ಮುಂಬೈ: ತೆಲುಗು ನಟ ನಾನಿ ಅಭಿಯನದ ಪ್ಯಾನ್ ಇಂಡಿಯಾ ಸಿನಿಮಾ ‘ದಸರಾ’ ಏಪ್ರಿಲ್ 27ರಂದು ಒಟಿಟಿಯಲ್ಲಿ ಬಿಡುಗಡೆಯಾಗಲಿದೆ.
ಈ ಕುರಿತು ನೆಟ್‌ಫ್ಲಿಕ್ಸ್ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯನ್ನು ಹಂಚಿಕೊಂಡಿದೆ.
‘ಈಗ ಪಟಾಕಿಗಳ ಸದ್ದು ಕೇಳಿಸುವ ಸಮಯ ಏಕೆಂದರೆ ಈ ವರ್ಷದ ಆರಂಭದಲ್ಲಿ ತೆರೆ ಕಂಡಿದ್ದ ‘ದಸರಾ’ ಚಿತ್ರವು ಇದೀಗ ಇದೇ 27ರಂದು ಒಟಿಟಿಯಲ್ಲಿ ಬರಲಿದೆ ಎಂದು ನೆಟ್‌ಫ್ಲಿಕ್ಸ್ ಇನ್‌ಸ್ಟಾಗ್ರಾಮ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.
‘ದಸರಾ’ವನ್ನು ಶ್ರೀಕಾಂತ್ ಒಡೆಲಾ ನಿರ್ದೇಶಿಸಿದ್ದು, ಚಿತ್ರದಲ್ಲಿ ಹಳ್ಳಿಯ ಸೊಗಡನ್ನು ಬಿಂಬಿಸಲಾಗಿದೆ.
ದಸರಾ ಚಿತ್ರವು ಮಾರ್ಚ್ 30ರಂದು ತೆಲುಗು, ತಮಿಳು, ಮಲಯಾಳಂ, ಕನ್ನಡ ಸೇರಿದಂತೆ ಹಿಂದಿ ಭಾಷೆಯಲ್ಲಿ ಬಿಡುಗಡೆಗೊಂಡಿತ್ತು. ಚಿತ್ರವು ವಿಶ್ವದಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ ₹100 ಕೋಟಿ ಗಳಿಕೆ ಕಂಡಿದೆ.
‘ದಸರಾ’ ಚಿತ್ರದಲ್ಲಿ ಕೀರ್ತಿ ಸುರೇಶ್, ದೀಕ್ಷಿತ್ ಶೆಟ್ಟಿ, ಶೈನ್ ಟಾಮ್ ಚಾಕೋ, ಸಮುದ್ರಕನಿ, ಸಾಯಿ ಕುಮಾರ್ ಮತ್ತು ಪೂರ್ಣಾ ಕೂಡ ನಟಿಸಿದ್ದಾರೆ.
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
50 ವರ್ಷಗಳ ದೂರದೃಷ್ಟಿಯ ಡಿಪಿಆರ್ ಸಿದ್ಧ ಆಗಬೇಕು • ಭಾಮಿ ವಿ ಶೆಣೈ, ಮೈಸೂರು ಗ್ರಾಹಕರ ಪರಿಷತ್ ಮೈಸೂರು ಜಿಲ್ಲಾ…
ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು;…
ಬೆಂಗಳೂರು: ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ರೂ. ಮೊತ್ತದ 10 ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ…
ಮೈಸೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದು…