ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯಾ ಅವರು ಗೌರಿ ಗಣೇಶ ಹಬ್ಬದಲ್ಲಿ ಸಿಹಿ ಸುದ್ದಿಯೊಂದನ್ನು ಹಂಚಿಕೊಳ್ಳಲಿದ್ದಾರಂತೆ. ಹೌದು ನಟಿ ರಮ್ಯಾ ಅವರು ನಾಳೆ ನಾಡಿನ ಜನತೆಗೆ ಹಾಗೂ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ಹಂಚಿಕೊಳ್ಳಲಿದ್ದಾರಂತೆ. ಈ ಬಗ್ಗೆ ಸ್ವತಃ ರಮ್ಯಾ ಅವರೇ ಟ್ವೀಟ್ ಮಾಡಿದ್ದು,
ನಾಳೆ ಅಂದರೆ ಗಣೇʻಶ ಹಬ್ಬದಂದು ಬೆಳಿಗ್ಗೆ 11.15 ಕ್ಕೆ ದೊಡ್ಡ ಅನೌನ್ಸ್‌ಮೆಂಟ್ ಇದೆಯೆಂದು ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಜೊತೆಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ನಟಿ ರಮ್ಯಾ ಅವರು ಮತ್ತೆ ಚಿತ್ರರಂಗದತ್ತ ಮುಖ ಮಾಡಲಿದ್ದಾರಾ ? ಅವರ ಹೊಸಸಿನಿಮಾ ಯಾವುದು ? ಮದುವೆ ಬಗ್ಗೆ ಸಿಹಿ ಸುದ್ದಿ ನೀಡಲಿದ್ದಾರಾ ? ಎಂಬಿತ್ಯಾದಿ ಪ್ರಶ್ನೆಗಳನ್ನು ಅಭಿಮಾನಿಗಳಲ್ಲಿ ಹುಟ್ಟುಹಾಕಿದೆ.
ಈ ಎಲ್ಲಾ ಕುತೂಹಲದ ಪ್ರಶ್ನೆಗಳಿಗೆ ನಟಿ ರಮ್ಯಾ ಅವರು ನಾಳೆ ಉತ್ತರಿಸಲಿದ್ದಾರೆ. ಅಭಿಮಾನಿಕೆಲವು ದಿನಗಳ ಹಿಂದೆ ನಟ ಕಮ್ ನಿರ್ದೇಶಕ ರಾಜ್ ಬಿ ಶೆಟ್ಟಿ ನಿರ್ದೇಶನದಲ್ಲಿ ಮೋಹಕ ತಾರೆ ಅಭಿನಯಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಅಂತಾ ಹೇಳಲಾಗಿತ್ತು. ಇದೀಗ ರಾಜ್ ಬಿ ಶೆಟ್ಟಿ ರಮ್ಯಾ ಅವರ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳೋದು ಪಕ್ಕಾ ಆಗಿದೆ.
ಮತ್ತೊಂದು ಖುಷಿ ವಿಚಾರ ಅಂದ್ರೆ ರಮ್ಯಾ ನಟಿಸುವುದರ ಜೊತೆಗೆ ಸ್ವತಃ ನಿರ್ಮಾಣ ಮಾಡುತ್ತಿರೋದು. ಈ ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಚಿತ್ರರಂಗದಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡುವ ಕಾಲ ಕೂಡಿ ಬಂದಿದ್ದು, ಅಭಿಮಾನಿಗಳು ಸಂತಸದಿಂದಿದ್ದಾರೆ.