ನಾಯಕ ನಟಿಯನ್ನು ಪರಿಚಯಿಸಿದ ಚಿತ್ರತಂಡ
ಮೋಹಕ ತಾರೆ ರಮ್ಯಾ ಅವರ ನಿರ್ಮಾಣ ಸಂಸ್ಥೆ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ ಮತ್ತು ರಾಜ್ ಬಿ.ಶೆಟ್ಟಿ ನಟಿಸಿ, ನಿರ್ದೇಶನ ಹೇಳಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ನಾಯಕಿ ಪಾತ್ರದ ಪರಿಚಯವನ್ನು ಚಿತ್ರ ತಂಡ ಇಂದು (ಸೋಮವಾರ) ಅನಾವರಣ ಮಾಡಿದೆ.
ಇತ್ತೀಚೆಗೆ ಚಿತ್ರೀಕರಣ ಪೂರ್ಣಗೊಳಿಸಿರುವ ಈ ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತಲ್ಲೀನವಾಗಿದೆ. ಇದರ ನಡುವೆ ಇಂದು ‘ಪ್ರೇರಣಾ’ ಎಂಬ ಪಾತ್ರವನ್ನು ಪರಿಚಯ ಮಾಡಿಕೊಂಡಿದೆ. ಪಾತ್ರ ಪರಿಚಯಕ್ಕೆ ಸಿನಿ ಪ್ರೇಕ್ಷಕರು ಫುಲ್ ಮಾರ್ಕ್ಸ್ ನೀಡಿದ್ದಾರೆ.ನಟಿ ಸಿರಿ ರವಿಕುಮಾರ್ ಈ ಚಿತ್ರದಲ್ಲಿ ‘ಪ್ರೇರಣಾ’ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ನಿರ್ದೇಶಕ ರಾಜ್ ಬಿ.ಶೆಟ್ಟಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ‘ಪ್ರೇರಣಾ’ಳನ್ನು ಪರಿಚಯಿಸಿದ್ದಾರೆ. ನೀವು ಎಷ್ಟು ಅದ್ಭುತವಾದ ನಟಿ ಎನ್ನುವುದನ್ನು ಪ್ರೇಕ್ಷಕರಿಗೆ ತೋರಿಸಲು ಕಾತರದಿಂದಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ.
‘ಸಕುಟುಂಬ ಸಮೇತ’, ‘ಆಬ್ರಕಡಾಬ್ರ’ ಸಿನಿಮಾದಲ್ಲಿ ನಟಿಸಿದ್ದ ಸಿರಿ ರವಿಕುಮಾರ್, ಸದ್ಯ ಅಭಿಜಿತ್ ಮಹೇಶ್ ನಿರ್ದೇಶನದ ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲೂ ಬಣ್ಣಹಚ್ಚಿದ್ದಾರೆ. ದಿಗಂತ್, ರಿಷಬ್ ಶೆಟ್ಟಿ, ಅಚ್ಯುತಕುಮಾರ್ ಮುಖ್ಯಪಾತ್ರದಲ್ಲಿ ನಟಿಸಿದ್ದು, ಶೀಘ್ರದಲ್ಲೇ ಈ ಚಿತ್ರ ತೆರೆಗೆ ಬರಲಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…