ಚಿತ್ರ ಮಂಜರಿ

ತಮಿಳು ನಟ ವಿಜಯ್ ರಾಜಕೀಯ ಪ್ರವೇಶ?

ಚೆನ್ನೈ: ತಮಿಳು ಚಿತ್ರರಂಗದ ಜನಪ್ರಿಯ ನಟ ವಿಜಯ್ ರಾಜಕೀಯಕ್ಕೆ ಪ್ರವೇಶಿಸುತ್ತಾರಾ ಎಂಬುದು ಮತ್ತೊಮ್ಮೆ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಲಂಚವನ್ನು ಸ್ವೀಕರಿಸದೆ ಚುನಾವಣೆಯಲ್ಲಿ ಮತ ಚಲಾಯಿಸಲು ಪೋಷಕರನ್ನು ಒತ್ತಾಯಿಸುವಂತೆ ಮಕ್ಕಳಿಗೆ ಕರೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ವಿಜಯ್ ಹೇಳಿಕೆಯನ್ನು ತಮಿಳುನಾಡಿನ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಸಹ ಸ್ವಾಗತಿಸಿದ್ದಾರೆ.

ಅವರು ಒಳ್ಳೆಯ ವಿಚಾರವನ್ನೇ ಹೇಳಿದ್ದಾರೆ. ನಿಮ್ಮ ಸಮಸ್ಯೆ ಏನು ಎಂದು ವಿಜಯ್ ಹೇಳಿಕೆ ಕುರಿತಾಗಿ ವರದಿಗಾರರು ಕೇಳಿದಾಗ ಉದಯನಿಧಿ ಪ್ರತಿಕ್ರಿಯಿಸಿದ್ದಾರೆ.

ವಿಜಯ್ ರಾಜಕೀಯಕ್ಕೆ ಪ್ರವೇಶಿಸುತ್ತಾರಾ ಎಂದು ಪ್ರಶ್ನಿಸಿದಾಗ, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ರಾಜಕೀಯ ಪ್ರವೇಶಿಸುವ ಹಕ್ಕು ಇದೆ ಎಂದು ಹೇಳಿದ್ದಾರೆ.

ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷ ವಿಡುದ ಚಿರುತೈಗಳ ಕಟ್ಟಿ (ವಿಸಿಕೆ) ಪಕ್ಷದ ಅಧ್ಯಕ್ಷ ತೊಲ್ ತಿರುಮವಲವನ್ ಸಹ ವಿಜಯ್ ಹೇಳಿಕೆಯನ್ನು ಸ್ವಾಗತಿಸಿದ್ದಾರೆ.

ನೀಲಂಗರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 10 ಹಾಗೂ 12ನೇ ತರಗತಿಯಲ್ಲಿ ಗರಿಷ್ಠ ಅಂಕ ಗಳಿಸಿದ ಮಕ್ಕಳನ್ನು ಸನ್ಮಾನಿಸಿದ ವಿಜಯ್, ಚುನಾವಣೆ ಸಮಯದಲ್ಲಿ ಲಂಚ ಪಡೆಯದೇ ಮತ ನೀಡಲು ಪೋಷಕರನ್ನು ಒತ್ತಾಯಿಸಿ, ನೀವೇ ಬದಲಾವಣೆ ಕಾಣಬಹುದು ಎಂದು ಹೇಳಿದ್ದಾರೆ.

ಲಂಚ ಪಡೆಯದೇ ನಾಯಕರನ್ನು ಆಯ್ಕೆ ಮಾಡುವ ಮಹತ್ವವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಹಾಗೇ ಮಾಡಿದಾಗ ನಿಮ್ಮ ವಿದ್ಯಾಭ್ಯಾಸವು ಪೂರ್ಣಗೊಳ್ಳುತ್ತದೆ ಎಂದು ಹೇಳಿದ್ದಾರೆ.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago