ಚಿತ್ರ ಮಂಜರಿ

ನಟನೆಗೆ ಗುಡ್ ಬೈ ಹೇಳುತ್ತಾರಂತೆ ಸೂಪರ್ ಸ್ಟಾರ್ ರಜನಿಕಾಂತ್

ಚನೈ : ಸೂಪರ್ ಸ್ಟಾರ್ ರಜನಿಕಾಂತ್ ಸದ್ಯ ಜೈಲರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಜೈಲರ್ ಸಿನಿಮಾದಲ್ಲಿ ಬೇರೆ ಬೇರೆ ಭಾಷೆಯ ಸ್ಟಾರ್ಸ್ ಕೂಡ ನಟಿಸಿದ್ದಾರೆ. ಕನ್ನಡದ ಸ್ಟಾರ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೈಲರ್ ಸಿನಿಮಾದಲ್ಲಿ ನಟಿಸುವ ಮೂಲಕ ಮೊದಲ ಬಾರಿಗೆ ರಜನಿಕಾಂತ್ ಜೊತೆ ನಟಿಸುತ್ತಿದ್ದಾರೆ. ಈಗಾಗಲೇ ಟೀಸರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸೂಪರ್ ಸ್ಟಾರ್ ಅವರನ್ನು ಮತ್ತೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಈ ನಡುವೆ ರಜನಿಕಾಂತ್ ಕಡೆಯಿಂದ ಬೇಸರ ಸುದ್ದಿ ವೈರಲ್ ಆಗಿದೆ. ತಲೈವಾ ನಟನೆಗೆ ಗುಡ್ ಬೈ ಹೇಳುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.

ರಜನಿಕಾಂತ್ ಜೈಲರ್ ಸಿನಿಮಾ ಬಳಿಕ ಖ್ಯಾತ ನಿರ್ದೇಶಕ ಲೋಕೇಶ್ ಕನಗರಾಜ್ ಸಾರಥ್ಯ ಮೂಡಿ ಬರುತ್ತಿರುವ ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಲೋಕೇಶ್ ಕನಗರಾಜ್ ಸಿನಿಮಾ ಬಳಿಕ ರಜನಿಕಾಂತ್ ನಿವೃತ್ತಿ ಪಡೆಯುತ್ತಿದ್ದಾರೆ ಎನ್ನುವ ಸುದ್ದಿ ತಮಿಳು ಸಿನಿಮಾರಂಗದಲ್ಲಿ ವೈರಲ್ ಆಗಿದೆ. ಅಂದಹಾಗೆ ರಜನಿಕಾಂತ್ ಬಗ್ಗೆ ಈ ರೀತಿಯ ಸುದ್ದಿ ವೈರಲ್ ಆಗಲು ಕಾರಣವಾಗಿದ್ದು ನಿರ್ದೇಶಕ ಮಿಸ್ಕಿನ್ ಹೇಳಿದ ಮಾತು. ಲೋಕೇಶ್ ಕನಗರಾಜ್ ಅವರ ಜೊತೆಗಿನ ಸಿನಿಮಾವೇ ರಜನಿಕಾಂತ್ ಅವರ ಕೊನೆಯ ಸಿನಿಮಾ ಆಗಲಿದೆ ಎಂದು ಹೇಳಿದ್ದಾರೆ. ಈ ಮಾತು ಈಗ ಸಂಚಲನ ಸೃಷ್ಟಿ ಮಾಡಿದೆ.

ನಿರ್ದೇಶಕ ಮಿಸ್ಕಿನ್ ಹೇಳಿದ ಮಾತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದೆ. ಆದರೆ ರಜನಿಕಾಂತ್ ಅಭಿಮಾನಿಗಳು ಇದನ್ನು ನಂಬಲು ರೆಡಿ ಇಲ್ಲ. ಸೂಪರ್ ಸ್ಟಾರ್ ಅವರನ್ನು ತೆರೆಮೇಲೆ ನೋಡದೆ ಇರಲು ಅಭಿಮಾನಿಗಳಿಗೆ ಸಾಧ್ಯನೆ ಇಲ್ಲ. ಹಾಗಾಗಿ ಇದು ಸುಳ್ಳು ಸುದ್ದಿ ಎಂದು ಹೇಳುತ್ತಿದ್ದಾರೆ. ರಜನಿಕಾಂತ್ ಇಂಥ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅಭಿಮಾನಿಗಳು ಮಾದಿಸುತ್ತಿದ್ದಾರೆ. ಅಲ್ಲದೆ ಇಂಥ ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡುತ್ತಿದ್ದಾರೆ. ಸ್ವತಃ ರಜನಿಕಾಂತ್ ಅವರೇ ಹೇಳುವವರೆಗೂ ಇದನ್ನೆಲ್ಲ ನಂಬಲ್ಲ ಎಂದು ಹೇಳುತ್ತಿದ್ದಾರೆ.

ನಟ ರಜನಿಕಾಂತ್ 171ನೇ ಸಿನಿಮಾಗೆ ಲೋಕೇಶ್ ಕಗರಾಜ್ ಆಕ್ಷನ್ ಕಟ್ ಹೇಳುತ್ತಿದ್ದಾರೆ ಎಂದು ಮಿಸ್ಕಿನ್ ಹೇಳಿದ್ದಾರೆ. 72 ವರ್ಷ ನಟ ಸೂಪರ್‌ಸ್ಟಾರ್ ಅವರ ಮುಂದಿನ ಚಿತ್ರ ಜೈಲರ್ ಆಗಸ್ಟ್ 10ಕ್ಕೆ ರಿಲೀಸ್ ಆಗುತ್ತಿದೆ. ನೆಲ್ಸನ್ ದಿಲೀಪ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾ ಜೊತೆಗೆ ಮಗಳು ಐಶ್ವರ್ಯ ನಿರ್ದೇಶನದ ‘ಲಾಲ್ ಸಲಾಂ’ ಸಿನಿಮಾದಲ್ಲೂ ನಟಿಸಿದ್ದು ವಿಭಿನ್ನ ಗೆಟಪ್ ನಲ್ಲಿ ರಜನಿಕಾಂತ್ ಮೋಡಿ ಮಾಡಿದ್ದಾರೆ.

lokesh

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

4 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

5 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

5 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

6 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

6 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

6 hours ago