ತಿರುವನಂತಪುರ: ಕೇರಳದ ಜನಪ್ರಿಯ ಸಂಗೀತ ತಂಡ ʼತೈಕ್ಕುಡಂ ಬ್ರಿಜ್ʼನ ಅನುಮತಿ ಪಡೆಯದೆ ಇತ್ತೀಚೆಗೆ ಬಿಡುಗಡೆಯಾದ ಕನ್ನಡದ ಸೂಪರ್‌ಹಿಟ್ ಚಲನಚಿತ್ರ ‘ಕಾಂತಾರ’ದ ‘ವರಾಹ ರೂಪಂ’ ಹಾಡನ್ನು ಪ್ರದರ್ಶಿಸದಂತೆ ಕೇರಳದ ನ್ಯಾಯಾಲಯವೊಂದು ತಡೆ ನೀಡಿದೆ.
ಇನ್‌ಸ್ಟಾಗ್ರಾಮ್‌ನಲ್ಲಿ ನೀಡಿರುವ ಹೇಳಿಕೆ ಪ್ರಕಾರ ತನ್ನ ‘ನವರಸಂ’ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದ್ದು ಹಾಡಿಗೆ ತಡೆ ನೀಡುವಂತೆ ಕೋರಿ ʼತೈಕ್ಕುಡಂ ಬ್ರಿಜ್ʼ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೋರಿಕ್ಕೋಡ್ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಈ ಆದೇಶ ನೀಡಿದರು.
ನಿರ್ಮಾಪಕ, ನಿರ್ದೇಶಕ, ಸಂಗೀತ ಸಂಯೋಜಕರು ಮಾತ್ರವಲ್ಲದೇ ಆನ್‌ಲೈನ್ ಸಿನಿಮಾ ವೇದಿಕೆಗಳಾದ ಅಮೆಜಾನ್, ಸ್ಪಾಟಿಫೈ, ಯೂಟ್ಯೂಬ್, ವಿಂಕ್ ಮ್ಯೂಸಿಕ್, ಜಿಯೋಸಾವನ್ ಮತ್ತಿತರರು ತಂಡದ ಅನುಮತಿ ಇಲ್ಲದೇ ʼವರಾಹ ರೂಪಂʼ ಹಾಡನ್ನು ಪ್ರದರ್ಶಿಸದಂತೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದು ಸಂಗೀತ ತಂಡದ ಇನ್‌ಸ್ಟಾಗ್ರಾಂ ಪೋಸ್ಟ್ ತಿಳಿಸಿದೆ.
ಸೆ. 30ರಂದು ಬಿಡುಗಡೆಯಾದ ರಿಷಬ್ ಶೆಟ್ಟಿ ಅಭಿನಯದ ಬ್ಲಾಕ್ ಬಸ್ಟರ್ ಕನ್ನಡ ಚಲನಚಿತ್ರ ಕಾಂತಾರ ಮತ್ತು ಅದರ ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್ ಅನತಿ ಕಾಲದಲ್ಲಿಯೇ ‘ವರಾಹ ರೂಪಂ’ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆಯ ಆರೋಪ ಎದುರಿಸಿದರು.
ಐದು ವರ್ಷಗಳ ಹಿಂದೆ ಬಿಡುಗಡೆಯಾದ ‘ನವರಸಂ’ ಎಂಬ ಹಾಡನ್ನು ʼವರಾಹ ರೂಪಂʼ ಗೀತೆ ಹೋಲುತ್ತದೆ ಎಂದು ಆರೋಪಿಸಿದ ʼತೈಕ್ಕುಡಂ ಬ್ರಿಜ್ʼ ಕೂಡಲೇ ಸಾಮಾಜಿಕ ಜಾಲತಾಣಗಳ ಮೂಲಕ ತನಗೂ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ ಮತ್ತು ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿತು.
ನಮ್ಮ ನವರಸಂ ಮತ್ತು ವರಾಹ ರೂಪಂ ಆಡಿಯೋ ವಿಚಾರದಲ್ಲಿ ಅನೇಕ ಅನಿವಾರ್ಯ ಹೋಲಿಕೆಗಳು ಇದ್ದುದರಿಂದ ಹಕ್ಕುಸ್ವಾಮ್ಯ ಕಾಯಿದೆಯ ಘೋರ ಉಲ್ಲಂಘನೆಯಾಗಿದೆ. ನಮ್ಮ ದೃಷ್ಟಿಯಲ್ಲಿ ಸ್ಫೂರ್ತಿ ಮತ್ತು ಕೃತಿಚೌರ್ಯಕ್ಕೂ ನಡುವಿನ ಗೆರೆ ಭಿನ್ನ ಮತ್ತು ನಿರ್ವಿವಾದಿತವಾಗಿದ್ದು ಇದಕ್ಕೆ ಕಾರಣರಾದ ಸಿನಿಮಾ ತಂಡದ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರುತ್ತೇವೆ. ಹಾಡನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಜೊತೆಗೆ ಸಿನಿಮಾದ ಸೃಜನಶೀಲ ತಂಡ ತನ್ನದೇ ಮೂಲ ಕೃತಿ ಎಂಬಂತೆ ಹಾಡನ್ನು ಬಿಡುಗಡೆ ಮಾಡಿದೆ ಎಂದು ಬ್ರಿಜ್‌ನ ಇನ್‌ಸ್ಟಾಗ್ರಾಂ ಪೋಸ್ಟ್ ವಿವರಿಸಿತ್ತು.
ಐದು ವರ್ಷಗಳ ಹಿಂದೆ ಮಾತೃಭೂಮಿ ಕಪ್ಪಾ ಟಿವಿಯ ಯುಟ್ಯೂಬ್ ವಾಹಿನಿಯಲ್ಲಿ ಬಿಡುಗಡೆಯಾದ ʼನವರಸಂʼ ಗೀತೆಯನ್ನು ಈವರೆಗೆ ಸುಮಾರು 53 ಲಕ್ಷ ಬಾರಿ ವೀಕ್ಷಿಸಲಾಗಿದೆ. ಕಳೆದ 9 ದಿನಗಳ ಹಿಂದೆ ʼಹೊಂಬಾಳೆ ಫಿಲಂಸ್ʼನ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾದ ʼವರಾಹ ರೂಪಂʼ ಈಗಾಗಲೇ 1.7 ಕೋಟಿ ವೀಕ್ಷಣೆ ಪಡೆದಿದೆ. ʼತೈಕ್ಕುಡಂ ಬ್ರಿಜ್ʼ ಪರ ವಕೀಲ ಸತೀಶ್ ಮೂರ್ತಿ ವಾದ
ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…
ಮಹಾದೇಶ್ ಎಂ ಗೌಡ ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…
ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ…
ಬೆಂಗಳೂರು: ಜೆಡಿಎಸ್ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…