ಚಿತ್ರ ಮಂಜರಿ

ತೆಲುಗು ಧಾರಾವಾಹಿ ಶೂಟಿಂಗ್‌ ವೇಳೆ ಚಂದನ್‌ ಗೆ ಕಪಾಳಮೋಕ್ಷ

ನಟ ಚಂದನ್​ ಕುಮಾರ್​  ಕಿರುತೆರೆ ಮತ್ತು ಸಿನಿಮಾದಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಧಾರಾವಾಹಿಯಲ್ಲೂ ಅವರು ನಟಿಸಿ ಫೇಮಸ್​ ಆಗಿದ್ದಾರೆ. ‘ಶ್ರೀಮತಿ ಶ್ರೀನಿವಾಸ್​’  ಧಾರಾವಾಹಿಯ ಶೂಟಿಂಗ್​ ವೇಳೆ ಚಂದನ್ ​ಕುಮಾರ್​ ಅವರ ಮೇಲೆ ಹಲ್ಲೆ ಆಗಿದೆ. ಸೀರಿಯಲ್​ ತಂತ್ರಜ್ಞರ ಜೊತೆ ಚಂದನ್​ ಕಿರಿಕ್​ ಮಾಡಿಕೊಂಡಿದ್ದು ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ. ಈ ಘಟನೆಯ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಈ ಘಟನೆ ನಡೆದು ಬಹಳ ದಿನಗಳಾಗಿದ್ದು, ಈಗ ಪ್ರಕರಣ ಬೆಳಕಿಗೆ ಬಂದಿದೆ.

ಯಾವ ಕಾರಣಕ್ಕಾಗಿ ಈ ಹಲ್ಲೆ ನಡೆದಿದೆ ಎಂಬುದು ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಮೊದಲು ಚಂದನ್​ ಅವರಿಂದ ಕ್ಯಾಮೆರಾಮ್ಯಾನ್​ ಮೇಲೆ ಹಲ್ಲೆ ನಡೆಯಿತು. ಆ ಕಾರಣದಿಂದಲೇ ತಂತ್ರಜ್ಞರು ಚಂದನ್​ ವಿರುದ್ಧ ತಿರುಗಿ ಬಿದ್ದರು ಎಂದು ಹೇಳಲಾಗುತ್ತಿದೆ. ಬಳಿಕ ಚಂದನ್​ ಕ್ಷಮೆ ಕೇಳಿದರೂ ಕೂಡ ಅಲ್ಲಿದ್ದ ಯಾರೊಬ್ಬರೂ ಸಮಾಧಾನಗೊಂಡಿಲ್ಲ. ಪರಿಸ್ಥಿತಿ ಬಿಡಗಾಯಿಸಿದಾಗ ಕೈಕೈ ಮಿಲಾಯಿಸಿದ್ದಾರೆ.

ಹಲವು ವರ್ಷಗಳಿಂದ ಚಂದನ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಸಿನಿಮಾ ಮತ್ತು ಸೀರಿಯಲ್​ ಎರಡೂ ಕ್ಷೇತ್ರದಲ್ಲಿ ಅವರು ಹೆಸರು ಗಳಿಸಿದ್ದಾರೆ. ಕನ್ನಡದ ‘ರಾಧಾ ಕಲ್ಯಾಣ’, ‘ಲಕ್ಷ್ಮೀ ಬಾರಮ್ಮ’ ಮುಂತಾದ ಧಾರಾವಾಹಿಯಿಂದ ಅವರು ಮನೆಮಾತಾಗಿದ್ದಾರೆ. ‘ಸಾವಿತ್ರಮ್ಮ ಗಾರಿ ಅಬ್ಬಾಯಿ’ ಮೂಲಕ ತೆಲುಗು ಕಿರುತೆರೆಗೂ ಚಂದನ್​ ಕುಮಾರ್​ ಎಂಟ್ರಿ ನೀಡಿದ್ದರು. ನಂತರ  ‘ಶ್ರೀಮತಿ ಶ್ರೀನಿವಾಸ್​’ ಧಾರಾವಾಹಿ ಒಪ್ಪಿಕೊಂಡರು. ಅದೇ ಸೀರಿಯಲ್​ ಸೆಟ್​ನಲ್ಲಿ ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ.

 

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

17 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

21 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

21 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

21 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

21 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

21 hours ago