ವಿಶ್ವವೇ ಬೆರಗಿನಿಂದ ನೋಡಿರುವ ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ ಸಿನಿಮಾದ ಮುಂದುವರೆದ ಭಾಗ ಬರಲಿದೆ ಎಂದು ಸ್ವತಃ ರಾಜಮೌಳಿ ಅವರ ತಂದೆಯೇ ಮಾಹಿತಿಯನ್ನು ನೀಡಿದ್ದಾರೆ. ಆರ್.ಆರ್.ಆರ್ ಪಾರ್ಟ್ 2 ಸಿನಿಮಾದ ಕಥೆಯು ಸಿದ್ದವಾಗಿದ್ದು, ಯಾರು ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ ಎನ್ನುವುದು ನಿಗಧಿಯಾಗಿಲ್ಲ ಎಂದೂ ಅವರು ಹೇಳಿದ್ದಾರೆ.
ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಮತ್ತು ರಾಜಮೌಳಿ ಕಾಂಬಿನೇಷನ್ ಕಾರಣದಿಂದಾಗಿ ಆರ್.ಆರ್.ಆರ್ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿತ್ತು. ಕೀರವಾಣಿ ಸಂಗೀತ ಈ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ತಂದುಕೊಟ್ಟಿತ್ತು. ಅಲ್ಲದೇ, ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನೂ ಈ ಸಿನಿಮಾ ಪಡೆದುಕೊಂಡಿದೆ. ಹೀಗಾಗಿ ಆರ್.ಆರ್.ಆರ್ ಸಿನಿಮಾದ ಮುಂದುವರೆದ ಭಾಗ ಬರುತ್ತದೆ ಎಂದಾಗ ಸಹಜವಾಗಿಯೇ ಕುತೂಹಲ ಮೂಡಿದೆ.
ಈ ಕುರಿತು ಮಾತನಾಡಿರುವ ವಿಜಯೇಂದ್ರ ಪ್ರಸಾದ್, ‘ಕಥೆ ಸಿದ್ದವಾಗಿದೆ. ಆದರೆ, ಈ ಸಿನಿಮಾವನ್ನು ರಾಜಮೌಳಿ ಮಾಡುತ್ತಾರಾ ಅಥವಾ ಹಾಲಿವುಡ್ ನ ನಿರ್ದೇಶಕರು ಮಾಡಲಿದ್ದಾರಾ ಎನ್ನುವುದು ಫೈನಲ್ ಆಗಿಲ್ಲ. ದೊಡ್ಡ ಮಟ್ಟದಲ್ಲೇ ಈ ಸಿನಿಮಾವನ್ನು ನಿರ್ಮಾಣ ಮಾಡುವಂತಹ ತಯಾರಿ ನಡೆದಿದೆ’ ಎಂದಿದ್ದಾರೆ ರಾಜಮೌಳಿ ತಂದೆ.
ಈಗಾಗಲೇ ರಾಜಮೌಳಿ ಹೊಸ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಮಹೇಶ್ ಬಾಬು ಅವರಿಗಾಗಿ ರಾಜಮೌಳಿ ಸಿನಿಮಾ ಮಾಡಬೇಕಿದೆ. ಹೀಗಾಗಿ ಸದ್ಯ ಆರ್.ಆರ್.ಆರ್ ಪಾರ್ಟ್ 2 ಬರುವುದು ಅನುಮಾನ. ಒಂದು ವೇಳೆ ಹಾಲಿವುಡ್ ನಿರ್ದೇಶಕರಿಗೆ ಅವಕಾಶ ಸಿಕ್ಕರೆ ಅತೀ ಶೀಘ್ರದಲ್ಲೇ ಈ ಸಿನಿಮಾದ ಬಗ್ಗೆ ಮತ್ತಷ್ಟು ಅಪ್ ಡೇಟ್ ಸಿಗಬಹುದು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…