2022ನೇ ಸಾಲಿನ ಪ್ರತಿಷ್ಠಿತ ಸೈಮಾ ಅವಾರ್ಡ್ಸ್ ಕಾರ್ಯಕ್ರಮ ಈ ಬಾರಿ ಬೆಂಗಳೂರಿನಲ್ಲಿ ನಡೆಯುತ್ತಿದೆ. ಇಂದು (ಸೆಪ್ಟೆಂಬರ್ 10) ಹಾಗೂ ನಾಳೆ (ಸೆಪ್ಟೆಂಬರ್ 11) ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಹಲವು ಸೆಲೆಬ್ರಿಟಿಗಳು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ. ಅದ್ದೂರಿ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭ ಆಗಿದ್ದು, ಯಶ್ ಸೇರಿ ಅನೇಕ ಸೆಲೆಬ್ರಿಟಿಗಳು ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಕಳೆದ ವರ್ಷ ನಿಧನ ಹೊಂದಿದ ಪುನೀತ್ ರಾಜ್ಕುಮಾರ್ ಅವರಿಗೆ ಇಂದಿನ ಕಾರ್ಯಕ್ರಮದಲ್ಲಿ ವಿಶೇಷ ಗೌರವ ಸಲ್ಲಿಕೆ ಮಾಡಲಾಗುತ್ತಿದೆ.
‘ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್’ ಇದು ಸೈಮಾದ ವಿಸ್ತಾರ ರೂಪ. ಇದು ಆರಂಭಗೊಂಡಿದ್ದು 2012ರಲ್ಲಿ. ಹೀಗಾಗಿ, ಸೈಮಾ ಈ ಬಾರಿ 10 ವರ್ಷದ ಸಂಭ್ರಮಾಚರಣೆಯಲ್ಲಿ ಇದೆ. ಈ ಕಾರಣಕ್ಕೂ ಸೈಮಾ ಕಾರ್ಯಕ್ರಮ ವಿಶೇಷವಾಗಿದೆ.
ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳ ಸಿನಿಮಾಗಳು ಸೈಮಾ ಅಡಿಯಲ್ಲಿ ಬರುತ್ತವೆ. ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ನಟ-ನಟಿ ಸೇರಿ ಹಲವು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಪ್ರತಿ ಭಾಷೆಯಲ್ಲಿ ಸುಮಾರು 19 ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಈಗಾಗಲೇ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ವಿನ್ನರ್ ಯಾರು ಎಂಬುದು ಇಂದು ಘೋಷಣೆ ಆಗಲಿದೆ.
ಮೊದಲ ದಿನದ ಕಾರ್ಯಕ್ರಮದಲ್ಲಿ ಹಲವು ಸ್ಟಾರ್ಗಳ ಸಮಾಗಮ ಆಗಲಿದೆ. ‘ಕೆಜಿಎಫ್ 2’ ಮೂಲಕ ವಿಶ್ವ ಮಟ್ಟದಲ್ಲಿ ಹೆಸರು ಮಾಡಿದ ಯಶ್ ಅವರು ಮುಖ್ಯ ಅತಿಥಿ ಆಗಿ ಬರುತ್ತಿದ್ದಾರೆ. ‘ಪುಷ್ಪ’ ಹೀರೋ ಅಲ್ಲು ಅರ್ಜುನ್ ಕೂಡ ಅತಿಥಿಗಳ ಸಾಲಿನಲ್ಲಿದ್ದಾರೆ. ವಿಜಯ್ ದೇವರಕೊಂಡ, ತಮಿಳು ನಟ ಕಮಲ್ ಹಾಸನ್, ಬಾಲಿವುಡ್ ನಟ ರಣವೀರ್ ಸಿಂಗ್ ಕೂಡ ಮೊದಲ ದಿನ ಅತಿಥಿಯಾಗಿ ಬರಲಿದ್ದಾರೆ ಎಂದು ಬಾಲಿವುಡ್ ಬಾಕ್ಸ್ ಆಫೀಸ್ ತಜ್ಞ ತರಣ್ ಆದರ್ಶ್ ಅವರು ಟ್ವೀಟ್ ಮಾಡಿದ್ದಾರೆ.
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…