ಬೆಂಗಳೂರು : ಕನ್ನಡ ಚಿತ್ರರಂಗದ ನಟಿ ಮರ್ಯಾ ಅವರು ನಿರ್ಮಾಣ ಮಾಡುತ್ತಿರುವ . ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಕುರಿತು ವಿವಾದವೊಂದು ತಲೆ ಎತ್ತಿದೆ.
ಹೌದು, ನಟಿ ರಮ್ಯಾ ಅವರು . ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಚಿತ್ರೀಕರಣವನ್ನೂ ಮುಗಿಸಲಾಗಿದ್ದು ಬಿಡುಗಡೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆದರೆ ಸಿನಿಮಾ ತೆರೆ ಕಾಣುವ ಮುನ್ನವೇ ಸ್ವಾತಿ ಮುತ್ತಿನ ಮಳೆ ಹನಿಯೇ ಶೀರ್ಷಿಕೆ ನನ್ನದು ಎಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ವಾಣಿಜ್ಯ ಮಂಡಳಿಗೆ ಪತ್ರವೊಂದನ್ನು ಬರೆದಿದ್ದಾರೆ.
. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಶೀರ್ಷಿಕೆ ನನ್ನದು. ನನ್ನ ಸಿನಿಮಾ ಅರ್ಧಕ್ಕೆ ನಿಂತಿದೆ. ಅದನ್ನು ಮುಂದುವರೆಸಬೇಕು. ಹಾಗಾಗಿ ಈ ಶೀರ್ಷಿಕೆಯನ್ನು ಯಾರೂ ಬಳಸದಂತೆ ಕ್ರಮ ತಗೆದುಕೊಳ್ಳಬೇಕೆಂದು ಎಂದು ಲಾಯರ್ ಮೂಲಕ ವಾಣಿಜ್ಯ ಮಂಡಳಿಗೆ ಪತ್ರವೊಂದನ್ನು ಬರೆದಿದ್ದಾರೆ.
ಪತ್ರದಲ್ಲೇನಿದೆ ?
‘ನನ್ನ ಕಕ್ಷಿದಾರರು ನಿರ್ಮಿಸುವ ಮೇಲ್ಕಂಡ ಸ್ವಾತಿ ಮುತ್ತಿನ ಮಳೆ ಹನಿಯೆ’ ಹೆಸರಿನ ಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದು. ಶೇಕಡಾ 80ರಷ್ಟು ಚಿತ್ರೀಕರಣ ಕೂಡ ಮುಗಿದಿದೆ. ಮೇಲ್ಕಂಡ ಚಿತ್ರದ ನಾಯಕ ನಟ ಅಂಬರೀಶ್ ನಿಧನ ಹೊಂದಿ ನಂತರ ಚಿತ್ರದ ಚಿತ್ರೀಕರಣವು ಕಾರಣಾಂತರಗಳಿಂದ ನಿಂತಿದೆ. ನನ್ನ ಕಕ್ಷಿದಾರರು ಹೇಳುವ ಹಾಗೆ ಮೇಲ್ಕಂಡ ಚಿತ್ರ ಶೀರ್ಷಿಕೆ ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನ ಶೀರ್ಷಿಕೆಯಾಗಿರುತ್ತದೆ’ ಎಂದು ಸಿಂಗ್ ಬಾಬು ಪರ ವಕೀಲ ಎಸ್.ಆರ್. ಶ್ರೀನಿವಾಸ್ ಮೂರ್ತಿ ಪತ್ರ ಬರೆದಿದ್ದಾರೆ.
ಅಲ್ಲದೇ, ತಾವು ನಿರ್ಮಾಣ ಮಾಡುವ ಚಿತ್ರಕ್ಕೆ ಮೇಲ್ಕಂಡ ಶೀರ್ಷಿಕೆಯನ್ನು ಅಂದರೆ ಸ್ವಾತಿ ಮುತ್ತಿನ ಮಳೆ ಹನಿಯೇ ಶಿರ್ಷಿಕೆಯನ್ನಾಗಲಿ, ಹಾಡನ್ನಾಗಲು ಯಾವುದೇ ರೀತಿ ಉಪಯೋಗಿಸಲು ಅಥವಾ ನೋಂದಾಯಿಸಲು ನನ್ನ ಕಕ್ಷಿದಾರರ ವಿನಃ ಯಾರಿಗೂ ಯಾವುದೇ ವಿಧವಾದ ಹಕ್ಕು ಇರುವುದಿಲ್ಲ. ಒಂದು ವೇಳೆ ನಾನು ನೀಡಿರುವ ಈ ವಕೀಲರ ನೋಟಿಸಿನ ನಂತರವೂ ನೀವು ಬೇರೆ ನಿರ್ಮಾಪಕರಿಗೆ ಈ ಚಿತ್ರದ ಶೀರ್ಷಿಕೆಯನ್ನು ನೋಂದಾವಣೆ ಮಾಡಿಕೊಡಲು ಮತ್ತು ಚಿತ್ರ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೆ ಆದರೆ, ನನ್ನ ಕಕ್ಷಿದಾರರು ನೊಂದಾಣಿಕೆ ಮಾಡಿರುವ ಶೀರ್ಷಿಕೆಯ ಕೃತಿ ಚೌರ್ಯವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…