ಈಗಾಗಲೇ ಜನರ ಮನ ಗೆದ್ದಿರುವ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾವನ್ನು ನಟ ಕಿಚ್ಚ ಸುದೀಪ್ ಮೆಚ್ಚಿಕೊಂಡಿದ್ದಾರೆ.
ಸಿನಿಮಾ ನೋಡಿದ ಬಳಿಕ ತಮ್ಮ ಅನಿಸಿಕೆಯನ್ನು ಸೋಷಿಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಕಿಚ್ಚ, ಚಿತ್ರದ ಬಗ್ಗೆ ಹೊಗಳಿಕೆಯ ಹೂ ಮಳೆಗರೆದಿದ್ದಾರೆ. ನಟನಾಗಿ ನಿರ್ಮಾಪಕನಾಗಿ ರಕ್ಷಿತ್ ಶೆಟ್ಟಿ ಅವರ ಪ್ರಯತ್ನವನ್ನು ಸುದೀಪ್ ಪ್ರಶಂಸಿಸಿದ್ದಾರೆ. ಅದಷ್ಟೇ ಅಲ್ಲದೇ ನಟಿಮಣಿಯರಾದ ರುಕ್ಮಿಣಿ ವಸಂತ್ ಹಾಗೂ ಚೈತ್ರ ಜೆ ಆಚಾರ್ ಅವರ ನಟನೆಯನ್ನೂ ಸಹ ಮೆಚ್ಚಿಕೊಂಡಿದ್ದಾರೆ.
ಚಿತ್ರದ ಬಗ್ಗೆ ತಮ್ಮ ರಿವ್ಯೂ ಹಂಚಿಕೊಂಡಿರುವ ಅಭಿನಯ ಚಕ್ರವರ್ತಿ ಅತ್ಯುತ್ತಮ ನಟನೆ, ಅತ್ಯುತ್ತಮ ನಿರ್ದೇಶನ,ಅತ್ಯುತ್ತಮ ಛಾಯಾಗ್ರಹಣ. ಇಂತಹ ಸಿನಿಮಾ ಮಾಡಲು ಧೈರ್ಯ ತೋರಿಸಿದ ನಿಮ್ಮನ್ನು ನಾನು ಬಹಳಾ ಗೌರವಿಸುತ್ತೇನೆ. ಹೇಮಂತ್ ರಾವ್ ಅವರು ಅದ್ಭುತ ವಿಷನ್ ಇರುವ ನಿರ್ದೇಶಕ. ಕ್ಯಾಪ್ಟನ್ ಸ್ಥಾನದಲ್ಲಿ ಅವರ ಕೆಲಸ ಪರ್ಫೆಕ್ಟ್ ಆಗಿದೆ. ನಿಮ್ಮ ಹಾಗೂ ನಿಮ್ಮ ತಂಡದ ಬಗ್ಗೆ ಹೆಮ್ಮೆ ಮೂಡಿದೆ. ಕತ್ತೆ ಎಂದು ಬರೆದುಕೊಂಡಿದ್ದಾರೆ.
ನವೆಂಬರ್ 17 ರಂದು ಕನ್ನಡದ ಬಹು ನಿರೀಕ್ಷಿತ ಸಿನಿಮಾ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಬಿಡುಗಡೆಗೊಂಡಿತ್ತು. ಸೆಪ್ಟೆಂಬರ್ 1ರಂದು ಬಿಡುಗಡೆಯಾಗಿದ್ದ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಮೊದಲ ಭಾಗ ಸೈಡ್ ಎ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡು ಬಾಕ್ಸ್ ಆಫೀಸ್‌ನಲ್ಲಿ 20 ಕೋಟಿಗೂ ಹೆಚ್ಚು ಗಳಿಕೆ ಮಾಡಿ ಯಶಸ್ಸು ಸಾಧಿಸಿತ್ತು.
ಕೇವಲ ಕನ್ನಡದಲ್ಲಿ ಮಾತ್ರ ಥಿಯೇಟ್ರಿಕಲ್ ಬಿಡುಗಡೆ ಕಂಡಿದ್ದ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಓಟಿಟಿಯಲ್ಲಿ ಪರಭಾಷೆಗಳಿಗೂ ಸಹ ಡಬ್ ಆಗಿ ಆ ಪ್ರೇಕ್ಷಕರಿಂದಲೂ ಸಹ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡ ಕಾರಣ ಇದೀಗ ಎರಡನೇ ಭಾಗವನ್ನು ಚಿತ್ರತಂಡ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಿಗೂ ಸಹ ಡಬ್ ಮಾಡಿ ಬಿಡುಗಡೆ ಮಾಡಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…