2022ರ ವರ್ಷ ಕನ್ನಡ ಚಿತ್ರರಂಗದ ಪಾಲಿಗೆ ವಿಶೇಷವಾಗಿದೆ. ಈ ವರ್ಷ ಕನ್ನಡದ ಹಲವು ಸಿನಿಮಾಗಳು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿವೆ. ಅದರಲ್ಲೂ ಯಶ್ ನಟನೆಯ ‘ಕೆಜಿಎಫ್: ಚಾಪ್ಟರ್ 2’ ಹಾಗೂ ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾಗಳು ಮಾಡಿದ ಮೋಡಿಗೆ ಸಾಟಿಯೇ ಇಲ್ಲ. ಇಡೀ ವಿಶ್ವವೇ ಕರುನಾಡಿನ ಕಡೆಗೆ ತಿರುಗಿ ನೋಡುವಂತಹ ಸಾಧನೆಯನ್ನು ಈ ಚಿತ್ರಗಳು ಮಾಡಿವೆ. ಈ ಎರಡೂ ಸಿನಿಮಾಗಳು ಮೂಡಿಬಂದಿದ್ದು ‘ಹೊಂಬಾಳೆ ಫಿಲ್ಮ್ಸ್’ ಬ್ಯಾನರ್ನಿಂದ ಎಂಬುದು ವಿಶೇಷ. ಗೂಗಲ್ ಹುಡುಕಾಟದಲ್ಲಿಯೂ ‘ಕಾಂತಾರ’ ಮತ್ತು ‘ಕೆಜಿಎಫ್ 2’ ಸಿನಿಮಾಗಳು ಸದ್ದು ಮಾಡಿವೆ. 2022ರಲ್ಲಿ ಜನರು ಅತಿ ಹೆಚ್ಚು ಸರ್ಜ್ ಮಾಡಿದ ಭಾರತದ ಟಾಪ್ 5 ಸಿನಿಮಾಗಳಲ್ಲಿ ಈ ಎರಡು ಚಿತ್ರಗಳು ಸ್ಥಾನ ಪಡೆದುಕೊಂಡಿವೆ.
ಈ ವರ್ಷ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ. ಇಡೀ ವರ್ಷದ ಆಗುಹೋಗುಗಳನ್ನು ಜನರು ಮೆಲುಕು ಹಾಕುತ್ತಿದ್ದಾರೆ. ಅದೇ ರೀತಿ ಗೂಗಲ್ ಕೂಡ ತನ್ನ ಕೆಲವು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ವರ್ಷ ಜನರು ಅತಿ ಹೆಚ್ಚು ಹುಡುಕಿದ ಭಾರತೀಯ ಸಿನಿಮಾಗಳ ಪಟ್ಟಿ ಲಭ್ಯವಾಗಿದೆ. 5 ಸಿನಿಮಾಗಳಲ್ಲಿ ಕನ್ನಡದ ಎರಡು ಚಿತ್ರಗಳು ಇವೆ ಎಂಬುದು ವಿಶೇಷ.
ಮೊದಲ ಸ್ಥಾನದಲ್ಲಿ ರಣಬೀರ್ ಕಪೂರ್-ಆಲಿಯಾ ಭಟ್ ಜೋಡಿಯ ‘ಬ್ರಹ್ಮಾಸ್ತ್ರ’ ಸಿನಿಮಾ ಇದೆ. ಈ ಚಿತ್ರ ಕೂಡ ಗಲ್ಲಾಪೆಟ್ಟಿಗೆಯಲ್ಲಿ ಒಳ್ಳೆಯ ಕಮಾಯಿ ಮಾಡಿದೆ. ಸೆಪ್ಟೆಂಬರ್ 9ರಂದು ಬಿಡುಗಡೆಯಾದ ಈ ಚಿತ್ರಕ್ಕೆ ಅಯಾನ್ ಮುಖರ್ಜಿ ನಿರ್ದೇಶನವಿದೆ. ಈ ವರ್ಷ ಸೋತು ಸೊರಗಿದ್ದ ಬಾಲಿವುಡ್ಗೆ ಹೊಸ ಚೈತನ್ಯ ನೀಡಿದ ಸಿನಿಮಾ ಇದು.
ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಎರಡನೇ ಸ್ಥಾನ ಪಡೆದುಕೊಂಡಿದೆ. ಮೂರನೇ ಸ್ಥಾನದಲ್ಲಿ ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಸಿನಿಮಾ ಇದೆ. ನಾಲ್ಕನೇ ಸ್ಥಾನವನ್ನು ‘ಕಾಂತಾರ’ ಚಿತ್ರ ಪಡೆದುಕೊಂಡಿದ್ದರೆ, ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ 5ನೇ ಸ್ಥಾನದಲ್ಲಿದೆ.
ಕನ್ನಡದ ಸಿನಿಮಾಗಳು ಇಂಥ ಸಾಧನೆ ಮಾಡಿರುವುದು ಕರುನಾಡಿನ ಎಲ್ಲರಿಗೂ ಹೆಮ್ಮೆ ತಂದಿದೆ. ಆ ಮೂಲಕ ಕನ್ನಡದ ಗತ್ತು ಇಡೀ ದೇಶಕ್ಕೆ ಗೊತ್ತು ಎಂಬಂತಾಗಿದೆ. ಇಷ್ಟೇ ಅಲ್ಲದೇ, ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಜಾಗತಿಕ ಮಟ್ಟದ ‘ಟಾಪ್ 10’ ಪಟ್ಟಿಯಲ್ಲಿ 7ನೇ ಸ್ಥಾನ ಪಡೆದುಕೊಂಡು ಹವಾ ಮಾಡುತ್ತಿದೆ.
ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್ ಪ್ರತಿಭಟನೆಗೆ ಕರೆ ನೀಡಿತ್ತು. ಈ…
ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ದೇವಿಯ ಕೃಪೆ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…
ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…