ಚಿತ್ರ ಮಂಜರಿ

ಕುತೂಹಲ ಮೂಡಿಸಿದ ನಟಿ ರಮ್ಯಾ  ಟ್ವೀಟ್‌ : ಅಭಿಮಾನಿಗಳಿಗೆ ನಾಳೆ ನೀಡಲಿರುವ ಸಿಹಿ ಸುದ್ದಿಯಾದರೂ ಏನು ?

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯಾ ಅವರು ಗೌರಿ ಗಣೇಶ ಹಬ್ಬದಲ್ಲಿ ಸಿಹಿ ಸುದ್ದಿಯೊಂದನ್ನು ಹಂಚಿಕೊಳ್ಳಲಿದ್ದಾರಂತೆ. ಹೌದು ನಟಿ ರಮ್ಯಾ ಅವರು ನಾಳೆ ನಾಡಿನ ಜನತೆಗೆ ಹಾಗೂ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ಹಂಚಿಕೊಳ್ಳಲಿದ್ದಾರಂತೆ. ಈ ಬಗ್ಗೆ ಸ್ವತಃ ರಮ್ಯಾ ಅವರೇ ಟ್ವೀಟ್‌ ಮಾಡಿದ್ದು,

ನಾಳೆ ಅಂದರೆ ಗಣೇʻಶ ಹಬ್ಬದಂದು ಬೆಳಿಗ್ಗೆ 11.15 ಕ್ಕೆ ದೊಡ್ಡ ಅನೌನ್ಸ್‌ಮೆಂಟ್‌ ಇದೆಯೆಂದು ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಜೊತೆಗೆ ಹಲವು  ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ನಟಿ ರಮ್ಯಾ ಅವರು ಮತ್ತೆ ಚಿತ್ರರಂಗದತ್ತ ಮುಖ ಮಾಡಲಿದ್ದಾರಾ ?  ಅವರ ಹೊಸಸಿನಿಮಾ ಯಾವುದು ? ಮದುವೆ ಬಗ್ಗೆ ಸಿಹಿ ಸುದ್ದಿ ನೀಡಲಿದ್ದಾರಾ ? ಎಂಬಿತ್ಯಾದಿ ಪ್ರಶ್ನೆಗಳನ್ನು ಅಭಿಮಾನಿಗಳಲ್ಲಿ ಹುಟ್ಟುಹಾಕಿದೆ.

ಈ ಎಲ್ಲಾ ಕುತೂಹಲದ ಪ್ರಶ್ನೆಗಳಿಗೆ ನಟಿ ರಮ್ಯಾ ಅವರು ನಾಳೆ ಉತ್ತರಿಸಲಿದ್ದಾರೆ. ಅಭಿಮಾನಿಕೆಲವು ದಿನಗಳ ಹಿಂದೆ ನಟ ಕಮ್ ನಿರ್ದೇಶಕ ರಾಜ್ ಬಿ ಶೆಟ್ಟಿ ನಿರ್ದೇಶನದಲ್ಲಿ ಮೋಹಕ ತಾರೆ ಅಭಿನಯಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಅಂತಾ ಹೇಳಲಾಗಿತ್ತು. ಇದೀಗ ರಾಜ್ ಬಿ ಶೆಟ್ಟಿ ರಮ್ಯಾ ಅವರ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳೋದು ಪಕ್ಕಾ ಆಗಿದೆ.

ಮತ್ತೊಂದು ಖುಷಿ ವಿಚಾರ ಅಂದ್ರೆ ರಮ್ಯಾ ನಟಿಸುವುದರ ಜೊತೆಗೆ ಸ್ವತಃ ನಿರ್ಮಾಣ ಮಾಡುತ್ತಿರೋದು. ಈ ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಚಿತ್ರರಂಗದಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡುವ ಕಾಲ ಕೂಡಿ ಬಂದಿದ್ದು, ಅಭಿಮಾನಿಗಳು ಸಂತಸದಿಂದಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago