ತಮಿಳುನಾಡು : ಕನ್ನಡದ ರಾಜಕುಮಾರ ಹಾಗೂ ಜೇಮ್ಸ್ ಚಿತ್ರದ ಮೂಲಕ ಮನೆಮಾತಾಗಿದ್ದ ಹಿರಿಯ ಬಹುಭಾಷಾ ನಟ ಶರತ್ ಕುಮಾರ್ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶರತ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತಕ್ಷಣವೇ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರು ಡಯಾರಿಯಾ, ಡಿಹೈಡ್ರೇಷನ್‌ನಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
68ನೇ ವರ್ಷ ವಯಸ್ಸಿನ ನಟ ಶರತ್‌ಕುಮಾರ್ ಅವರ ಪತ್ನಿ ರಾಧಿಕಾ ಶರತ್ ಕುಮಾರ್ ಮತ್ತು ಪುತ್ರಿ ವರಲಕ್ಷ್ಮೀ ಅವರು ಈಗಾಗಲೇ ಆಸ್ಪತ್ರೆಗೆ ಆಗಮಿಸಿದ್ದಾರೆ. ಸದ್ಯ ಶರತ್ ಕುಮಾರ್ ಅವರ ಆರೋಗ್ಯ ಸ್ಥಿತಿಯ ಕುರಿತು ಅವರ ಕುಟುಂಬದವರು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಅತ್ತ ಆಸ್ಪತ್ರೆ ಕಡೆಯಿಂದಲೂ ಯಾವುದೇ ಹೆಲ್ತ್ ಬುಲೆಟಿನ್ ಕೂಡ ರಿಲೀಸ್ ಆಗಿಲ್ಲ. ಈ ಹಿಂದೆ ಶರತ್‌ಕುಮಾರ್ ಅವರಿಗೆ ಕೊರೊನಾ ವೈರಸ್ ತಗುಲಿತ್ತು. ಇದೀಗ ಮತ್ತೊಂದು ಗಂಭೀರ ಆರೋಗ್ಯ ಸಮಸ್ಯೆಯಿಂದ ಶರತ್‌ಕುಮಾರ್ ಬಳಲುತ್ತಿದ್ದು, ಶೀಘ್ರವೇ ಅವರು ಗುಣಮುಖರಾಗಲಿ ಎಂದು ಅವರ ಆಪ್ತರು, ಸ್ನೇಹಿತರು, ಅಭಿಮಾನಿಗಳು ಹಾರೈಸಿದ್ದಾರೆ.
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…