ತಮಿಳುನಾಡು: ನಯನತಾರಾ ಹಾಗೂ ವಿಘ್ನೇಶ್ ಶಿವನ್ ದಂಪತಿ ಮದುವೆ ಆದ ನಾಲ್ಕೇ ತಿಂಗಳಿಗೆ ಮಗು ಪಡೆದಿದ್ದಾರೆ. ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ಬಗ್ಗೆ ದಂಪತಿ ಮಾಹಿತಿ ಹಂಚಿಕೊಂಡಿದ್ದಾರೆ. ಈಗ ಇವರು ಮಗು ಪಡೆದ ವಿಚಾರ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಬಾಡಿಗೆ ತಾಯ್ತನದ ವಿಚಾರದಲ್ಲಿ ಸರ್ಕಾರ ಒಂದಷ್ಟು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನಯತಾರಾ ಹಾಗೂ ವಿಘ್ನೇಶ್ ಗಾಳಿಗೆ ತೂರಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಈ ಪ್ರಕರಣದಲ್ಲಿ ತನಿಖೆಗೆ ಆದೇಶಿಸಿದೆ.
ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಾಡಿಗೆ ತಾಯ್ತನ (ನಿಯಂತ್ರಣ) ಕಾಯ್ದೆ ಜಾರಿಗೆ ತರಲಾಗಿತ್ತು. ಈ ಕಾಯ್ದೆ ಪ್ರಕಾರ ಬಾಡಿಗೆ ತಾಯಿಯು ಆರೋಗ್ಯವಾಗಿರಬೇಕು ಹಾಗೂ ಆಕೆಯ ವಯಸ್ಸು 21-35ರ ಅಂತದರಲ್ಲಿ ಇರಬೇಕು. ಆಕೆ ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ಬಾಡಿಗೆ ತಾಯ್ತನವನ್ನು ಆಯ್ಕೆ ಮಾಡಬಹುದು. ಇದರ ಜತೆಗೆ ವಾಣಿಜ್ಯ ಬಾಡಿಗೆ ತಾಯ್ತನದ ಮೇಲೆ ನಿರ್ಬಂಧ ಹೇರಲಾಗಿದೆ. ಅಂದರೆ ಮಗುವನ್ನು ಹೆರುವ ಮಹಿಳೆ ದಂಪತಿಯಿಂದ ಹಣ ಪಡೆಯುವಂತಿಲ್ಲ. ಈ ನಿಯಮಗಳನ್ನು ನಯತಾರಾ ಹಾಗೂ ವಿಘ್ನೇಶ್ ಶಿವನ್ ಪಾಲಿಸಿಲ್ಲ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಈ ಸಂಬಂಧ ಸ್ಪಷ್ಟನೆ ನೀಡಲು ಸೂಚಿಸಿದೆ. ವೈದ್ಯಕೀಯ ಸೇವೆಗಳ ನಿರ್ದೇಶನಾಲಯ ಈ ಸಂಬಂಧ ತನಿಖೆ ನಡೆಸಲಿದೆ.
ಹಲವು ವರ್ಷಗಳ ಕಾಲ ಪರಸ್ಪರ ಪ್ರೀತಿಸಿ ಮದುವೆ ಆದವರು ನಯನತಾರಾ ಹಾಗೂ ವಿಘ್ನೇಶ್ ಶಿವನ್. ನಟಿಯಾಗಿ ನಯನತಾರಾ ಅವರಿಗೆ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ಅದೇ ರೀತಿ, ವಿಘ್ನೇಶ್ ಶಿವನ್ ಅವರು ನಿರ್ದೇಶಕನಾಗಿ ಬ್ಯುಸಿ ಆಗಿದ್ದಾರೆ. ಇವರಿಬ್ಬರು ಬಾಡಿಗೆ ತಾಯಿ ಮೂಲಕ ಮಗು ಪಡೆಯಬಹುದು ಎಂಬ ಅನುಮಾನ ಮೊದಲೇ ಮೂಡಿತ್ತು. ಆ ಬಗ್ಗೆ ಒಂದಷ್ಟು ಸುದ್ದಿಗಳು ಹರಿದಾಡಿದ್ದವು. ಆ ಅನುಮಾನ ಈಗ ನಿಜವಾಗಿದೆ. ಈ ಮಧ್ಯೆ ಅವರು ಸಮಸ್ಯೆಗೆ ಸಿಲುಕಿದ್ದಾರೆ.
ಬಾಡಿಗೆ ತಾಯಿ ಮೂಲಕ ಜನಿಸಿರುವ ಈ ಅವಳಿ ಗಂಡು ಮಕ್ಕಳಿಗೆ ಉಯಿರ್ ಮತ್ತು ಉಳಗಂ ಎಂದು ಹೆಸರು ಇಡಲಾಗಿದೆ. ‘ನಯನ್ ಮತ್ತು ನಾನು ಅಪ್ಪ-ಅಮ್ಮ ಆಗಿದ್ದೇವೆ. ನಮಗೆ ಅವಳಿ ಗಂಡು ಮಕ್ಕಳು ಜನಿಸಿದ್ದಾರೆ. ನಮ್ಮ ಪ್ರಾರ್ಥನೆ, ಹಿರಿಯರ ಆಶೀರ್ವಾದವು ಈ ಮಕ್ಕಳ ರೂಪದಲ್ಲಿ ಸಿಕ್ಕಿದೆ. ನಮ್ಮ ಉಯಿರ್ ಮತ್ತು ಉಳಗಂ ಮೇಲೆ ನಿಮ್ಮ ಆಶೀರ್ವಾದ ಇರಲಿ’ ಎಂದು ವಿಘ್ನೇಶ್ ಶಿವನ್ ಪೋಸ್ಟ್ ಮಾಡಿದ್ದರು.
ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…