ಚಿತ್ರ ಮಂಜರಿ

ಶ್ರೀದೇವಿಯದ್ದು ಸಹಜ ಸಾವಲ್ಲ : ಪತಿ ಬೋನಿ ಕಪೂರ್​

ಖ್ಯಾತ ನಟಿ ಶ್ರೀದೇವಿ ಅವರ ಸಾವಿನ ಬಗ್ಗೆ ಜನರಿಗೆ ಹಲವು ಅನುಮಾನಗಳಿವೆ. 2018ರ ಫೆಬ್ರವರಿ 24ರಂದು ದುಬೈನಲ್ಲಿ ಅವರು ನಿಧನರಾದರು. ಸ್ಟಾರ್​ ಹೋಟೆಲ್​ನ ಬಾತ್​ಟಬ್​ನಲ್ಲಿ ಮುಳುಗಿ ಅವರು ಕೊನೆಯುಸಿರು ಎಳೆದರು ಎಂಬುದನ್ನು ತಿಳಿದು ಇಡೀ ಚಿತ್ರರಂಗಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತ ಆಯಿತು. ಆ ಘಟನೆ ನಡೆದು ಇಷ್ಟು ವರ್ಷಗಳು ಕಳೆದ ಬಳಿಕ ಮೊದಲ ಬಾರಿಗೆ ಶ್ರೀದೇವಿ ಪತಿ ಬೋನಿ ಕಪೂರ್​ ಅವರು ಮೌನ ಮುರಿದಿದ್ದಾರೆ. ಪತ್ನಿಯ ಸಾವಿನ ಬಗ್ಗೆ ಅವರು ಮಾತನಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತಾವು ಸುದೀರ್ಘವಾದ ವಿಚಾರಣೆಗೆ ಒಳಪಟ್ಟಿರುವುದಾಗಿ ಬೋನಿ ಕಪೂರ್​ ತಿಳಿಸಿದ್ದಾರೆ. ಅಲ್ಲದೇ ಶ್ರೀದೇವಿಯ ಸಾವಿಗೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ದಿ ನ್ಯೂ ಇಂಡಿಯನ್​ಗೆ ನೀಡಿದ ಸಂದರ್ಶನದಲ್ಲಿ ಬೋನಿ ಕಪೂರ್​ ಅವರು ಈ ವಿಚಾರ ತಿಳಿಸಿದ್ದಾರೆ. ಶ್ರೀದೇವಿಯದ್ದು ಸಹಜ ಸಾವಲ್ಲ. ಅದು ಅನಾಹುತದ ಸಾವು. ಈ ಕುರಿತು ವಿಚಾರಣೆ ವೇಳೆ ನಾನು 48 ಗಂಟೆಗಳ ಕಾಲ ಮಾತನಾಡಿದ್ದೆ. ಹಾಗಾಗಿ ಮತ್ತೆ ಮಾತನಾಡುವುದು ಬೇಡ ಎಂದು ನಿರ್ಧರಿಸಿದೆ. ಭಾರತದ ಮಾಧ್ಯಮಗಳಿಂದ ಸಾಕಷ್ಟು ಒತ್ತಡ ಬರುತ್ತಿದೆ ಎಂಬ ಕಾರಣಕ್ಕೆ ಈ ರೀತಿ ವಿಚಾರಣೆಗೆ ಒಳಗಾಗಬೇಕು ಎಂದು ಅಲ್ಲಿನ ಅಧಿಕಾರಿಗಳು ನನಗೆ ಹೇಳಿದರು. ಕೊಲೆ ಪ್ರಯತ್ನ ನಡೆದಿಲ್ಲ ಎಂಬುದು ಅವರಿಗೆ ತಿಳಿಯಿತು. ಸುಳ್ಳು ಪತ್ತೆ ಪರೀಕ್ಷೆ ಸೇರಿದಂತೆ ಅನೇಕ ಟೆಸ್ಟ್​ಗಳಿಗೆ ನಾನು ಒಳಗಾದೆ. ಕೊನೆಗೂ ವರದಿಯಲ್ಲಿ ಅದು ಆ್ಯಕ್ಸಿಡೆಂಟಲ್​ ಸಾವು ಎಂಬುದು ತಿಳಿಯಿತು’ ಎಂದು ಬೋನಿ ಕಪೂರ್ ಹೇಳಿದ್ದಾರೆ.

ಚೆನ್ನಾಗಿ ಕಾಣಬೇಕು ಎಂಬ ಕಾರಣಕ್ಕೆ ಶ್ರೀದೇವಿ ಪಾಲಿಸುತ್ತಿದ್ದ ಡಯೆಟ್​ನಿಂದಾಗಿ ಈ ಸಾವು ಸಂಭವಿಸಿದೆ ಎಂದು ಬೋನಿ ಕಪೂರ್ ಹೇಳಿದ್ದಾರೆ. ಶ್ರೀದೇವಿ ಯಾವಾಗಲೂ ಉಪವಾಸ ಮಾಡುತ್ತಿದ್ದರು. ತೆರೆ ಮೇಲೆ ಚೆನ್ನಾಗಿ ಕಾಣಬೇಕು, ದೇಹದ ಶೇಪ್​ ಚೆನ್ನಾಗಿ ಇರಬೇಕು ಎಂಬ ಕಾರಣಕ್ಕೆ ಅವರು ಈ ರೀತಿ ಡಯೆಟ್​ ಮಾಡುತ್ತಿದ್ದರು. ನನ್ನನ್ನು ಮದುವೆ ಆದಾಗಿನಿಂದ ಹಲವು ಬಾರಿ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಅವರಿಗೆ ಲೋ ಬಿಪಿ ಇದೆ ಅಂತ ವೈದ್ಯರು ಹೇಳುತ್ತಲೇ ಇದ್ದರು ಎಂದು ಬೋನಿ ಕಪೂರ್ ಹೇಳಿದ್ದಾರೆ​.

lokesh

Recent Posts

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

1 hour ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

1 hour ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

5 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

10 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

10 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

10 hours ago