ಹೈದರಾಬಾದ್: ಕನ್ನಡದ ಸ್ಟಾರ್ ನಟ ಯಶ್ ‘ಕೆಜಿಎಫ್ 2’ ತೆರೆಕಂಡ ಬಳಿಕ ಅವರು ದೊಡ್ಡ ಬ್ರೇಕ್ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಯಶ್ ತೆಲುಗಿನ ದಿಲ್ ರಾಜು ಬ್ಯಾನರ್ ಅಡಿಯಲ್ಲಿ ನಟಿಸುತ್ತಿದ್ದಾರೆ.
ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ನಿರ್ಮಾಣ ಸಂಸ್ಥೆಯ ಮೂಲಕ ದಿಲ್ ರಾಜು ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ದಳಪತಿ ವಿಜಯ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ವಾರಿಸು’ ಬಾಕ್ಸ್ ಆಫೀಸ್ನಲ್ಲಿ 300+ ಕೋಟಿ ರೂಪಾಯಿ ಗಳಿಕೆ ಮಾಡಿತು.
ಯಶ್ ಮುಂದಿನ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಯಶ್ ಜೊತೆ ದಿಲ್ ರಾಜು ಸಿನಿಮಾ ಮಾಡುವುದು ಖಚಿತವಾಗಿದೆ. ಆದರೆ ಯಶ್ ಅವರ 19ನೇ ಅಥವಾ 20ನೇ ಸಿನಿಮಾವೇ? ಎಂಬುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಯಶ್ ಅವರ 19ನೇ ಚಿತ್ರಕ್ಕೆ ದಿಲ್ ರಾಜು ಬಂಡವಾಳ ಹಾಕುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಇತ್ತೀಚೆಗೆ ಟ್ವಿಟರ್ನಲ್ಲಿ ಆಸ್ಕ್ ಮಿ ಎನಿಥಿಂಗ್ ಸೆಷನ್ ನಡೆಸಲಾಯಿತು. ಈ ವೇಳೆ ಯಶ್ ಅಭಿಮಾನಿಯೊಬ್ಬರು ‘ಯಶ್ ಜೊತೆ ಸಿನಿಮಾ ನಿರೀಕ್ಷಿಸಬಹುದೇ’ ಎಂದು ದಿಲ್ ರಾಜುಗೆ ಪ್ರಶ್ನೆ ಕೇಳಿದ್ದರು. ಇದಕ್ಕೆ ದಿಲ್ ರಾಜು ಪರವಾಗಿ ಉತ್ತರಿಸಿರುವ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಸಂಸ್ಥೆ ‘ಹೌದು’ ಎನ್ನುವ ಉತ್ತರ ನೀಡಿದೆ.
ದಿಲ್ ರಾಜು ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಸದ್ಯ ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…