ಸಾಯಿ ಪಲ್ಲವಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರೆ ಎನ್ನುವ ಮಾಹಿತಿ ಇದೆ. ಈ ಹಿಂದೆ ಈ ಪಾತ್ರಕ್ಕೆ ದೀಪಿಕಾ ಪಡುಕೋಣೆ ಹಾಗೂ ಕರೀನಾ ಕಪೂರ್ ಹೆಸರು ಕೇಳಿಬಂದಿತ್ತು. ಆದರೆ ಚಿತ್ರ ನಿರ್ಮಾಪಕರು ಸಾಯಿ ಪಲ್ಲವಿ ಅವರನ್ನು ಅಂತಿಮಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಸೌತ್ ಸೂಪರ್ ಸ್ಟಾರ್ ಸಾಯಿ ಪಲ್ಲವಿ ತಮ್ಮ ಅದ್ಭುತ ಅಭಿನಯದಿಂದ ದೊಡ್ಡ ಹೆಸರು ಮಾಡಿದ್ದಾರೆ. ದಕ್ಷಿಣ ಚಿತ್ರರಂಗದಲ್ಲಿ ಬಹುಬೇಡಿಕೆ ನಟಿಯಾಗಿ ಮಿಂಚುತ್ತಿದ್ದಾರೆ. ಆಯ್ದ ಚಿತ್ರಗಳಲ್ಲಿ ಅದ್ಭುತವಾಗಿ ಅಭಿನಯಿಸುವ ಮೂಲಕ ಯುವಜನತೆ ಮಾತ್ರವಲ್ಲದೇ ಎಲ್ಲ ವರ್ಗದ ಪ್ರೇಕ್ಷಕರನ್ನೂ ತಲುಪಿದ್ದಾರೆ. ಇದೀಗ ಈ ಬ್ಯೂಟಿಫುಲ್ ನಟಿಯ ಮುಂದಿನ ಸಿನಿಮಾಗೆ ಸಂಬಂಧಿಸಿದ ಸುದ್ದಿಯೊಂದು ಸಖತ್ ವೈರಲ್ ಆಗಿದೆ. ಸಾಯಿ ಪಲ್ಲವಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರಂತೆ.
ಬಾಲಿವುಡ್ ಹೀರೋ ರಣ್ಬೀರ್ ಕಪೂರ್ ಜೊತೆ ಸಿನಿಮಾವೊಂದರಲ್ಲಿ ನಟಿಸಲಿದ್ದಾರೆ. ರಣಬೀರ್ ಶ್ರೀರಾಮನ ಪಾತ್ರದಲ್ಲಿ ಕಾಣಿಸಿಕೊಂಡರೆ, ಸಾಯಿ ಪಲ್ಲವಿ ಸೀತೆಯಾಗಿ ಪಾತ್ರ ವಹಿಸಲಿದ್ದಾರೆ. ಈ ಹಿಂದೆ ಈ ಪಾತ್ರಕ್ಕೆ ದೀಪಿಕಾ ಪಡುಕೋಣೆ ಹಾಗೂ ಕರೀನಾ ಕಪೂರ್ ಹೆಸರು ಕೇಳಿ ಬಂದಿತ್ತು. ಆದರೆ ಚಿತ್ರ ನಿರ್ಮಾಪಕರು ಸಾಯಿ ಪಲ್ಲವಿ ಅವರನ್ನು ಅಂತಿಮಗೊಳಿಸಿದ್ದಾರೆ ಎಂದು ವರದಿಯಾಗಿದೆ.ಇನ್ನೂ ಹೃತಿಕ್ ರೋಷನ್ ಈ ಸಿನಿಮಾದಲ್ಲಿ ರಾವಣನ ಪಾತ್ರ ಮಾಡಲಿದ್ದಾರೆ. ರಾಮಾಯಣ ಆಧಾರಿತ ಈ ಸಿನಿಮಾದ ಚಿತ್ರೀಕರಣ ಮುಂದಿನ ವರ್ಷ ಆರಂಭವಾಗಲಿದ್ದು, ಈ ಯೋಜನೆಯ ಅಧಿಕೃತ ವಿವರಗಳು ಶೀಘ್ರದಲ್ಲೇ ಬಹಿರಂಗಗೊಳ್ಳಲಿವೆ.
ಸಮ್ಮೇಳನ ಯಶಸ್ಸಿಗೆ ಪ್ರಮುಖ ಪಾತ್ರ ವಹಿಸಿದ ಸಚಿವ ಸಿಆರ್ಎಸ್ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಾಥ್ ಬಿ.ಟಿ.ಮೋಹನ್ಕುಮಾರ್…
ಸದ್ದು ಮಾಡದ ಕನ್ನಡ ಶಾಲೆಗಳ ಉಳಿವಿನ ಯೋಜನೆ ವಿಷಯ • ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕನ್ನಡ ನಾಡು ನುಡಿಗೆ…
'ಪುನಶ್ಚತನವಾಗಬೇಕಾಗಿರುವ ಸಾಹಿತ್ಯ ಪ್ರಕಾರಗಳು' ಕುರಿತ ವಿಚಾರಗೋಷ್ಠಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಶಾಲಿ ಆಗ್ರಹ ಜಿ.ತಂಗಂ ಗೋಪಿನಾಥಂ ಮಂಡ್ಯ:…
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್ನಾಥ್ಗೌಡ ಹೇಮಂತ್ ಕುಮಾರ್…
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…