ಮುಂಬೈ: ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಪಾತಕಿ ಲಾರೆನ್ಸ್ ಬಿಷ್ಣೊಯ್‌ನಿಂದ ಹಾಗೂ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನಿಂದ ಜೀವ ಬೆದರಿಕೆ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಮುಂಬೈ ಪೊಲೀಸರು ಭದ್ರತೆ ಒದಗಿಸಿದ್ದಾರೆ.
ಸೋಮವಾರ ಬೆಳಿಗ್ಗೆಯಿಂದ ಮುಂಬೈ ಪೊಲೀಸರು ಬಾಂದ್ರಾದ ಸಲ್ಮಾನ್ ನಿವಾಸಕ್ಕೆ ಪೊಲೀಸ್ ಭದ್ರತೆಯನ್ನು ಆರಂಭಿಸಿದ್ದಾರೆ.
ಸಲ್ಮಾನ್ ಖಾನ್ ನನ್ನ ಹಾಗೂ ನನ್ನ ಗುಂಪಿನ ಕ್ಷಮೆ ಕೇಳಬೇಕು. ಇಲ್ಲದಿದ್ದರೇ ಸಲ್ಮಾನ್ ಖಾನ್ ಅವರನ್ನು ಶೀಘ್ರದಲ್ಲೇ ಕೊಲ್ಲುತ್ತೇವೆ, ಅವರ ಇಲ್ಲವೇ ಅಹಂ ಇಳಿಸುತ್ತೇವೆ ಎಂದು ಲಾರೆನ್ಸ್ ಬಿಷ್ಣೋಯ್ ಬೆದರಿಕೆ ಹಾಕಿದ್ದ.
ಮತ್ತೊಂದು ಬೆದರಿಕೆ: ದೂರು ದಾಖಲು
ಲಾರೆನ್ಸ್ ಬಿಷ್ಣೋಯ್ ಶುಕ್ರವಾರ ಸಲ್ಮಾನ್ ಖಾನ್‌ಗೆ ಬೆದರಿಕೆ ಸಂದೇಶ ಕಳಿಸಿದ್ದ ನಂತರ ಈಗ ಮತ್ತೊಂದು ಬೆದರಿಕೆ ಪತ್ರ ಸಲ್ಮಾನ್ ಖಾನ್ ಕಚೇರಿಗೆ ಈ ಮೇಲ್ ಮೂಲಕ ಬಂದಿದೆ.
ಅದರಲ್ಲಿ ‘ಸಲ್ಮಾನ್ ನೀನು ಗೋಲ್ಡಿ ಬ್ರಾರ್‌ನ್ನು ಮುಖಾಮುಖಿಯಾಗಿ ಭೇಟಿಯಾಗಬೇಕು. ಇಲ್ಲದಿದ್ದರೇ ಮುಂದಾಗುವ ಅನಾಹುತಕ್ಕೆ ನೀನೆ ಹೊಣೆ.. ಮುಂದಿನ ಸಾರಿ ಖಂಡಿತ’ ಎಂದು ಹೇಳಲಾಗಿದೆ. ಈ ಪತ್ರವನ್ನು ಗೋಲ್ಡಿ ಬ್ರಾರ್ ಸಹಾಯಕ ಕಳಿಸಿದ್ದಾನೆ ಎಂದು ಹೇಳಲಾಗಿದೆ.
ಬೆದರಿಕೆ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ಕಚೇರಿಯ ಸಿಬ್ಬಂದಿ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸಿಧು ಮೂಸೆವಾಲಾ ಹತ್ಯೆ ಪ್ರಕಣದಲ್ಲಿ ಪ್ರಮುಖ ಆರೋಪಿಯೂ ಆಗಿರುವ ಗೋಲ್ಡಿ ಬ್ರಾರ್ ಕೆನಡಾದಲ್ಲಿರುವ ಭಾರತ ಮೂಲದ ಗ್ಯಾಂಗ್‌ಸ್ಟರ್ ಆಗಿದ್ದಾನೆ. ಸದ್ಯ ಪಂಜಾಬ್ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಲಾರೆನ್ಸ್ ಬಿಷ್ಣೊಯ್ ಪಂಜಾಬ್‌ನ ಬತಿಂಡಾದ ಜೈಲಿನಲ್ಲಿದ್ದಾನೆ.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…