Mysore
24
scattered clouds

Social Media

ಶುಕ್ರವಾರ, 02 ಜನವರಿ 2026
Light
Dark

ಹಿರಿಯ ನಿರ್ದೇಶಕ ಭಗವಾನ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರಾದ ಭಗವಾನ್ ಅವರು ಇಂದು (ಡಿ. 5) ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಯದೇವ ಹೃದ್ರೋಗ ಆಸ್ಪತ್ರೆಯ ICUನಲ್ಲಿ ಭಗವಾನ್​ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಭಗವಾನ್​ ಅವರಿಗೆ 89 ವರ್ಷ. ಶ್ರೀನಿವಾಸ ಕೃಷ್ಣ ಅಯ್ಯಂಗಾರ್​ ಭಗವಾನ್ ಅಂದರೆ ನಮಗೆ ಅಷ್ಟು ಬೇಗ ಯಾರು ಅಂತ ಗೊತ್ತಾಗುವುದಿಲ್ಲ. ಚಿತ್ರರಂಗದಲ್ಲಿ ಇವರು ಭಗವಾನ್ ಎಂದೇ ಪ್ರಸಿದ್ಧರು. ಕನ್ನಡ ಚಿತ್ರರಂಗದಲ್ಲಿ ಖ್ಯಾತ ನಿರ್ದೇಶಕರಾಗಿ, ನಿರ್ಮಾಪಕರಾಗಿ ಮತ್ತು ನಟರಾಗಿಯೂ ಇವರು ಗುರುತಿಸಿಕೊಂಡಿದ್ದಾರೆ. ತಮ್ಮ ಹದಿಹರಿಯದ ವಯಸ್ಸಿಲ್ಲಿ ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಬಳಿಕ 1956 ರಲ್ಲಿ ಕಣಗಾಲ್ ಪ್ರಭಾಕರ ಶಾಸ್ತ್ರೀ ಅವರಿಗೆ ಸಹಾಯಕರಾಗಿ ಚಿತ್ರರಂಗ ಪ್ರವೇಶಿಸಿದರು. ನಂತರ 1966 ರಲ್ಲಿ ತೆರೆಕಂಡ ‘ಸಂಧ್ಯಾರಾಗ’ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾದರು. ಬಳಿಕ ನಿರ್ದೇಶಕ ದೊರೈರಾಜ್ ಜೊತೆಗೂಡಿ ಸ್ವತಂತ್ರರಾಗಿ ಚಿತ್ರನಿರ್ದೇಶಿಸಲು ಪ್ರಾರಂಭಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!