ಕಳೆದ ವರ್ಷ ಬಾಕ್ಸ್ ಆಫೀಸ್‌ನಲ್ಲಿ ಕೆಜಿಎಫ್ ಚಾಪ್ಟರ್ 2 ಹಾಗೂ ಕಾಂತಾರ ಚಿತ್ರಗಳ ಮೂಲಕ ಕೋಟ್ಯಂತರ ರೂಪಾಯಿಗಳ ಬ್ಯುಸಿನೆಸ್ ಮಾಡಿ ಇತರೆ ಚಿತ್ರರಂಗಗಳಿಗೆ ಸೆಡ್ಡು ಹೊಡೆದಿದ್ದ ಹೊಂಬಾಳೆ ಫಿಲ್ಮ್ಸ್ ಈ ವರ್ಷ ಮತ್ತೊಂದು ಬಿಗ್ ಚಿತ್ರ ಸಲಾರ್ ಮೂಲಕ ಮತ್ತೊಮ್ಮೆ ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡಲು ಸಿದ್ಧವಾಗಿದೆ.
ಇದೇ ವರ್ಷ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಧೂಮಂ ಚಿತ್ರ ಬಿಡುಗಡೆಯಾಗಿತ್ತಾದರೂ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ಗಳಿಸಿರಲಿಲ್ಲ. ಧೂಮಂ ಮೂಲಕ ಮಲಯಾಳಂ ಚಿತ್ರರಂಗಕ್ಕೂ ಸಹ ಕಾಲಿಟ್ಟಿದ್ದ ಹೊಂಬಾಳೆ ಪ್ರಭಾಸ್ ನಟನೆಯ ಸಲಾರ್ ಚಿತ್ರದ ಮೂಲಕ ಟಾಲಿವುಡ್‌ಗೂ ಸಹ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ.
ಎಲ್ಲಾ ಎಂದುಕೊಂಡಂತೆ ನಡೆದಿದ್ದರೆ ಸಲಾರ್ ಚಿತ್ರ ಸೆಪ್ಟೆಂಬರ್ 28ಕ್ಕೆ ಬಿಡುಗಡೆಗೊಂಡು ಇಷ್ಟೊತ್ತಿಗಾಗಲೇ ಸಾಕಷ್ಟು ದಾಖಲೆಗಳನ್ನು ಬರೆದಿರಬೇಕಿತ್ತು. ಆದರೆ ವಿಎಫ್‌ಎಕ್ಸ್ ಕೆಲಸಗಳು ವಿಳಂಬವಾದ ಕಾರಣ ಸಲಾರ್ ಬಿಡುಗಡೆ ತಡವಾಗಿದ್ದು ಚಿತ್ರ ಡಿಸೆಂಬರ್ 22ಕ್ಕೆ ಮುಂದೂಡಲ್ಪಟ್ಟಿದೆ.
ಇನ್ನು ಚಿತ್ರದ ಬಿಡುಗಡೆ ದಿನಾಂಕ ಸಮೀಪಿಸುತ್ತಿದ್ದು ಚಿತ್ರತಂಡ ಚಿತ್ರದ ಮೇಲಿನ ಕ್ರೇಜ್ ಹೆಚ್ಚಿಸುವ ಸಲುವಾಗಿ ಟ್ರೈಲರ್ ಬಿಡುಗಡೆಗೊಳಿಸಲು ಮುಂದಾಗಿದೆ. ಈ ಹಿಂದೆ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚುವಂತೆ ಮಾಡಿದ್ದ ನಿರ್ದೇಶಕ ಪ್ರಶಾಂತ್ ನೀಲ್ ಟ್ರೈಲರ್ ಮೂಲಕ ಇನ್ಯಾವ ರೀತಿಯ ಮೋಡಿ ಮಾಡಲಿದ್ದಾರೆಯೋ ಕಾದು ನೋಡಬೇಕಿದೆ.
ಚಿತ್ರದ ಟ್ರೈಲರ್ ಡಿಸೆಂಬರ್ 1ರಂದು ರಾತ್ರಿ 7.19ಕ್ಕೆ ಬಿಡುಗಡೆಯಾಗಲಿದೆ ಎಂದು ಹೊಂಬಾಳೆ ಫಿಲ್ಮ್ಸ್ ಸಾಮಾಜಿಕ ಜಾಲತಾಣಗಳಲ್ಲಿನ ತನ್ನ ಅಧಿಕೃತ ಖಾತೆಗಳಲ್ಲಿ ಘೋಷಣೆ ಮಾಡಿದೆ. ಇನ್ನು ಚಿತ್ರದ ಕೇರಳ ವಿತರಣೆ ಹಕ್ಕನ್ನು ಪೃಥ್ವಿರಾಜ್ ಪ್ರೊಡಕ್ಷನ್ಸ್ ವಹಿಸಿಕೊಂಡಿದ್ದು, ತಮಿಳುನಾಡಿನ ವಿತರಣೆ ಹಕ್ಕು ರೆಡ್ ಜಿಯಂಟ್ ಸಂಸ್ಥೆಯ ಪಾಲಾಗಿದೆ ಹಾಗೂ ಕರ್ನಾಟಕದಲ್ಲಿ ಹೊಂಬಾಳೆ ಸಂಸ್ಥೆಯೇ ಚಿತ್ರವನ್ನು ವಿತರಿಸಲಿದೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…