ಚಿತ್ರ ಮಂಜರಿ

ಬೆಂಗಳೂರಿನಲ್ಲಿ ಸೈಮಾ ಅವಾರ್ಡ್‌ : ಅತಿಥಿಗಳಾಗಿ ಹಾಜರಾಗುವ ತಾರೆಯರು ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ

2022ನೇ ಸಾಲಿನ ಪ್ರತಿಷ್ಠಿತ ಸೈಮಾ ಅವಾರ್ಡ್ಸ್ ಕಾರ್ಯಕ್ರಮ ಈ ಬಾರಿ ಬೆಂಗಳೂರಿನಲ್ಲಿ ನಡೆಯುತ್ತಿದೆ. ಇಂದು (ಸೆಪ್ಟೆಂಬರ್ 10) ಹಾಗೂ ನಾಳೆ (ಸೆಪ್ಟೆಂಬರ್ 11) ಬೆಂಗಳೂರಿನ ಪ್ಯಾಲೇಸ್ ​ಗ್ರೌಂಡ್​ನಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಹಲವು ಸೆಲೆಬ್ರಿಟಿಗಳು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ. ಅದ್ದೂರಿ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭ ಆಗಿದ್ದು, ಯಶ್ ಸೇರಿ ಅನೇಕ ಸೆಲೆಬ್ರಿಟಿಗಳು ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಕಳೆದ ವರ್ಷ ನಿಧನ ಹೊಂದಿದ ಪುನೀತ್​ ರಾಜ್​ಕುಮಾರ್ ಅವರಿಗೆ ಇಂದಿನ ಕಾರ್ಯಕ್ರಮದಲ್ಲಿ ವಿಶೇಷ ಗೌರವ ಸಲ್ಲಿಕೆ ಮಾಡಲಾಗುತ್ತಿದೆ.

‘ಸೌತ್ ಇಂಡಿಯನ್ ಇಂಟರ್​ನ್ಯಾಷನಲ್​ ಮೂವಿ ಅವಾರ್ಡ್ಸ್​’ ಇದು ಸೈಮಾದ ವಿಸ್ತಾರ ರೂಪ. ಇದು ಆರಂಭಗೊಂಡಿದ್ದು 2012ರಲ್ಲಿ. ಹೀಗಾಗಿ, ಸೈಮಾ ಈ ಬಾರಿ 10 ವರ್ಷದ ಸಂಭ್ರಮಾಚರಣೆಯಲ್ಲಿ ಇದೆ. ಈ ಕಾರಣಕ್ಕೂ ಸೈಮಾ ಕಾರ್ಯಕ್ರಮ ವಿಶೇಷವಾಗಿದೆ.

ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳ ಸಿನಿಮಾಗಳು ಸೈಮಾ ಅಡಿಯಲ್ಲಿ ಬರುತ್ತವೆ. ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ನಟ-ನಟಿ ಸೇರಿ ಹಲವು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಪ್ರತಿ ಭಾಷೆಯಲ್ಲಿ ಸುಮಾರು 19 ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಈಗಾಗಲೇ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ವಿನ್ನರ್ ಯಾರು ಎಂಬುದು ಇಂದು ಘೋಷಣೆ ಆಗಲಿದೆ.

ಮೊದಲ ದಿನದ ಕಾರ್ಯಕ್ರಮದಲ್ಲಿ ಹಲವು ಸ್ಟಾರ್​ಗಳ ಸಮಾಗಮ ಆಗಲಿದೆ. ‘ಕೆಜಿಎಫ್ 2’ ಮೂಲಕ ವಿಶ್ವ ಮಟ್ಟದಲ್ಲಿ ಹೆಸರು ಮಾಡಿದ ಯಶ್ ಅವರು ಮುಖ್ಯ ಅತಿಥಿ ಆಗಿ ಬರುತ್ತಿದ್ದಾರೆ. ‘ಪುಷ್ಪ’ ಹೀರೋ ಅಲ್ಲು ಅರ್ಜುನ್ ಕೂಡ ಅತಿಥಿಗಳ ಸಾಲಿನಲ್ಲಿದ್ದಾರೆ. ವಿಜಯ್​ ದೇವರಕೊಂಡ, ತಮಿಳು ನಟ ಕಮಲ್ ಹಾಸನ್, ಬಾಲಿವುಡ್ ನಟ ರಣವೀರ್ ಸಿಂಗ್ ಕೂಡ ಮೊದಲ ದಿನ ಅತಿಥಿಯಾಗಿ ಬರಲಿದ್ದಾರೆ ಎಂದು ಬಾಲಿವುಡ್ ಬಾಕ್ಸ್​ ಆಫೀಸ್​ ತಜ್ಞ ತರಣ್ ಆದರ್ಶ್ ಅವರು ಟ್ವೀಟ್ ಮಾಡಿದ್ದಾರೆ.

andolana

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

8 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

9 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

10 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

15 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

22 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

22 hours ago