Mysore
17
broken clouds

Social Media

ಶನಿವಾರ, 31 ಜನವರಿ 2026
Light
Dark

ಸಿಎಂ ಯೋಗಿ ಆದಿತ್ಯನಾಥ ಜೊತೆ ಜೈಲರ್‌ ವೀಕ್ಷಿಸಿದ ಸೂಪರ್‌ ಸ್ಟಾರ್‌

ಲಕ್ನೋ : ಸೂಪರ್ ಸ್ಟಾರ್ ರಜನಿಕಾಂತ್ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೊತೆ ‘ಜೈಲರ್’ ಚಿತ್ರ ವೀಕ್ಷಿಸಲಿದ್ದಾರೆ. ಸೂಪರ್ ಸ್ಟಾರ್’ ರಜನಿಕಾಂತ್ ಅಭಿನಯದ ‘ಜೈಲರ್’ ಸಿನಿಮಾವು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ.

ಈಗಾಗಲೇ 400 ಕೋಟಿ ರೂಪಾಯಿಗಳಿಗೂ ಅಧಿಕ ಗಳಿಕೆ ಆಗಿದ್ದು, ಹಳೆಯ ದಾಖಲೆಗಳನ್ನೆಲ್ಲ ಬ್ರೇಕ್ ಮಾಡಿ, ಹೊಸ ದಾಖಲೆಗಳನ್ನು ಈ ಸಿನಿಮಾ ಸೃಷ್ಟಿಸಿದೆ. ಈ ಮಧ್ಯೆ ನಟ ರಜನಿಕಾಂತ್ ಅವರು ಲಖನೌಗೆ ಭೇಟಿ ನೀಡಿದ್ದು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಜೊತೆಗೆ ‘ಜೈಲರ್’ ಸಿನಿಮಾವನ್ನು ವೀಕ್ಷಣೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

ಲಖನೌ ಏರ್‌ಪೋರ್ಟ್‌ಗೆ ಬಂದ ನಂತರ ಪ್ರತಿಕ್ರಿಯೆ ನೀಡಿರುವ ನಟ ರಜನಿಕಾಂತ್, ‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ನನ್ನ ಸಿನಿಮಾವನ್ನು ವೀಕ್ಷಿಸುತ್ತಿದ್ದೇನೆ’ ಎಂದು ತಿಳಿಸಿದ್ದಾರೆ. ಜೊತೆಗೆ ‘ಜೈಲರ್‌’ ಸಿನಿಮಾವು ಇಷ್ಟೊಂದು ದೊಡ್ಡ ಯಶಸ್ಸು ಪಡೆದುಕೊಂಡಿರುವುದರ ಬಗ್ಗೆಯೂ ಪ್ರತಿಕ್ರಿಯಿಸಿರುವ ಅವರು, ‘ಎಲ್ಲ ದೇವರ ಆಶೀರ್ವಾದ..’ ಎಂದಿದ್ದಾರೆ.

ಅಂದಹಾಗೆ, ಉತ್ತರ ಪ್ರದೇಶದಲ್ಲಿ ರಜನಿಕಾಂತ್ ಅವರು ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲಿನ ಹಲವು ಧಾರ್ಮಿಕ ಕ್ಷೇತ್ರಗಳಿಗೆ ರಜನಿ ಭೇಟಿ ನೀಡಲಿದ್ದಾರೆ. ಎರಡು ವರ್ಷದ ಬಳಿಕ ಬೆಳ್ಳಿತೆರೆಗೆ ಕಮ್‌ಬ್ಯಾಕ್‌ ಮಾಡಿದ ತಲೈವಾ ಸಿನಿಮಾ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಬೆಂಗಳೂರು ಸೇರಿದಂತೆ ದೇಶದ ಎಲ್ಲೆಡೆ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!