Mysore
26
scattered clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡೊಳ್ಳು ಚಿತ್ರ ವೀಕ್ಷಿಸಿದ ಸಿದ್ದೆರಾಮಯ್ಯ

 ನಾನಾ ಕಾರಣಗಳಿಂದ ಚಿತ್ರಪ್ರೇಮಿಗಳನ್ನು ಆವರಿಸಿಕೊಳ್ಳುತ್ತಿರುವ ಡೊಳ್ಳು ಸಿನಿಮಾವನ್ನು ವಿಪಕ್ಷ ನಾಯಕ,  ಸಿದ್ದರಾಮಯ್ಯ ನಿನ್ನೆ (ಮಂಗಳವಾರ) ಬೆಂಗಳೂರಿನ ಒರಾಯನ್ ಮಾಲ್‌ನಲ್ಲಿ ಕಣ್ತುಂಬಿಕೊಂಡು, ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜಕೀಯದ ಕೆಲಸದ ನಡುವೆಯೂ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಅವರು, ಸಿನಿಮಾ ತುಂಬಾ ಚೆನ್ನಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಜನಪದ ಕಲೆಯನ್ನು ಬೆಳೆಸಬೇಕು, ಉಳಿಯಬೇಕು ಎಂಬ ನಿಟ್ಟಿನಲ್ಲಿ ಸಿನಿಮಾ ಮಾಡಿದ್ದಾರೆ. ಕಲೆಗೆ ಜಾತಿ ಧರ್ಮ ಲಿಂಗಭೇದ ಯಾವುದು ಇರುವುದಿಲ್ಲ. ನಾಡಿನ ಸಾಂಪ್ರದಾಯಿಕ ಡೊಳ್ಳು ಬಾರಿಸುವ ಕಲೆಯನ್ನು ಪ್ರಧಾನವಾಗಿರಿಸಿಕೊಂಡು ನಿರ್ಮಿಸಿದ ಈ ಸಿನಿಮಾ ಅತ್ಯಂತ ಸೊಗಸಾಗಿ ಮೂಡಿಬಂದಿದೆ. ಚಿತ್ರ ತಂಡಕ್ಕೆ ನನ್ನ ಶುಭ ಹಾರೈಕೆಗಳು.  ಇಂತಹ ಸಿನಿಮಾಗಳು ಬರಬೇಕು. ಇಡೀ ತಂಡ ಒಳ್ಳೆದಾಗಲಿ ಎಂದು ಶುಭ ಹಾರೈಸಿದ್ದಾರೆ.

ಇನ್ನು ವಿಜೇತ ಸಾಗರ್ ಪುರಾಣಿಕ್ ಚಿತ್ರವನ್ನು ನಿರ್ದೆಶನ ಮಾಡಿದ್ದು, ಕಾರ್ತಿಕ್ ಮಹೇಶ್ ಮತ್ತು ನಿಧಿ ಹೆಗಡೆ ಜೊತೆಗೆ ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ಯ ಸುರೇಶ್​ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ