ಮಂಡ್ಯ: ಕಳೆದ ಬಾರಿಯ ಲೋಕಸಭಾ ಚುನಾವಣೆ ವೇಳೆ ಮಂಡ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸಂಸದೆ ಸುಮಲತಾ ಅಂಬರೀಶ್ ಅಚ್ಚರಿಯಂಬಂತೆ ಚುನಾವಣೆ ಗೆದ್ದು ಪಾರ್ಲಿಮೆಂಟ್‌ಗೆ ಎಂಟ್ರಿ ಕೊಟ್ಟಿದ್ದರು.
ಇನ್ನು ಈ ಚುನಾವಣೆ ಗೆಲ್ಲುವುದಕ್ಕೆ ಪ್ರಮುಖ ಕಾರಣವಾಗಿದ್ದವರು ಜೋಡೆತ್ತುಗಳು. ಕನ್ನಡ ಚಿತ್ರರಂಗದ ನಟರಾದ ದರ್ಶನ್ ಹಾಗೂ ಯಶ್ ಅವರು ಕಳೆದ ಚುನಾವಣೆಯಲ್ಲಿ ಸುಮಲತಾ ಪರ ಭರ್ಜರಿ ಕ್ಯಾಂಪೆನ್ ಮಾಡಿದ್ದು, ಸುಮಲತಾ ಅವರ ಗೆಲುವಲ್ಲಿ ಜೋಡೆತ್ತುಗಳು ಮುಖ್ಯ ಪಾತ್ರ ವಹಿಸಿದ್ದರು.
ಆದರೆ ಈ ಬಾರಿಯ ಲೋಕ ಚುನಾವಣೆಯಲ್ಲಿ ಪ್ರಚಾರಕ್ಕೆ ನಟ ದರ್ಶನ್ ಭಾಗವಹಿಸುವುದಾಗಿ ಹೇಳಿದರೆ, ಇತ್ತ ಯಶ್ ಬರುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೇ ಎಲ್ಲಾ ವಿಚಾರಗಳ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಅವರು ಚುನಾವಣಾ ಪ್ರಚಾರಕ್ಕೆ ಬರುವುದಿಲ್ಲ ಎಂದು ಈಗ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಆದರೆ ಈ ಬಗ್ಗೆ ಮೊದಲೇ ನನ್ನ ಜೊತೆ ಚರ್ಚೆ ಮಾಡಿದ್ದರು. 2018 ರ ಚುನಾವಣೆ ವೇಳೆ ಎಚ್‌ಡಿಕೆ ಅವರು ಸೇರಿದಂತೆ ಹಲವಾರು ರಾಜಕೀಯ ನಾಯಕರಿಂದ ಅಹಿತಕರ ಮಾತುಗಳನ್ನು ಕೇಳಬೇಕಾಯಿತು. ಇದು ನನ್ನ ಮನಸ್ಸಿಗೆ ನೋವುಂಟು ಮಾಡಿತ್ತು ಎಂದು ಯಶ್ ಹೇಳಿಕೊಂಡಿದ್ದಾರೆ.
ಈಗ ಅವರೊಬ್ಬ ಪ್ಯಾನ್ ಇಂಡಿಯಾ ಸ್ಟಾರ್, ಬ್ಯುಸಿ ಶೆಡುಲ್ಡ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಚುನಾವಣಾ ಪ್ರಚಾರಕ್ಕೆ ಬನ್ನಿ ಎಂದು ಕರೆಯಲು ಮನಸ್ಸಾಗುತ್ತಿಲ್ಲ ಎಂದು ಸಂಸದೆ ಹೇಳಿದ್ದಾರೆ.
ಕಳೆದ ಬಾರಿಯ ಚುನಾವಣಾ ಪ್ರಚಾರದ ವೇಳೆ ಅಂಬರೀಶ್ ಅವರ ಮೇಲಿನ ಅಭಿಮಾನದಿಂದ ಪ್ರಚಾರದಲ್ಲಿ ಭಾಗಿಯಾಗಿದ್ದರು, ನಾನು ಅವರನ್ನು ಪ್ರಚಾರಕ್ಕೆ ಕರೆದಿಲ್ಲ. ಈ ಸಲ ಯಶ್ ಚುನಾವಣಾ ಪ್ರಚಾರಕ್ಕೆ ಬರುವುದಾದರೇ ನನಗಿಂತ ಖುಷಿ ಪಡುವ ವ್ಯಕ್ತಿ ಇನ್ನೊಬ್ಬರಿಲ್ಲ. ಬರಲಿಲ್ಲ ಎಂದರೆ ಯಾವುದೇ ಬೇಸರವೂ ಇಲ್ಲ ಎನ್ನುವ ಮೂಲಕ ಎಲ್ಲಾ ಉಹಾಪೋಹಗಳಿಗೆ ಸಂಸದೆ ಸುಮಲತಾ ಅಂಬರೀಶ್ ತೆರೆ ಎಳೆದಿದ್ದಾರೆ.
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…