ಮುಂಬೈ: ಬಾಲಿವುಡ್ ‘ಬಾಯಿ ಜಾನ್’ ಸಲ್ಮಾನ್ ಖಾನ್ ನಟನೆಯ ‘ಕಿಸಿಕಾ ಬಾಯ್ ಕಿಸಿ ಕಿ ಜಾನ್’ ಚಿತ್ರದ ‘ಯೆಂಟಮ್ಮ’ ಹಾಡು ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದ್ದು, ಸಲ್ಮಾನ್ ಖಾನ್ ಪಕ್ಕಾ ಸೌತ್ ಸ್ಟೈಲ್‌ನಲ್ಲಿ ಪಂಚೆಯುಟ್ಟು ನೃತ್ಯ ಮಾಡಿರುವುದನ್ನು ಕಂಡು ಅವರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಸಲ್ಮಾನ್ ಖಾನ್ ಜೊತೆಗೆ ‘ಆರ್‌ಆರ್‌ಆರ್’ ಖ್ಯಾತಿಯ ನಟ ರಾಮ್ ಚರಣ್ ಹಾಗೂ ವಿಕ್ಟರಿ ವೆಂಕಟೇಶ್ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಮೂವರು ಬಿಳಿ ಪಂಚೆ, ಹಳದಿ ಶರ್ಟ್ ಧರಿಸಿದ್ದು, ಪಕ್ಕಾ ಸೌತ್ ಸ್ಟೈಲ್‌ನಲ್ಲಿ ಮಿಂಚಿದ್ದಾರೆ.
ತೆಲುಗು ಮತ್ತು ಹಿಂದಿ ಸಾಹಿತ್ಯವನ್ನು ಬೆರೆಸಿ ‘ಯೆಂಟಮ್ಮ’ ಹಾಡನ್ನು ರಚಿಸಲಾಗಿದೆ. ಈ ಹಾಡಿನ ಸಂಯೋಜನೆಯನ್ನು ಪಾಯಲ್ ದೇವ್ ಮಾಡಿದ್ದಾರೆ. ಈ ಹಾಡಿಗೆ ಸಾಹಿತ್ಯವನ್ನು ಶಬ್ಬೀರ್ ಅಹಮ್ಮದ್ ರಚನೆ ಮಾಡಿದ್ದು, ವಿಶಾಲ್ ದದ್ಲಾನಿ ಮತ್ತು ಪಾಯಲ್ ದೇವ್ ಹಾಡಿದ್ದಾರೆ. ಜಾನಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ.
ಈ ಹಾಡಿನಲ್ಲಿ ಪೂಜಾ ಹೆಗ್ಡೆ ಅವರು ಹಳ್ಳಿ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಎಪ್ರಿಲ್ 21ಕ್ಕೆ ಬಿಡುಗಡೆಗೊಳ್ಳಲಿದ್ದು, ಅಭಿಮಾನಿಗಳು ನೆಚ್ಚಿನ ನಟನ ಸಿನಿಮಾ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾತುರದಿಂದ ಕಾಯುತ್ತಿದ್ದಾರೆ.
ಪಂಚೆಯಟ್ಟುಕೊಂಡು ಮೂವರು ನಟರು ಪೋಸ್ ನೀಡಿದ ಫೋಟೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ರಾಮ್ ಚರಣ್, ‘ಪರದೆಯ ಮೇಲೆ ಕಾಣಸಿಕೊಂಡ ಅತ್ಯಂತ ಅಮೂಲ್ಯ ಕ್ಷಣಗಳಲ್ಲಿ ಒಂದಾಗಿದೆ. ಲವ್ ಯು ಬಾಯ್‘ ಎಂದು ಬರೆದುಕೊಂಡಿದ್ದಾರೆ.
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…
ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾತನೂರು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ್ ರವಿಕುಮಾರ್…
ಬೆಂಗಳೂರು: ಕರ್ನಾಟಕ ಆಡಳಿತ ಸೇವೆ( ಕೆಎಎಸ್)ಯ ಮುಖ್ಯ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ…
ಹಾಸನ: ವಿಷಕಾರಿ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಜಾವಗಲ್ ಬಳಿಯ ದೊಡ್ಡಘಟ್ಟ ಗ್ರಾಮದಲ್ಲಿ…
ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕರೀಘಟ್ಟ ವೆಂಕಟರಮಣ ಸ್ವಾಮಿಯ ಬ್ರಹ್ಮೋತ್ಸವ ಇಂದು ವೈಭವದಿಂದ ನಡೆಯಿತು. ಜಾತ್ರಾ ಮಹೋತ್ಸವಕ್ಕೆ ಸುತ್ತ ಮುತ್ತ ಇರುವ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ: ನಾಡಿನ ಸುಪ್ರಸಿದ್ಧ ಶ್ರೀ ಕಪ್ಪಡಿ ಜಾತ್ರೆಯಲ್ಲಿ ೨ನೇ ಬಾರಿ ೨೦ ಜೊತೆ…