ಚಿತ್ರ ಮಂಜರಿ

ಬಾಡಿಗೆ ತಾಯ್ತನದ ನಿಯಮ ಉಲ್ಲಂಘಿಸಿರುವ ನಯನ ತಾರಾ ದಂಪತಿಗೆ ತಮಿಳುನಾಡು ಸರ್ಕಾರ ಸ್ಪಷ್ಟನೆ ನೀಡಲು ಸೂಚನೆ

ತಮಿಳುನಾಡು: ನಯನತಾರಾ ಹಾಗೂ ವಿಘ್ನೇಶ್ ಶಿವನ್ ದಂಪತಿ ಮದುವೆ ಆದ ನಾಲ್ಕೇ ತಿಂಗಳಿಗೆ ಮಗು ಪಡೆದಿದ್ದಾರೆ. ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ಬಗ್ಗೆ ದಂಪತಿ ಮಾಹಿತಿ ಹಂಚಿಕೊಂಡಿದ್ದಾರೆ. ಈಗ ಇವರು ಮಗು ಪಡೆದ ವಿಚಾರ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಬಾಡಿಗೆ ತಾಯ್ತನದ ವಿಚಾರದಲ್ಲಿ ಸರ್ಕಾರ ಒಂದಷ್ಟು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನಯತಾರಾ ಹಾಗೂ ವಿಘ್ನೇಶ್  ಗಾಳಿಗೆ ತೂರಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಈ ಪ್ರಕರಣದಲ್ಲಿ ತನಿಖೆಗೆ ಆದೇಶಿಸಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಾಡಿಗೆ ತಾಯ್ತನ (ನಿಯಂತ್ರಣ) ಕಾಯ್ದೆ ಜಾರಿಗೆ ತರಲಾಗಿತ್ತು. ಈ ಕಾಯ್ದೆ ಪ್ರಕಾರ ಬಾಡಿಗೆ ತಾಯಿಯು ಆರೋಗ್ಯವಾಗಿರಬೇಕು ಹಾಗೂ ಆಕೆಯ ವಯಸ್ಸು 21-35ರ ಅಂತದರಲ್ಲಿ ಇರಬೇಕು. ಆಕೆ ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ಬಾಡಿಗೆ ತಾಯ್ತನವನ್ನು ಆಯ್ಕೆ ಮಾಡಬಹುದು. ಇದರ ಜತೆಗೆ ವಾಣಿಜ್ಯ ಬಾಡಿಗೆ ತಾಯ್ತನದ ಮೇಲೆ ನಿರ್ಬಂಧ ಹೇರಲಾಗಿದೆ. ಅಂದರೆ ಮಗುವನ್ನು ಹೆರುವ ಮಹಿಳೆ ದಂಪತಿಯಿಂದ ಹಣ ಪಡೆಯುವಂತಿಲ್ಲ.  ಈ ನಿಯಮಗಳನ್ನು ನಯತಾರಾ ಹಾಗೂ ವಿಘ್ನೇಶ್ ಶಿವನ್ ಪಾಲಿಸಿಲ್ಲ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಈ ಸಂಬಂಧ ಸ್ಪಷ್ಟನೆ ನೀಡಲು ಸೂಚಿಸಿದೆ. ವೈದ್ಯಕೀಯ ಸೇವೆಗಳ ನಿರ್ದೇಶನಾಲಯ ಈ ಸಂಬಂಧ ತನಿಖೆ ನಡೆಸಲಿದೆ.

ಹಲವು ವರ್ಷಗಳ ಕಾಲ ಪರಸ್ಪರ ಪ್ರೀತಿಸಿ ಮದುವೆ ಆದವರು ನಯನತಾರಾ ಹಾಗೂ ವಿಘ್ನೇಶ್​ ಶಿವನ್​. ನಟಿಯಾಗಿ ನಯನತಾರಾ ಅವರಿಗೆ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ಅದೇ ರೀತಿ, ವಿಘ್ನೇಶ್​ ಶಿವನ್​ ಅವರು ನಿರ್ದೇಶಕನಾಗಿ ಬ್ಯುಸಿ ಆಗಿದ್ದಾರೆ. ಇವರಿಬ್ಬರು ಬಾಡಿಗೆ ತಾಯಿ ಮೂಲಕ ಮಗು ಪಡೆಯಬಹುದು ಎಂಬ ಅನುಮಾನ ಮೊದಲೇ ಮೂಡಿತ್ತು. ಆ ಬಗ್ಗೆ ಒಂದಷ್ಟು ಸುದ್ದಿಗಳು ಹರಿದಾಡಿದ್ದವು. ಆ ಅನುಮಾನ ಈಗ ನಿಜವಾಗಿದೆ. ಈ ಮಧ್ಯೆ ಅವರು ಸಮಸ್ಯೆಗೆ ಸಿಲುಕಿದ್ದಾರೆ.

ಬಾಡಿಗೆ ತಾಯಿ ಮೂಲಕ ಜನಿಸಿರುವ ಈ ಅವಳಿ ಗಂಡು ಮಕ್ಕಳಿಗೆ ಉಯಿರ್​ ಮತ್ತು ಉಳಗಂ ಎಂದು ಹೆಸರು ಇಡಲಾಗಿದೆ. ‘ನಯನ್​ ಮತ್ತು ನಾನು ಅಪ್ಪ-ಅಮ್ಮ ಆಗಿದ್ದೇವೆ. ನಮಗೆ ಅವಳಿ ಗಂಡು ಮಕ್ಕಳು ಜನಿಸಿದ್ದಾರೆ. ನಮ್ಮ ಪ್ರಾರ್ಥನೆ, ಹಿರಿಯರ ಆಶೀರ್ವಾದವು ಈ ಮಕ್ಕಳ ರೂಪದಲ್ಲಿ ಸಿಕ್ಕಿದೆ. ನಮ್ಮ ಉಯಿರ್​ ಮತ್ತು ಉಳಗಂ ಮೇಲೆ ನಿಮ್ಮ ಆಶೀರ್ವಾದ ಇರಲಿ’ ಎಂದು ವಿಘ್ನೇಶ್​ ಶಿವನ್​ ಪೋಸ್ಟ್​ ಮಾಡಿದ್ದರು.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago