ಲಕ್ನೋ : ಸೂಪರ್ ಸ್ಟಾರ್ ರಜನಿಕಾಂತ್ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೊತೆ ‘ಜೈಲರ್’ ಚಿತ್ರ ವೀಕ್ಷಿಸಲಿದ್ದಾರೆ. ಸೂಪರ್ ಸ್ಟಾರ್’ ರಜನಿಕಾಂತ್ ಅಭಿನಯದ ‘ಜೈಲರ್’ ಸಿನಿಮಾವು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ.
ಈಗಾಗಲೇ 400 ಕೋಟಿ ರೂಪಾಯಿಗಳಿಗೂ ಅಧಿಕ ಗಳಿಕೆ ಆಗಿದ್ದು, ಹಳೆಯ ದಾಖಲೆಗಳನ್ನೆಲ್ಲ ಬ್ರೇಕ್ ಮಾಡಿ, ಹೊಸ ದಾಖಲೆಗಳನ್ನು ಈ ಸಿನಿಮಾ ಸೃಷ್ಟಿಸಿದೆ. ಈ ಮಧ್ಯೆ ನಟ ರಜನಿಕಾಂತ್ ಅವರು ಲಖನೌಗೆ ಭೇಟಿ ನೀಡಿದ್ದು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಜೊತೆಗೆ ‘ಜೈಲರ್’ ಸಿನಿಮಾವನ್ನು ವೀಕ್ಷಣೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
ಲಖನೌ ಏರ್‌ಪೋರ್ಟ್‌ಗೆ ಬಂದ ನಂತರ ಪ್ರತಿಕ್ರಿಯೆ ನೀಡಿರುವ ನಟ ರಜನಿಕಾಂತ್, ‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ನನ್ನ ಸಿನಿಮಾವನ್ನು ವೀಕ್ಷಿಸುತ್ತಿದ್ದೇನೆ’ ಎಂದು ತಿಳಿಸಿದ್ದಾರೆ. ಜೊತೆಗೆ ‘ಜೈಲರ್’ ಸಿನಿಮಾವು ಇಷ್ಟೊಂದು ದೊಡ್ಡ ಯಶಸ್ಸು ಪಡೆದುಕೊಂಡಿರುವುದರ ಬಗ್ಗೆಯೂ ಪ್ರತಿಕ್ರಿಯಿಸಿರುವ ಅವರು, ‘ಎಲ್ಲ ದೇವರ ಆಶೀರ್ವಾದ..’ ಎಂದಿದ್ದಾರೆ.
ಅಂದಹಾಗೆ, ಉತ್ತರ ಪ್ರದೇಶದಲ್ಲಿ ರಜನಿಕಾಂತ್ ಅವರು ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲಿನ ಹಲವು ಧಾರ್ಮಿಕ ಕ್ಷೇತ್ರಗಳಿಗೆ ರಜನಿ ಭೇಟಿ ನೀಡಲಿದ್ದಾರೆ. ಎರಡು ವರ್ಷದ ಬಳಿಕ ಬೆಳ್ಳಿತೆರೆಗೆ ಕಮ್‌ಬ್ಯಾಕ್ ಮಾಡಿದ ತಲೈವಾ ಸಿನಿಮಾ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಬೆಂಗಳೂರು ಸೇರಿದಂತೆ ದೇಶದ ಎಲ್ಲೆಡೆ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮಂಡ್ಯ: ಸಕ್ಕರೆ ನಾಡು ಮಂಡ್ಯ ನಗರಿಯಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು,…
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ,…
ಮಂಡ್ಯ: ರಾಜ್ಯದಲ್ಲಿ ಅತಿಭಾಷೆ ಹೆಚ್ಚು ಕನ್ನಡ ಭಾಷೆ ಮಾತನಾಡುವ ಸ್ಥಳ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮೂರು ದಿನಗಳ ಕಾಲ…
ಬೆಳಗಾವಿ: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ ಎಂದು…
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಅದ್ಧೂರಿಯಾಗಿ ನೆರವೇರಿದ್ದು, ಇದರಲ್ಲಿ ಸುಮಾರು 157 ಕಲಾತಂಡಗಳು ಭಾಗವಹಿಸಿ ಸಮ್ಮೇಳನಕ್ಕೆ ಮೆರಗು…
ಮಂಡ್ಯ: ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ…