ಚಿತ್ರ ಮಂಜರಿ

ಸ್ಯಾಂಡಲ್‌ವುಡ್‌ ಸಿನಿಮಾ ಗೂಗಲ್‌ನ ಟಾಪ್‌ 5…

2022ರ ವರ್ಷ ಕನ್ನಡ ಚಿತ್ರರಂಗದ ಪಾಲಿಗೆ ವಿಶೇಷವಾಗಿದೆ. ಈ ವರ್ಷ ಕನ್ನಡದ ಹಲವು ಸಿನಿಮಾಗಳು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿವೆ. ಅದರಲ್ಲೂ ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಹಾಗೂ ರಿಷಬ್​ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾಗಳು ಮಾಡಿದ ಮೋಡಿಗೆ ಸಾಟಿಯೇ ಇಲ್ಲ. ಇಡೀ ವಿಶ್ವವೇ ಕರುನಾಡಿನ ಕಡೆಗೆ ತಿರುಗಿ ನೋಡುವಂತಹ ಸಾಧನೆಯನ್ನು ಈ ಚಿತ್ರಗಳು ಮಾಡಿವೆ. ಈ ಎರಡೂ ಸಿನಿಮಾಗಳು ಮೂಡಿಬಂದಿದ್ದು ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಿಂದ ಎಂಬುದು ವಿಶೇಷ. ಗೂಗಲ್​ ಹುಡುಕಾಟದಲ್ಲಿಯೂ ‘ಕಾಂತಾರ’ ಮತ್ತು ‘ಕೆಜಿಎಫ್​ 2’ ಸಿನಿಮಾಗಳು ಸದ್ದು ಮಾಡಿವೆ. 2022ರಲ್ಲಿ ಜನರು ಅತಿ ಹೆಚ್ಚು ಸರ್ಜ್​ ಮಾಡಿದ ಭಾರತದ ಟಾಪ್ 5 ಸಿನಿಮಾಗಳಲ್ಲಿ ಈ ಎರಡು ಚಿತ್ರಗಳು ಸ್ಥಾನ ಪಡೆದುಕೊಂಡಿವೆ.

ಈ ವರ್ಷ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ. ಇಡೀ ವರ್ಷದ ಆಗುಹೋಗುಗಳನ್ನು ಜನರು ಮೆಲುಕು ಹಾಕುತ್ತಿದ್ದಾರೆ. ಅದೇ ರೀತಿ ಗೂಗಲ್​ ಕೂಡ ತನ್ನ ಕೆಲವು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ವರ್ಷ ಜನರು ಅತಿ ಹೆಚ್ಚು ಹುಡುಕಿದ ಭಾರತೀಯ ಸಿನಿಮಾಗಳ ಪಟ್ಟಿ ಲಭ್ಯವಾಗಿದೆ. 5 ಸಿನಿಮಾಗಳಲ್ಲಿ ಕನ್ನಡದ ಎರಡು ಚಿತ್ರಗಳು ಇವೆ ಎಂಬುದು ವಿಶೇಷ.

ಮೊದಲ ಸ್ಥಾನದಲ್ಲಿ ರಣಬೀರ್​ ಕಪೂರ್​-ಆಲಿಯಾ ಭಟ್​ ಜೋಡಿಯ ‘ಬ್ರಹ್ಮಾಸ್ತ್ರ’ ಸಿನಿಮಾ ಇದೆ. ಈ ಚಿತ್ರ ಕೂಡ ಗಲ್ಲಾಪೆಟ್ಟಿಗೆಯಲ್ಲಿ ಒಳ್ಳೆಯ ಕಮಾಯಿ ಮಾಡಿದೆ. ಸೆಪ್ಟೆಂಬರ್​ 9ರಂದು ಬಿಡುಗಡೆಯಾದ ಈ ಚಿತ್ರಕ್ಕೆ ಅಯಾನ್​ ಮುಖರ್ಜಿ ನಿರ್ದೇಶನವಿದೆ. ಈ ವರ್ಷ ಸೋತು ಸೊರಗಿದ್ದ ಬಾಲಿವುಡ್​ಗೆ​ ಹೊಸ ಚೈತನ್ಯ ನೀಡಿದ ಸಿನಿಮಾ ಇದು.

ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಎರಡನೇ ಸ್ಥಾನ ಪಡೆದುಕೊಂಡಿದೆ. ಮೂರನೇ ಸ್ಥಾನದಲ್ಲಿ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಇದೆ. ನಾಲ್ಕನೇ ಸ್ಥಾನವನ್ನು ‘ಕಾಂತಾರ’ ಚಿತ್ರ ಪಡೆದುಕೊಂಡಿದ್ದರೆ, ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ 5ನೇ ಸ್ಥಾನದಲ್ಲಿದೆ.

ಕನ್ನಡದ ಸಿನಿಮಾಗಳು ಇಂಥ ಸಾಧನೆ ಮಾಡಿರುವುದು ಕರುನಾಡಿನ ಎಲ್ಲರಿಗೂ ಹೆಮ್ಮೆ ತಂದಿದೆ. ಆ ಮೂಲಕ ಕನ್ನಡದ ಗತ್ತು ಇಡೀ ದೇಶಕ್ಕೆ ಗೊತ್ತು ಎಂಬಂತಾಗಿದೆ. ಇಷ್ಟೇ ಅಲ್ಲದೇ, ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಜಾಗತಿಕ ಮಟ್ಟದ ‘ಟಾಪ್​ 10’ ಪಟ್ಟಿಯಲ್ಲಿ 7ನೇ ಸ್ಥಾನ ಪಡೆದುಕೊಂಡು ಹವಾ ಮಾಡುತ್ತಿದೆ.

andolana

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago