ಹನ್ನೆರೆಡು ವರ್ಷಗಳ ಹಿಂದೆ ತೆರೆಕಂಡಿದ್ದ ಸಂಜು ವೆಡ್ಸ್ ಗೀತಾ ಚಿತ್ರ ತನ್ನ ಹಾಡುಗಳು ಹಾಗೂ ಕಂಟೆಂಟ್ ಮೂಲಕ ಜನರ ಮನ ಗೆದ್ದಿತ್ತು. ಈಗ ಆ ಚಿತ್ರದ ಸೀಕ್ವೇಲ್ ಆಗಿ ಸಂಜು ವೆಡ್ಸ್ ಗೀತಾ-2 ಮೂಡಿಬರುತ್ತಿದೆ. ನಾಗಶೇಖರ್ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಬಹುತೇಕ ಮೊದಲ ಭಾಗದಲ್ಲಿದ್ದ ಕಲಾವಿದರೇ ಈ ಚಿತ್ರದಲ್ಲೂ ಇರುತ್ತಾರೆ. ಫಾರ್ ಎ ಛೇಂಜ್ ರಮ್ಯಾ ಬದಲು ಇಲ್ಲಿ ರಕ್ಷಿತಾ ರಾಮ್ ನಾಯಕಿಯಾಗಿದ್ದಾರೆ. ಅದಕ್ಕೆ ನಾಗಶೇಖರ್ ಕಾರಣವನ್ನೂ ನೀಡಿದರು. ಬೆಂಗಳೂರಿನ ಅಶೋಕಾ ಹೋಟೆಲ್ ನಲ್ಲಿ ಸಂಜು ವೆಡ್ಸ್ ಗೀತಾ-2 ಚಿತ್ರದ ಮುಹೂರ್ತ ಹಾಗೂ ಟೀಸರ್ ಬಿಡುಗಡೆ ಸಮಾರಂಭ ನೆರವೇರಿತು. ಕಾರ್ಯಕ್ರಮದ ಆರಂಭದಲ್ಲಿ ಹಿಂದಿನ ಚಿತ್ರದ ಎವಿ ಪ್ರದರ್ಶನ ಹಾಗೂ ಆ ಚಿತ್ರದ ಟೈಟಲ್ ಟ್ರ್ಯಾಕ್ ಗೆ ನೃತ್ಯ ಮಾಡುವ ಮೂಲಕ ಮೆಲುಕು ಹಾಕಲಾಯಿತು.
ನಾಗಶೇಖರ್ ಮೂವೀಸ್ ಹಾಗೂ ಪವಿತ್ರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಸಹಯೋಗದೊಂದಿಗೆ ಮಹಾನಂದಿ ಕ್ರಿಯೇಶನ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಾಗಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ವರ್ಣರಂಜಿತವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ನಾಗಶೇಖರ್, ನಾನು ಸೀರಿಯಲ್ ಗಳಲ್ಲಿ ಆಕ್ಟ್ ಮಾಡುತ್ತಿರುವಾಗ, ಕಪ್ಪಗಿರುವ ಈ ಹುಡುಗನನ್ನು ಕರೆದು ತಮ್ಮ ನಿರ್ದೇಶನದ ನಿನಗಾಗಿ ಚಿತ್ರದಲ್ಲಿ ಅವಕಾಶ ನೀಡಿದವರು ಎಸ್ ಮಹೇಂದರ್, ಅವರು ಇಂದು ನಮ್ಮ ಚಿತ್ರದ ಟೀಸರ್ ರಿಲೀಸ್ ಮಾಡಿದ್ದು ತುಂಬಾ ಖುಷಿಯಾಗಿದೆ.
ಈ ಸಿನಿಮಾವನ್ನು 5 ವರ್ಷಗಳ ಹಿಂದೆಯೇ ಪ್ರಾರಂಭಿಸಬೇಕಾಗಿತ್ತು. ಆದರೆ ನಾನು ತೆಲುಗು, ತಮಿಳು ಕಡೆ ಹೋಗಿದ್ದರಿಂದ ಆಗಲಿಲ್ಲ. ರಮ್ಯ ಅವರು ಈ ಚಿತ್ರದಲ್ಲೂ ಆಕ್ಟ್ ಮಾಡಬೇಕಿತ್ತು. ಅದರೆ ಅವರು ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಅವರ ಬದಲಾಗಿ ಈ ಪಾತ್ರಕ್ಕೆ ಮೊದಲು ನನ್ನ ಕಣ್ಣಮುಂದೆ ಬಂದದ್ದೇ ರಚಿತಾ ರಾಮ್, ತಮ್ಮ ಅದ್ಭುತವಾದ ಅಭಿನಯದ ಮೂಲಕವೇ ಅವರು ಹೆಸರು ಮಾಡಿದವರು. ನನ್ನ ಚಿತ್ರದಲ್ಲಿ ಈ ಪಾತ್ರಕ್ಕೆ ಜೀವ ತುಂಬುವುದೇ ಅಭಿನಯ. ಇನ್ನು ಹಿಂದಿನ ಚಿತ್ರದಲ್ಲಿದ್ದ ಬಹುತೇಕರು ಇದರಲ್ಲೂ ಇರುತ್ತಾರೆ. ನಾನು ಚಿತ್ರದಲ್ಲಿ ಕಥೆಯ ಜೊತೆ ಹಾಡುಗಳಿಗೂ ಜಾಸ್ತಿ ಪ್ರಾಮುಖ್ಯತೆ ಕೊಡುತ್ತೇನೆ. ಶ್ರೀಧರ್ ಸಂಭ್ರಮ್ ಅವರಿಗೆ ರಾತ್ರಿ 12 ಗಂಟೆಗೆ ಕಾಲ್ ಮಾಡಿ ಹಾಡುಗಳ ಸನ್ನಿವೇಶ ವಿವರಿಸಿದ್ದೇನೆ. ಅವರು ಸೂಪರ್ ಸಾಂಗ್ಸ್ ಕೊಟ್ಟಿದ್ದಾರೆ. ಅದ್ಭುತವಾದ 5 ಹಾಡುಗಳು ಮೂಡಿಬಂದಿವೆ. ಇಂದಿನಿಂದಲೇ ಚಿತ್ರೀಕರಣ ಪ್ರಾರಂಭವಾಗುತ್ತದೆ ಎಂದರು.
ಶ್ರೀನಗರ ಕಿಟ್ಟಿ, ರಚಿತಾ ರಾಮ್ ಅಭಿನಯದ ಹಾಡಿನೊಂದಿಗೆ ಚಿತ್ರೀಕರಣ ಪ್ರಾರಂಭಿಸಲಾಯಿತು. ಮುಹೂರ್ತ ದೃಶ್ಯಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಕ್ಲಾಪ್ ಮಾಡಿದರೆ, ನಾಗಶೇಖರ್ ಅವರ ತಾಯಿ ವರಲಕ್ಷ್ಮಿ ಕ್ಯಾಮೆರಾ ಸ್ವಿಚ್ ಆನ್ ಮಾಡಿದರು. ಈ ಚಿತ್ರವನ್ನು ಪುನೀತ್ ರಾಜಕುಮಾರ್ ಅವರಿಗೆ ಅರ್ಪಣೆ ಮಾಡುವ ಮೂಲಕ ನಾಗಶೇಖರ್, ರಾಜರತ್ನನಿಗೆ ಗೌರವ ಸಲ್ಲಿಸಿದ್ದಾರೆ.
• ಜಿ.ಕೃಷ್ಣ ಪ್ರಸಾದ್ ಕಾವೇರಿ ಬಯಲಿನಲ್ಲಿ ಭತ್ತದ ಕಟಾವು ಶುರುವಾಗಿದೆ. ದೈತ್ಯ ಗಾತ್ರದ ಕಟಾವು ಯಂತ್ರಗಳು ಗದ್ದೆಗೆ ಲಗ್ಗೆ ಇಟ್ಟಿವೆ.…
ರಾಜ್ಯ ಬಿಜೆಪಿಯ ಆಂತರಿಕ ಸಂಘರ್ಷ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಒಂದು ಕಡೆ ಪಕ್ಷಾಧ್ಯಕ್ಷ ವಿಜಯೇಂದ್ರ ಅವರ ಬಣ ಮತ್ತೊಂದು ಕಡೆ…
ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಹೆಸರಿನಲ್ಲಿ ವರ್ಷಕ್ಕೊಮ್ಮೆ ಬೆಳಗಾವಿಯಲ್ಲಿ ನಡೆಸುವ ವಿಧಾನಮಂಡಲ ಅಧಿವೇಶನದಲ್ಲಿ ಕರ್ನಾಟಕದ ಹಿರಿಯರ ಮನೆ ಎಂದೇ ಕರೆಯಲಾಗುವ…
ಸಮ್ಮೇಳನ ಯಶಸ್ಸಿಗೆ ಪ್ರಮುಖ ಪಾತ್ರ ವಹಿಸಿದ ಸಚಿವ ಸಿಆರ್‌ಎಸ್ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಾಥ್ ಬಿ.ಟಿ.ಮೋಹನ್‌ಕುಮಾರ್…
ಸದ್ದು ಮಾಡದ ಕನ್ನಡ ಶಾಲೆಗಳ ಉಳಿವಿನ ಯೋಜನೆ ವಿಷಯ • ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕನ್ನಡ ನಾಡು ನುಡಿಗೆ…
'ಪುನಶ್ಚತನವಾಗಬೇಕಾಗಿರುವ ಸಾಹಿತ್ಯ ಪ್ರಕಾರಗಳು' ಕುರಿತ ವಿಚಾರಗೋಷ್ಠಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಶಾಲಿ ಆಗ್ರಹ ಜಿ.ತಂಗಂ ಗೋಪಿನಾಥಂ ಮಂಡ್ಯ:…