ಚಿತ್ರ ಮಂಜರಿ

ರಿಷಬ್​ ಶೆಟ್ಟಿ ನಿರ್ಮಾಣದ SHIVAMMA ಚಿತ್ರಕ್ಕೆ ಯಂಗ್‌ ಜ್ಯೂರಿ ಆವಾರ್ಡ್‌

ನಟ ರಿಷಬ್​ ಶೆಟ್ಟಿ ನಿರ್ಮಾಣದ ಶಿವಮ್ಮ ಸಿನಿಮಾ ಯುರೋಪಿನ ಪ್ರತಿಷ್ಠಿತ ಫೆಸ್ಟಿವಲ್‌ ಎಫ್​3 ಕಾಂಟಿನೆಂಟ್ಸ್​ನ 44ನೇ ಆವೃತ್ತಿಯಲ್ಲಿ ‘ಯಂಗ್‌ ಜ್ಯೂರಿ ಆವಾರ್ಡ್‌’ ಅನ್ನು ಪಡೆದುಕೊಂಡಿದೆ.

ಕಾಂತಾರ ಮೂಲಕ ಕಳೆದ ಸುಮಾರು 60 ದಿನಗಳಿಂದ ಸುದ್ದಿಯಲ್ಲಿರುವ ನಟ ರಿಷಬ್​ ಶೆಟ್ಟಿ ನಿರ್ಮಾಣದ ಶಿವಮ್ಮ ಸಿನಿಮಾ ಬೂಸಾನ್ ಚಿತ್ರೋತ್ಸವದ ಪ್ರತಿಷ್ಠಿತ ‘ನ್ಯೂ ಕರೆಂಟ್ಸ್’ ಪ್ರಶಸ್ತಿ ಪಡೆದು ಖ್ಯಾತಿ ಗಳಿಸಿತ್ತು. ಇದೀಗ ಇದೇ ಚಿತ್ರ ಮತ್ತೊಂದು ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆಯುವ ಮೂಲಕ ಸುದ್ದಿಯಾಗಿದೆ.
ಯುರೋಪಿನ ಪ್ರತಿಷ್ಠಿತ ಫೆಸ್ಟಿವಲ್‌ ಎಫ್​3 ಕಾಂಟಿನೆಂಟ್ಸ್​ನ 44 ನೇ ಆವೃತ್ತಿಯಲ್ಲಿ ‘ಯಂಗ್‌ ಜ್ಯೂರಿ ಆವಾರ್ಡ್‌’ ಅನ್ನು ಶಿವಮ್ಮ ಚಿತ್ರ ಪಡೆದುಕೊಂಡಿದೆ. ಈ ವಿಷಯವನ್ನು ಸ್ವತಃ ನಿರ್ಮಾಪಕ ರಿಷಬ್‌ ಶೆಟ್ಟಿ ಅವರೇ ಹಂಚಿಕೊಂಡಿದ್ದಾರೆ.

ಈ ಸಿನಿಮಾವನ್ನು ಜೈಶಂಕರ್‌ ಆರ್ಯರ್‌ ನಿರ್ದೇಶಿಸಿದ್ದು, ಶರಣಮ್ಮ ಚೆಟ್ಟಿ ಹಾಗೂ ಚೆನ್ನಮ್ಮ ಅಬ್ಬೆಗೆರೆ ಅಭಿನಯಿಸಿದ್ದಾರೆ. ಮಧ್ಯಮ ವಯಸ್ಸಿನ ಬಡ ಹೆಣ್ಣು ಮಗಳೊಬ್ಬಳು ಪಾನೀಯದ ಕಂಪನಿಗೆ ಮಾರಾಟ ಪ್ರತಿನಿಧಿಯಾಗಿ ಹೋದಾಗ ಅನುಭವಿಸುವ ಸಾಕಷ್ಟು ಅನುಭವಗಳ ಕಥೆ ಈ ಸಿನಿಮಾದಲ್ಲಿದೆ.

andolanait

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

14 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

14 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

14 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

14 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

14 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

14 hours ago