ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಜೈಲರ್ ಸಿನಿಮಾ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಚಿತ್ರಕ್ಕೆ ಟೈಟಲ್ ಸಂಕಷ್ಟ ಎದುರಾಗಿತ್ತು. ಈ ಸಿನಿಮಾ ಮೂರು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದ್ದು, ಈ ಸಂದರ್ಭದಲ್ಲಿ ಮಲಯಾಳಂ ನಿರ್ದೇಶಕರೊಬ್ಬರು ಟೈಟಲ್ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದರು.
ಮಲಯಾಳಂನಲ್ಲಿ ಈಗಾಗಲೇ ನಿರ್ದೇಶಕ ಸಕ್ಕಿರ್ ಮಡತ್ತಿಲ್ಲ ಜೈಲರ್ ಹೆಸರಿನಲ್ಲಿ ಸಿನಿಮಾ ಮಾಡಿದ್ದಾರೆ. ಅದು ಕೂಡ ಬಿಡುಗಡೆಗೆ ಸಿದ್ಧವಾಗಿತ್ತು. ಮಲಯಾಳಂನಲ್ಲಿ ರಜನಿ ಜೈಲರ್ ಸಿನಿಮಾ ಕೂಡ ಬಿಡುಗಡೆ ಆಗುತ್ತಿರುವುದರಿಂದ, ಮಲಯಾಳಂನಲ್ಲಿ ಟೈಟಲ್ ಬದಲಾಯಿಸಿ ರಿಲೀಸ್ ಮಾಡುವಂತೆ ಅವರು ಮನವಿ ಮಾಡಿಕೊಂಡಿದ್ದರು. ಆದರೆ, ಅದು ಆಗುವುದಿಲ್ಲ ಎಂದು ಸನ್ ಪಿಕ್ಚರ್ ನಿರ್ಮಾಣ ಸಂಸ್ಥೆ ಉತ್ತರ ಬರೆದಿತ್ತು.
ಈಗ ಸಕ್ಕಿರ್ ಮಡತ್ತಿಲ್ಲ ತಮಿಳಿನ ಜೈಲರ್ ಸಿನಿಮಾದ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಜೊತೆಗೆ ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ರಿಲೀಸ್ ದಿನವೇ ಮಲಯಾಳಂನಲ್ಲಿ ತಮ್ಮ ಜೈಲರ್ ಚಿತ್ರವನ್ನು ರಿಲೀಸ್ ಮಾಡುವುದಾಗಿ ಘೋಷಿಸಿದ್ದಾರೆ. ಆಗಸ್ಟ್ 10ಕ್ಕೆ ತಮ್ಮ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ.
ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ಜೈಲರ್ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್ ದಿಗ್ಗಜರು ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿರುವ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದೆ.
ಸನ್ ಪಿಕ್ಚರ್ ನಿರ್ಮಾಣ ಮಾಡಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶಿಸಿದ್ದಾರೆ. ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಶಿವರಾಜ್‌ಕುಮಾರ್ ವಿಶೇಷ ಪಾತ್ರದಲ್ಲಿ ನಟಿಸಿರೋದು ಕುತೂಹಲ ಕೆರಳಿಸಿದೆ. ಇನ್ನು ಬಾಲಿವುಡ್ ನಟ ಜಾಕಿ ಶ್ರಾಫ್, ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್, ಟಾಲಿವುಡ್ ನಟ ಸುನಿಲ್, ನಾಗಬಾಬು, ನಟಿ ರಮ್ಯಾ ಕೃಷ್ಣ, ತಮನ್ನಾ ಭಾಟಿಯಾ ನಟಿಸಿದ್ದು, ಸಿನಿಪ್ರಿಯರಿಗೆ ಇವರೆಲ್ಲರನ್ನೂ ಒಂದೇ ಸಿನಿಮಾದಲ್ಲಿ ನೋಡುವ ಅವಕಾಶ ಸಿಗಲಿದೆ.
ಅಣ್ಣಾತ್ತೆ ಬಳಿಕ ರಜನಿ ನಟಿಸಿರುವ 169ನೇ ಸಿನಿಮಾ ಜೈಲರ್. ತಲೈವ ಹೊಸ ಸಿನಿಮಾ ಎಂಟ್ರಿಗೆ ಕಾದು ಕುಳಿತಿರುವ ಅಭಿಮಾನಿಗಳು ಹಬ್ಬ ಮಾಡಲು ಸಜ್ಜಾಗಿದ್ದಾರೆ. ರಾಕ್ ಸ್ಟಾರ್ ಅನಿರುದ್ಧ್ ರವಿಚಂದರ್ ಸಂಗೀತ ನಿರ್ದೇಶನದ ಜೈಲರ್ ಸಿನಿಮಾವನ್ನೂ ಚೆನ್ನೈ, ಮಂಗಳೂರು, ಹೈದರಾಬಾದ್, ಕೇರಳ ಸೇರಿದಂತೆ ಹಲವೆಡೆ ಶೂಟಿಂಗ್ ನಡೆಸಲಾಗಿದೆ. ಸ್ಯಾಂಪಲ್ಸ್ ಮೂಲಕ ಭಾರಿ ಕ್ರೇಜ್ ಹೆಚ್ಚಿಸಿರುವ ರಜನಿಕಾಂತ್ ಸಿನಿಮಾ ಆಗಸ್ಟ್ 10ಕ್ಕೆ ಥಿಯೇಟರ್ ಗೆ ಎಂಟ್ರಿ ಕೊಡಲಿದೆ.
ಒಟ್ಟು ಮೂರು ಭಾಷೆಗಳಲ್ಲಿ ಏಕಕಾಲಕ್ಕೆ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಮೂರು ಭಾಷೆಯ ಕಲಾವಿದರು ಚಿತ್ರದಲ್ಲಿದ್ದಾರೆ. ಇದೇ ಮೊದಲ ಬಾರಿಗೆ ಕನ್ನಡದ ಶಿವರಾಜ್ ಕುಮಾರ್, ತಮಿಳಿನ ಸೂಪರ್ ಸ್ಟಾರ್ ಜೊತೆ ತೆರೆ ಹಂಚಿಕೊಂಡಿರುವುದು ಸಹಜವಾಗಿಯೇ ಅವರ ಅಭಿಮಾನಿಗಳಿಗೆ ಸಂಭ್ರಮ ತಂದಿದೆ.
ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…
ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…
ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…
ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್…
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…
ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…