಿನಿಮಾ ಎಂದು ಹೇಳಿದ್ದಾರೆ. ಸಿನಿಮಾ ನೋಡಿ ರೊಮಾಂಚನ ವಯಿತು ಎಂದು ಚಿತ್ರದ ಬಗ್ಗೆ ವಿಮರ್ಶೆ ಮಾಡಿದ್ದಾರೆ. ‘ಕಾಂತಾರ ಚಿತ್ರಕ್ಕೆ ಮೆಚ್ಚುಗೆಯ ಪೋಸ್ಟ್. ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದೆ. ಓ ಮೈ ಗಾಡ್ ಎಂಥ ಸಿನಿಮಾ. ಅದ್ಭುತವಾದ ನರೇಟಿವ್, ವೈಬ್ ಮತ್ತು ಪ್ರಪಂಚ. ಕ್ಲೈಮ್ಯಾಕ್ಸ್‌ ನೋಡಿ ಗೂಸ್‌ಬಂಪ್ಸ್ ಬಂತು. ನಾನು ಸೇರಿದಂತೆ ವೀಕ್ಷಕನನ್ನು ಆ ಜಗತ್ತಿಗೆ ಕರೆದುಕೊಂಡು ಹೋಗುತ್ತೆ. ನಿಜವಾಗಿಯೂ ನನ್ನನ್ನು ನನ್ನ ಊರಿಗೆ ಕರೆದೊಯ್ತು ಇದು ಸಿನಿಮಾ ಶಕ್ತಿ. ಯಾವುದೇ ಪಕ್ಷಪಾತವಿಲ್ಲದೆ, ಕಥೆ ಹೇಳುವಿಕೆ, ಅಭಿನಯ, ನಂಬಿಕೆ ಮತ್ತು ಅದ್ಭುತ ನಿರ್ದೇಶನ. ನೋಡಲೇ ಬೇಕಾದ ಸಿನಿಮಾ. ರಿಷಬ್ ಶೆಟ್ಟಿ ನಿಮ್ಮ ಬಹುಮುಖ ಪ್ರತಿಭೆಗೆ ಹ್ಯಾಟ್ಸ್ ಆಫ್. ಸಕ್ಸಸ್ ಎಂಜಾಯ್ ಮಾಡಿ’ ಎಂದು ಹೇಳಿದ್ದಾರೆ.

ಕರ್ನಾಟಕ ಕರಾವಳಿ ಮೂಲದ ಶಿಲ್ಪಾ ಶೆಟ್ಟಿ ಬಾಲಿವುಡ್‌ನಲ್ಲಿ ಪ್ರಸಿದ್ಧಿ ಪಡೆದಿದ್ದಾರೆ. ಕನ್ನಡ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಶಿಲ್ಪಾ ಶೆಟ್ಟಿ ಬಳಿಕ ಬಾಲಿವುಡ್‌ಗೆ ಹಾರಿದರು. ಅಲ್ಲೇ ಖ್ಯಾತಿ ಗಳಿಸಿದ ಶಿಲ್ಪಾ ಸದ್ಯ ಮುಂಬೈನಲ್ಲೇ ನೆಲೆಸಿದ್ದಾರೆ. ಆದರೂ ತನ್ನ ಊರಿನ ಆಚಾರ, ವಿಚಾರಗಳ ಬಗ್ಗೆ ಇರುವ ಸಿನಿಮಾ ನೋಡಿ  ಹೊಗಳಿರುವುದು ವಿಶೇಷ.

andolana

Recent Posts

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

5 mins ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

36 mins ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

39 mins ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

1 hour ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

1 hour ago

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

2 hours ago