ನಟ ಚಂದನ್ ಕುಮಾರ್ ಕಿರುತೆರೆ ಮತ್ತು ಸಿನಿಮಾದಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಧಾರಾವಾಹಿಯಲ್ಲೂ ಅವರು ನಟಿಸಿ ಫೇಮಸ್ ಆಗಿದ್ದಾರೆ. ‘ಶ್ರೀಮತಿ ಶ್ರೀನಿವಾಸ್’ ಧಾರಾವಾಹಿಯ ಶೂಟಿಂಗ್ ವೇಳೆ ಚಂದನ್ ಕುಮಾರ್ ಅವರ ಮೇಲೆ ಹಲ್ಲೆ ಆಗಿದೆ. ಸೀರಿಯಲ್ ತಂತ್ರಜ್ಞರ ಜೊತೆ ಚಂದನ್ ಕಿರಿಕ್ ಮಾಡಿಕೊಂಡಿದ್ದು ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ. ಈ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದು ಬಹಳ ದಿನಗಳಾಗಿದ್ದು, ಈಗ ಪ್ರಕರಣ ಬೆಳಕಿಗೆ ಬಂದಿದೆ.
ಯಾವ ಕಾರಣಕ್ಕಾಗಿ ಈ ಹಲ್ಲೆ ನಡೆದಿದೆ ಎಂಬುದು ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಮೊದಲು ಚಂದನ್ ಅವರಿಂದ ಕ್ಯಾಮೆರಾಮ್ಯಾನ್ ಮೇಲೆ ಹಲ್ಲೆ ನಡೆಯಿತು. ಆ ಕಾರಣದಿಂದಲೇ ತಂತ್ರಜ್ಞರು ಚಂದನ್ ವಿರುದ್ಧ ತಿರುಗಿ ಬಿದ್ದರು ಎಂದು ಹೇಳಲಾಗುತ್ತಿದೆ. ಬಳಿಕ ಚಂದನ್ ಕ್ಷಮೆ ಕೇಳಿದರೂ ಕೂಡ ಅಲ್ಲಿದ್ದ ಯಾರೊಬ್ಬರೂ ಸಮಾಧಾನಗೊಂಡಿಲ್ಲ. ಪರಿಸ್ಥಿತಿ ಬಿಡಗಾಯಿಸಿದಾಗ ಕೈಕೈ ಮಿಲಾಯಿಸಿದ್ದಾರೆ.
ಹಲವು ವರ್ಷಗಳಿಂದ ಚಂದನ್ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಸಿನಿಮಾ ಮತ್ತು ಸೀರಿಯಲ್ ಎರಡೂ ಕ್ಷೇತ್ರದಲ್ಲಿ ಅವರು ಹೆಸರು ಗಳಿಸಿದ್ದಾರೆ. ಕನ್ನಡದ ‘ರಾಧಾ ಕಲ್ಯಾಣ’, ‘ಲಕ್ಷ್ಮೀ ಬಾರಮ್ಮ’ ಮುಂತಾದ ಧಾರಾವಾಹಿಯಿಂದ ಅವರು ಮನೆಮಾತಾಗಿದ್ದಾರೆ. ‘ಸಾವಿತ್ರಮ್ಮ ಗಾರಿ ಅಬ್ಬಾಯಿ’ ಮೂಲಕ ತೆಲುಗು ಕಿರುತೆರೆಗೂ ಚಂದನ್ ಕುಮಾರ್ ಎಂಟ್ರಿ ನೀಡಿದ್ದರು. ನಂತರ ‘ಶ್ರೀಮತಿ ಶ್ರೀನಿವಾಸ್’ ಧಾರಾವಾಹಿ ಒಪ್ಪಿಕೊಂಡರು. ಅದೇ ಸೀರಿಯಲ್ ಸೆಟ್ನಲ್ಲಿ ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ.
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…